• Sat. Mar 2nd, 2024

PLACE YOUR AD HERE AT LOWEST PRICE

ಕೆಜಿಎಫ್:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ ಎನ್‍ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಾರ್ಚ್ 1ನೇ ತಾರೀಖಿನಿಂದ ಸರ್ಕಾರಿ ನೌಕರರು ಕೆಲಸಕ್ಕೆ ಗೈರು ಹಾಜರಿಯಾಗುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಲ್.ನರಸಿಂಹಮೂರ್ತಿ ತಿಳಿಸಿದರು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಮುಷ್ಕರದ ಕರಪತ್ರಗಳನ್ನು ನೌಕರರಿಗೆ ನೀಡಿ ಮಾತನಾಡಿ, ಕಳೆದ ಎರಡು ದಿನಗಳ ಹಿಂದೆ ನಡೆದ ರಾಜ್ಯ ಕಾರ್ಯಕಾರಿಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ರಾಜ್ಯದ ಸಮಸ್ತ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಮಾರ್ಚ್-1ರಿಂದ   ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರಕ್ಕೆ ಬೆಂಬಲವನ್ನು ಸೂಚಿಸಲು ನೌಕರರ ಮನವೊಲಿಸಬೇಕೆಂದು

ತೀರ್ಮಾನ ತೆಗೆದುಕೊಂಡಿದ್ದು, ಅದರಂತೆ ಇಂದು ಎಲ್ಲಾ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ನ್ಯಾಯಯುತವಾದ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು,ದಿನಾಂಕ:01.07.2022ರಿಂದ ಪೂರ್ವಾನ್ವಯವಾಗುವಂತೆ ಶೇ 40 ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದರು.

ಇದಲ್ಲದೇ ಪಂಜಾಬ್, ರಾಜಸ್ಥಾನ, ಛತ್ತೀಸ್‍ಘಡ, ಜಾರ್ಖಂಡ್, ಹಿಮಾಚಲಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಎನ್‍ಪಿಎಸ್‍ನ್ನು ರದ್ದುಗೊಳಿಸಿ ಒಪಿಎಸ್ ಪದ್ಧತಿಯನ್ನು ಜಾರಿಗೊಳಿಸಲು ಕ್ರಮ ವಹಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ರವಿಪ್ರಕಾಶ್, ಖಜಾಂಚಿ ಕೃಷ್ಣಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್‍ಬಾಬು, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಶ್ರೀನಿವಾಸ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಬಾಬು ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You missed

error: Content is protected !!