• Thu. Apr 25th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಆಕಾಶ್ ಆಸ್ಪತ್ರೆ, ಆಕಾಶ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ಹಾಗೂ ದೋಣಿಮಡಗುನಲ್ಲಿ ಗ್ರಾಮ ಪಂಚಾಯಿತಿ ಮುಖಂಡರ ಸಮ್ಮುಖದಲ್ಲಿ ಉಚಿತ ಆರೋಗ್ಯ ತಪಾಸಣ ಶಿಬಿರವನ್ನ ಹಮ್ಮಿಕೊಳ್ಳಲಾಗಿತ್ತು.

ಕೋಲಾರ ಜಿಲ್ಲೆಯ ಗಡಿ ಬಂಗಾರಪೇಟೆ ತಾಲ್ಲೂಕಿನ ದೋಣಿಮಡಗು ಗ್ರಾಮಪಂಚಾಯಿತಿಯಲ್ಲಿ ಗ್ರಾಮೀಣ ಭಾಗದ ಮುಖಂಡರ ಆಸಕ್ತಿಯಿಂದ ಈ ಆರೋಗ್ಯ ಶಿಬಿರವನ್ನ ಹಮ್ಮಿಕೊಳ್ಳಲಾಗಿತ್ತು. ಗಡಿ ಗ್ರಾಮಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಉಚಿತ ಆರೋಗ್ಯ ಶಿಬಿರವನ್ನ ಬೆಂಗಳೂರು ಮೂಲದ ಆಕಾಶ್ ಆಸ್ಪತ್ರೆ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಿಬಿರದಲ್ಲಿ ನುರಿತ ವೈದ್ಯರ ತಂಡ ಭಾಗಿಯಾಗಿದ್ದು, ಕಾಮಸಮುದ್ರಂ ಭಾಗದ ನೂರಾರು ಹಿರಿಯರು ಹಾಗೂ ಮಹಿಳೆಯರು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿದ್ದರು. ಅಲ್ಲದೆ ತಮ್ಮ ಆರೋಗ್ಯ ಸಮಸ್ಯೆಗಳನ್ನ ವೈದ್ಯರ ಬಳಿ ತಿಳಿಸಿ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳನ್ನ ಪಡೆದುಕೊಂಡರು.

ದೋಣಿಮಡಗು ಗ್ರಾಮ ಪಂಚಾಯತಿ ಸದಸ್ಯರಾದ ಎಂ.ವಿ.ಸಂತೋಷ, ಶ್ರೀರಾಮ್, ಬಸಪ್ಪ, ವೆಂಕಟೇಶ್, ಮುಖಂಡರಾದ ಶಂಕರ್.ವಿ, ಮುರಳಿ, ಮಂಜುನಾಥ್ ಎಸ್, ವಿನೋಧ್, ತಿಮ್ಮರಾಯ ಸ್ವಾಮಿ,ರಾಮಭೂಷಣ್,ಖಲೀಲ್ ,ಕೃಷ್ಣಪ್ಪ, ಪಂಚಾಯತ ಕಾರ್ಯದರ್ಶಿ ಚಿಕ್ಕಪ್ಪಯ್ಯ ಸಾಕರಸನಹಳ್ಳಿ ಮಂಜುನಾಥ್ ಮುಂತಾದ ಮುಖಂಡರು ಕಾರ್ಯಕ್ರಮದ ಉಸ್ತುವಾರಿ ವಹಿಸಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!