ಕೆಜಿಎಫ್:ರಾಷ್ಟ್ರೀಯ ಭ್ರಷ್ಟ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ ಕ್ಷೇತ್ರಕ್ಕೆ ಮುಕ್ತಿ ನೀಡಲು ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸಿ ಎಂದು ಕೆಜಿಎಫ್ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಗಗನ ಸುಕನ್ಯಾ ಮನವಿ ಮಾಡಿದರು.
ಅವರು ಬೇತಮಂಗಲದ ಬಸ್ ನಿಲ್ಧಾಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೊರಕೆ ಚಳುವಳಿಗೆ ಚಾಲನೆ ನೀಡಿ ಮಾತನಾಡಿ, ಕೆಜಿಎಫ್ ಚಿನ್ನದ ನಾಡಿನಲ್ಲಿ ರಾಷ್ಟ್ರೀಯ ಪಕ್ಷಗಳಿಂದ ಯಾವುದೇ ಅಭಿವೃದ್ಧಿ ಕಾಣದೆ, ಕ್ಷೇತ್ರ ಅನೇಕ ಸಮಸ್ಯೆಗಳ ತಾಣವಾಗಿದೆ ಎಂದು ಆರೋಪಿಸಿದರು.
ದೇಶದ ರಾಜದಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಅರವಿಂದ್ ಕೇಜ್ರಿವಾಲ್ ರ ನೇತೃತ್ವದಲ್ಲಿ ಉತ್ತಮ ಜನಪರ ಆಡಳಿತ ನೀಡುತ್ತಿದೆ, ಅದೇ ರೀತಿಯಲ್ಲಿ ಅಭಿವೃದ್ಧಿ ಬಯಸಿರುವ ಕರ್ನಾಟಕ ರಾಜ್ಯದ ಜನ ಆಮ್ ಆದ್ಮಿ ಪಾರ್ಟಿಗೆ ಒಂದು ಅವಕಾಶ ನೀಡಲಿದ್ದಾರೆ ಎಂದರು.
ಕೆಜಿಎಫ್ ಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ನಿತ್ಯ ಬೆಂಗಳೂರಿಗೆ ಪ್ರಯಾಣಿಸುವ ಪರದಾಟವನ್ನು ತಪ್ಪಿಸುವ ಯೋಜನೆ ರೂಪಿಸಿಕೊಂಡಿದ್ದೇವೆ. ಈಗಾಗಲೇ ಕೆಜಿಎಫ್ ಕ್ಷೇತ್ರದ ಸಂಪೂರ್ಣ ಮಾಹಿತಿಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಂದ ಹಾಗೂ ಸಾರ್ವಜನಿಕರಿಂದ ಪಡೆದುಕೊಂಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ಸುರೇಶ್ ಬಾಲಕೃಷ್ಣ, ಕೋಲಾರ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ರಮೇಶ್, ಮುಖಂಡರಾದ ಪ್ರತಾಫ್, ನಾಗೇಶ್, ಲೋಕೇಶ್, ಸುನಂದ ಮೊದಲಾದವರಿದ್ದರು.