• Thu. Apr 18th, 2024

PLACE YOUR AD HERE AT LOWEST PRICE

ಕಾರ್ಮಿಕರ ಕೆಲಸದ ಅವಧಿಯನ್ನು ಮೂರು ಗಂಟೆಗಳ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಸಿಐಟಿಯು ಸಂಘಟನೆಯಿಂದ  ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕಾರ್ಖಾನೆ ಕಾಯ್ದೆ 1948ಕ್ಕೆ ತಿದ್ದುಪಡಿ ಮಾಡಿ ದಿನದ ಕೆಲಸದ ಅವಧಿ ಗರಿಷ್ಟ 9 ಗಂಟೆಯಿಂದ 12 ಗಂಟೆಗೆ ಹೆಚ್ಚಳ ಮಾಡಿರುವುದನ್ನು ಹಾಗೂ ದುಡಿಯುವ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿರುವುದನ್ನು ವಾಪಸು ಪಡೆಯಬೇಕೆಂದು
ಪ್ರಸ್ತುತ ಕಾಯ್ದೆಯಲ್ಲಿ ದಿನದ ಕೆಲಸದ ಅವಧಿಯ ಆರಂಭದಿಂದ ಗರಿಷ್ಠ 5 ಗಂಟೆಗೆ 30 ನಿಮಿಷ ವಿರಾಮವನ್ನು ನೀಡಬೇಕು. ಆದರೆ ಈ ತಿದ್ದುಪಡಿ ವಿಧೇಯಕದಲ್ಲಿ ವಿರಾಮವಿಲ್ಲದೆ ದುಡಿಮೆ ಮಾಡುವ ಅವಧಿ ಗರಿಷ್ಠ 5 ಗಂಟೆಯಿಂದ 6 ಗಂಟೆಗೆ ಹೆಚ್ಚಿಸಿರುವುದು ಹಾಗೂ ಕಾರ್ಮಿಕರ ದಿನದ ಕೆಲಸದ 12 ಗಂಟೆಗೆ ಹೆಚ್ಚಿಸಿರುವುದು ಕಾರ್ಮಿಕರ ಶೋಷಣೆಗೆ ಮತ್ತಷ್ಟು ಅವಕಾಶ ಕಲ್ಪಿಸಿರುವ ರಾಜ್ಯ ಬಿಜೆಪಿ ಸರ್ಕಾರ ಕಾರ್ಮಿಕರಿಗೆ ಶೋಷಣೆ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ ಸರಕಾರಗಳು ಪ್ರಸ್ತುತ ಉದ್ಯೋಗದ ಕಡಿತ, ಕಡಿಮೆ ವೇತನಕ್ಕೆ ದುಡಿಮೆ, ಅಧಿಕ ಉತ್ಪಾದನೆ ಮಾಡಿಸಿಕೊಳ್ಳುವುದು ಹೆಚ್ಚಾಗಿದೆ. ಈ ತಿದ್ದುಪಡಿಗಳು ಕಾರ್ಮಿಕರ ಮೇಲೆ ವಿರಾಮವಿಲ್ಲದೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡ, ಶೋಷಣೆ ಹೆಚ್ಚಿಸಲಿದೆ. ಹಲವು ಕಾರ್ಖಾನೆಗಳ ಮಾಲೀಕರಿಗೆ 6 ದಿನಗಳಲ್ಲಿ ಆಗುತ್ತಿದ್ದ ಉತ್ಪಾದನೆಯನ್ನು 4 ದಿನಗಳಲ್ಲೇ ಪಡೆಯಬಹುದು. ಮೂರು ಶಿಫ್ಟ್ ಗಳಿಗೆ ಒದಗಿಸಬೇಕಾದ ಸಾರಿಗೆ ಸೌಲಭ್ಯ ಹಾಗೂ ಕ್ಯಾಂಟೀನ್ ಮತ್ತು ಇನ್ನಿತರ ಸೌಲಭ್ಯಗಳನ್ನು ಉಳಿಸಲು ಇದು ಅವಕಾಶ ಕಲ್ಪಸುತ್ತದೆ. ಚಾರಿತ್ರಿಕ 8 ಗಂಟೆ ಕೆಲಸ 8 ಗಂಟೆ ವಿರಾಮ ಮತ್ತು 8 ಗಂಟೆ  ಮನೋರಂಜನೆ ಎಂಬ ಜೀವಪರ ತಾತ್ವಿಕ ನೆಲೆಯನ್ನು ಕಳಚಿ ಹಾಕಿ ಬಂಡವಾಳಕ್ಕೆ ಲಾಭ ಮಾಡಿಕೊಡುವ ನವಉದಾರವಾದಿ ಆರ್ಥಿಕ ನೀತಿಯ ಜಾರಿಯ ನಿಟ್ಟಿನಲ್ಲಿ ಬಿಜೆಪಿ ಸರ್ಕಾರವು ಈ ತಿದ್ದುಪಡಿ ಮಾಡಿದೆ ಆರೋಪಿಸಿದರು

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ವಿಜಯಕೃಷ್ಣ ಮಾತನಾಡಿ ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ 2020 ರಲ್ಲಿ ಕಾರ್ಮಿಕ ವಿರೋಧಿಯಾಗಿ ಈ ಕಾಯ್ದೆಗೆ ತಿದ್ದುಪಡಿಯನ್ನು ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕ ವಿಧಾನ ಸಭೆಯಲ್ಲಿ ಅಂಗೀಕಾರ ಮಾಡಿದರು ಕಾರ್ಮಿಕರ ತೀವ್ರ ವಿರೋಧದಿಂದಾಗಿ ವಿಧಾನ ಪರಿಷತ್ತಿನಲ್ಲಿ ಸೋಲಾಗಿತ್ತು. ಈಗ ಬಿಜೆಪಿ ಸರ್ಕಾರ ಚುನಾವಣೆ ಹೊಸ್ತಿಯಲ್ಲಿ ಬಂಡವಾಳಗಾರರ ಲಾಭವನ್ನು ಹೆಚ್ಚಿಸಲು ಈ ತಿದ್ದುಪಡಿ ವಿಧೇಯಕವನ್ನು ಶಾಸನ ಸಭೆಯಲ್ಲಿ ಅಂಗೀಕಾರ ಮಾಡಿರುವುದು ಕಾರ್ಮಿಕ ವಿರೋಧಿ ನಡೆಯಾಗಿದೆ ಎಂದರು.

ಕಾರ್ಖಾನೆಗಳಲ್ಲಿ ಹೊಸ ಉದ್ಯೋಗ ಅವಕಾಶಗಳ ಸೃಷ್ಟಿ, ಕಾರ್ಮಿಕರ ಮೇಲೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡಗಳನ್ನು ಕಡಿಮೆ ಮಾಡಲು, ಕಾರ್ಮಿಕರ ಜೀವನವನ್ನು ಉತ್ತಮಪಡಿಸಲು ವಾರಕ್ಕೆ 5 ದಿನ ಕೆಲಸ, ದಿನಕ್ಕೆ 7 ಗಂಟೆ, ವಾರಕ್ಕೆ 35 ಗಂಟೆ  ಕೆಲಸದ ಅವಧಿ ನಿಗದಿ ಪಡಿಸಿ ಕಾಯ್ದೆಗೆ ತಿದ್ದುಪಡಿ ಮಾಡಬೇಕೆಂದು ಹಾಗೂ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಒಳಗೊಂಡಿರುವ ಕಾರ್ಖಾನೆಗಳ ಕರ್ನಾಟಕ ತಿದ್ದುಪಡಿ ವಿಧೇಯಕ 2023 ನ್ನು ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿದರು

ಕಾರ್ಮಿಕ ಮುಖಂಡರಾದ ಎ.ಆರ್ ಬಾಬು, ಅಪ್ಪಯ್ಯಣ್ಣ, ಹನುಮಂತರಾಯ್, ಎಚ್.ಬಿ ಕೃಷ್ಣಪ್ಪ, ಕೇಶವರಾವ್, ನಾರಾಯಣಪ್ಪ ಮುಂತಾದವರು ಇದ್ದರು

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!