• Wed. Apr 24th, 2024

ಸ್ವಾಭಿಮಾನಿ ಕೋಲಾರ ನಿರ್ಮಾಣಕ್ಕಾಗಿ, ಸಾಮಾಜಿಕ ನ್ಯಾಯದ ಪ್ರತಿಪಾಧನೆಗಾಗಿ ಜೆಡಿಎಸ್ ಪಕ್ಷ ಬೆಂಬಲಿಸಿ-ಜೆಡಿಎಸ್ ಯುವ ಮುಖಂಡ ಕುರುಗಲ್ ಗಿರೀಶ್

PLACE YOUR AD HERE AT LOWEST PRICE

ಸ್ವಾಭಿಮಾನಿ ಕೋಲಾರ ನಿರ್ಮಾಣಕ್ಕಾಗಿ, ಸಾಮಾಜಿಕ ನ್ಯಾಯದ ಪ್ರತಿಪಾಧನೆಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕಾದ ಅನಿವಾರ್ಯವಿದೆ ಎಂದು ಜೆಡಿಎಸ್ ಪಕ್ಷದ ಯುವ ಮುಖಂಡ ಕುರುಗಲ್ ಗಿರೀಶ್ ಅಭಿಪ್ರಾಯ ವ್ಯಪಡಿಸಿದರು.

ತಾಲ್ಲೂಕಿನ ವೇಮಗಲ್ ಹೋಬಳಿಯ ಕುರುಗಲ್ ಗೇಟ್ ಬಳಿ ಅಯೋಜಿಸಲಾಗಿದ್ದ ಬೃಹತ್ ಸೇರ್ಪಡೆ ಕಾರ್ಯಕ್ರಮದಲ್ಲಿ ತಮ್ಮ ಅಪಾರ ಬೆಂಬಲಿಗರೊoದಿಗೆ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡು ಮಾತನಾಡಿದರು.

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕೋಲಾರದಲ್ಲಿ ಸಮಾಜ ಸೇವಕ ಸಿ.ಎಂ.ಆರ್. ಶ್ರೀನಾಥ್ ರವರ ಜನಪರ ಕಾಳಜಿಯನ್ನು ಒಪ್ಪಿ, ಜೆಡಿಎಸ್ ಪಕ್ಷವನ್ನು ಸೇರಿದ್ದೇವೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಮ್ಮ ಎಲ್ಲಾ ಕಾರ್ಯಕರ್ತರೂ ವೇಮಗಲ್ ಸುತ್ತಮುತ್ತಲ ಎಲ್ಲಾ ಗ್ರಾಮಗಳಲ್ಲೂ ಮನೆ ಮನೆಗೂ ಬೇಟಿ ನೀಡಿ ಜೆಡಿಎಸ್ ಪಕ್ಷದ ಜನಪರ ಕಾರ್ಯಕ್ರಮಗಳಾದ ಪಂಚರತ್ನ ಯೋಜನೆಗಳ ಬಗ್ಗೆ ತಿಳಿಸುವ ಮೂಲಕ ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡುತ್ತೇವೆ ಎಂದರು.

ಜೆಡಿಎಸ್ ಅಭ್ಯರ್ಥಿ ಸಿ.ಎಂ.ಆರ್. ಶ್ರೀನಾಥ್ ಮಾತನಾಡಿ, ಮಹಾನ್ ಮಾನವತಾವಾದಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯಗಳಗೆ ಪೂರಕವಾಗಿ ಜಿಲ್ಲೆಯಲ್ಲಿ ಸ್ವಾಭಿಮಾನಿ ರಾಜಕಾರಣ ಮಾಡುತ್ತಿದ್ದೇವೆ. “ನಮ್ಮಊರು-ನಮ್ಮಜನ-ನಮ್ಮಆಡಳಿತ” ಎಂಬ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಕ್ಷೇತ್ರದಲ್ಲಿ ಹೊರಗಿನವರನ್ನು ಆಯ್ಕೆ ಮಾಡುವ ಪರಿಸ್ಥಿತಿ ಇಲ್ಲ, ಕ್ಷೇತ್ರದಲ್ಲಿ ಜನರ ಒಲವು ಜೆಡಿಎಸ್ ಪರವಾಗಿದೆ. ಈ ಸಂದರ್ಭದಲ್ಲಿ ಕುರುಗಲ್ ಗಿರೀಶ್ ನೇತೃತ್ವದಲ್ಲಿ ಸುಮಾರು ನೂರಕ್ಕೂ ಅಧಿಕ ಯುವ ಮುಖಂಡರು ಸೇರ್ಪಡೆಗೊಂಡಿದ್ದು ತಮ್ಮ ಪಕ್ಷಕ್ಕೆ ಈ ಭಾಗದಲ್ಲಿ ಆನೆ ಬಲ ಬಂದಂತಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷೆ ಕುರ್ಕಿ ರಾಜರಾಜೇಶ್ವರಿ ಮಾತನಾಡಿ, ವೇಮಗಲ್-ಕುರುಗಲ್ ಸುತ್ತಮುತ್ತಲ ಗ್ರಾಮಗಳು ಮೊದಲಿನಿಂದಲೂ ಜೆಡಿಎಸ್ ಬೆಂಬಲಿಗರನ್ನು ಒಳಗೊಂಡಿದೆ. ಜೆಡಿಎಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡುವ ಈ ಭಾಗದ ಎಲ್ಲಾ ಯುವ ಮುಖಂಡರನ್ನು ಪಕ್ಷ ಅಧಿಕಾರಕ್ಕೆ ಬಂದಾಗ ಸೂಕ್ತ ಸ್ಥಾನ ಮಾನ ನೀಡಿ ಗೌರವಿಸಲಾಗುತ್ತದೆ. ಈ ಭಾಗದ ಜನರ ಸಮಸ್ಯೆಗಳಿಗೂ ಸ್ಪಂಧಿಸುತ್ತದೆ ಎಂದು ಆಶ್ವಾಸನೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಾಲಾಜಿ ಚನ್ನಯ್ಯ, ಸಿ.ಎಂ.ಆರ್. ಹರೀಶ್, ಜೆಟ್ ಅಶೋಕ್, ಮುಕ್ಕಡ್ ವೆಂಕಟೇಶ್, ಜೆಡಿಎಸ್ ಮುಖಂಡ ಆನಂದ ಕುಮಾರ್, ಕಡಗಟ್ಟೂರು ವಿಜಯಕುಮಾರ್, ಡಾಬಾ ಶಂಕರ್, ಗೋವಿಂದರಾಜು, ನಿರೂಪಕ ಲೋಕೇಶ್, ವೇಮಗಲ್-ಕುರುಗಲ್ ಸುತ್ತಮುತ್ತಲ ಹಳ್ಳಿಗಳ ಗ್ರಾಮ ಪಂಚಾಯ್ತಿ ಸದಸ್ಯರು, ಹಿರಿಯ ಮುಖಂಡರು, ಯುವ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಗಿರೀಶ್ ಬೆಂಬಲಿಗರು, ಜೆಡಿಎಸ್ ಬೆಂಬಲಿಗರು ಹಾಜರಿದ್ದರು.

Related Post

ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್
ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ
ಕೆ.ಹೆಚ್.ಮುನಿಯಪ್ಪ ಬಲಗೈಭಂಟ ಜಿಪಂ ಮಾಜಿ ಸದಸ್ಯ ಎಂ.ರಾಮಚ0ದ್ರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

Leave a Reply

Your email address will not be published. Required fields are marked *

You missed

error: Content is protected !!