• Thu. May 2nd, 2024

ಮಾ.೧ರಿಂದ ನೌಕರರ ಅನಿರ್ಧಿಷ್ಠ ಮುಷ್ಕರ-ಆರೋಗ್ಯ ಇಲಾಖೆ ನೌಕರರ ಬೆಂಬಲ ತುರ್ತು ಚಿಕಿತ್ಸೆ,ಐಸಿಯುಗೆ ವಿನಾಯಿತಿ-ಜಿಲ್ಲಾಸ್ಪತ್ರೆಯೂ ಬಂದ್-ಜಿ.ಸುರೇಶ್‌ಬಾಬು

PLACE YOUR AD HERE AT LOWEST PRICE

ಏಳನೇ ವೇತನ ಆಯೋಗದ ವರದಿ ಜಾರಿ, ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.೧ ರಿಂದ ನಡೆಸುತ್ತಿರುವ ಅನಿರ್ಧಿಷ್ಟ ಮುಷ್ಕರಕ್ಕೆ ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ತುರ್ತು ಚಿಕಿತ್ಸೆ,ಐಸಿಯು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಲಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದರು.

ಕೋಲಾರ ನಗರದ ಜಿಲ್ಲಾಸ್ಪತ್ರೆ ಮುಂಭಾಗ ಸೋಮವಾರ ಜಿಲ್ಲಾಸ್ಪತ್ರೆಯ ಮುಂಭಾಗ ವೈದ್ಯರು, ಶುಶ್ರೂಷಕರು ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾ ನೌಕರರು ಮುಷ್ಕರಕ್ಕೆ ಪೂರ್ವಭಾವಿಯಾಗಿ ಸಭೆ ನಡೆಸಿ ನೌಕರರ ಸಂಘದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ಘೋಷಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.

ಐಸಿಯು ಹಾಗೂ ತುರ್ತು ಚಿಕಿತ್ಸೆಗೆ ವಿನಾಯತಿ ನೀಡಿದ್ದು, ಅವರೂ ಸಹಾ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ, ಇದು ನಮ್ಮ ಹಾಗೂ ನಮ್ಮ ಕುಟುಂಬಗಳ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಎಲ್ಲಾ ನೌಕರರು ಒಮ್ಮತದಿಂದ ಈ ಹೋರಾಟಕ್ಕೆ ಧುಮುಕಿದ್ದಾರೆ, ಯಾವುದೇ ಒತ್ತಡ,ಬೆದರಿಕೆಗೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದರು.

ಆರೋಗ್ಯ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದ ಅವರು, ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಈ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸಂಘದ ಅಧ್ಯಕ್ಷ ಷಡಕ್ಷರಿ ಸೂಚನೆಯಂತೆ ಎಲ್ಲಾ ಇಲಾಖೆಗಳ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ಎನ್.ಮಂಜುನಾಥ್,ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ರಾವ್ ಅಧ್ಯಕ್ಷತೆಯಲ್ಲಿ ೭ನೇ ವೇತನ ಆಯೋಗ ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ಕೃತ ವರದಿ ಸಿದ್ದಪಡಿಸಿ ಸಲ್ಲಿಸಿದ್ದರೂ ಸರ್ಕಾರ ಬಜೆಟ್‌ನಲ್ಲಿ ನೌಕರರ ಬೇಡಿಕೆಗಳಿಗೆ ಸ್ಪಂದಿಸುವ ಪ್ರಸ್ತಾಪ ಮಾಡದಿರುವುದು ನೋವುಂಟು ಮಾಡಿದೆ ಎಂದರು.

ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷೆ ಹಾಗೂ ನೌಕರರ ಸಂಘದ ಸಹಕಾರ್ಯದರ್ಶಿ ವಿಜಯಮ್ಮ, ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ನಡೆಸುತ್ತಿರುವ ಈ ಹೋರಾಟದಲ್ಲಿ ಆರೋಗ್ಯ ಇಲಾಖೆ ನೌಕರರು ಮುಂಚೂಣಿಯಲ್ಲಿರುತ್ತೇವೆ ಯಾವುದೇ ಕಾರಣಕ್ಕೂ ಬೇಡಿಕೆ ಈಡೇರದೇ ಕರ್ತವ್ಯಕ್ಕೆ ತೆರಳದಿರಲು ನಿರ್ಧರಿಸಿದ್ದೇವೆ ಎಂದರು.

ನೌಕರರ ಸಂಘದ ಉಪಾಧ್ಯಕ್ಷ ನಂದೀಶ್, ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದೆ ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್, ಡಿಹೆಚ್‌ಒ ಡಾ.ಜಗದೀಶ್, ನೌಕರರ ಸಂಘದ ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ,ಗೌರವಾಧ್ಯಕ್ಷ ರವಿಚಂದ್ರ, ನಿಕಟಪೂರ್ವ ಅಧ್ಯಕ್ಷ ಕೆ.ಬಿ.ಅಶೋಕ್,ಖಜಾಂಚಿ ವಿಜಯ್, ಜಿಲ್ಲಾಸ್ಪತ್ರೆಯ ಆರ್‌ಎಂಒ ಡಾ.ಬಾಲಸುಂದರ್, ಡಾ.ಪುಷ್ಪಲತಾ, ಡಾ.ಶ್ರೀನಾಥ್‌ರೆಡ್ಡಿ, ಡಾ.ಶಿಲ್ಪಶ್ರೀ, ಡಾ.ಅಫೀಸ್, ಆರೋಗ್ಯ ಇಲಾಖೆಯ ಚಂದ್ರಕಲಾ, ಶಿವಾರೆಡ್ಡಿ, ಮುಖ್ಯ ಪ್ರಯೋಗಾಲಯ ತಂತ್ರಜ್ಞ ನಾರಾಯಣಪ್ಪ,ಜಿಲ್ಲಾಸ್ಪತ್ರೆಯ ವಿವಿಧ ವಿಭಾಗಗಳ ಪದಾಧಿಕಾರಿಗಳಾದ ಮಂಜುನಾಥ್,ಮಹೇಶ್, ಅಬ್ದುಲ್ ಷಫಿ, ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ನಾರಾಯಣಸ್ವಾಮಿ,ನೌಕರರ ಸಂಘದ ಅನಿಲ್, ಶ್ರೀರಾಮ್ ಮತ್ತಿತರರು ಹಾಜರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!