ಶ್ರೀನಿವಾಸಪುರ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಜುಲೈ ಒಂದು 2022 ರಿಂದ ಜಾರಿಗೆ ಬರುವಂತೆ ಶೇಕಡ 40% ವೇತನ ಹೆಚ್ಚಳ ಸೌಲಭ್ಯ ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷ ನಾಗರಾಜ್ ತಿಳಿಸಿದರು.
ಸರ್ಕಾರಿ ಆದೇಶ ಹೋರಡಿಸಿರುವ ಮೂಲಕ ಅನುಷ್ಠಾನಗೊಳಿಸುವುದು NPS ರದ್ದು ಪಡಿಸಿ OPS ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸರ್ಕಾರಿ ನೌಕರರು ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಬಗ್ಗೆ ತೀರ್ಮಾನಿಸಲಾಗಿದ್ದು ಈ ಕುರಿತು ಶ್ರೀನಿವಾಸಪುರ ಪಟ್ಟಣದ ನೌಕರರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತಾಲ್ಲೂಕು ಅಧ್ಯಕ್ಷ ನಾಗರಾಜ್ ಎಲ್ಲಾ ನೌಕರರು ಮನೆಯಲ್ಲಿಯೇ ಇದ್ದು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟಿಸಬೇಕು.
ಸರ್ಕಾರಿ ನೌಕರರ ಬೇಡಿಕೆಗಳು ಕುರಿತು ಸರ್ಕಾರಕ್ಕೆ ಬಿಸಿ ಮುಟ್ಟಿಸುವಂತಹ ಕೆಲಸವನ್ನು ಮಾಡಬೇಕು ಯಾವುದೇ ಕಾರಣಕ್ಕೂ ರಸ್ತೆಗಳಿಗೆ ಬಂದು ಹೋರಾಟ ಮಾಡುವುದಾಗಲಿ ಅಥವಾ ಸಾರ್ವಜನಿಕರಿಗೆ ತೊಂದರೆ ಮಾಡುವ ಕೆಲಸಗಳು ನಾವು ಮಾಡುವುದಿಲ್ಲ ನಮ್ಮ ಬೇಡಿಕೆಗಳು ಈಡೇರುವ ತನಕ ನಾವು ಅನಿರ್ದಿಷ್ಟ ಅವಧಿ ಮುಷ್ಕರ ಮುಂದುವರಿಸುತ್ತೇವೆ ಎಂದರು.
ಎಲ್ಲಾ ನೌಕರರು ಒಗ್ಗಟ್ಟಿನಲ್ಲಿ ಮುಷ್ಕರ ಮುಂದುವರಿಸಬೇಕು ಎಂದು ಸೂಚನೆ ನೀಡಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿ ಸರ್ಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ನಾಗರಾಜ್,ವೇಣುಗೋಪಾಲ್,ರಘುನಾಥ ರೆಡ್ಡಿ, ಆನಂದ್,ಅಪ್ಪುರ್ ಮಂಜುನಾಥ್ ಸೇರಿ ಹಲವು ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಭಾಗವಹಿಸಿದ್ದರು.