• Mon. Apr 29th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ಎಲ್.ಪಿ.ಜಿ ಸಿಲಿಂಡರ್ ದರ ಇಳಿಕೆ  ಮಾಡುವಂತೆ ಮತ್ತು ಕಾರ್ಮಿಕರ ದುಡಿಯುವ ಅವದಿ 4 ತಾಸು ಹೆಚ್ಚಳ ಮಾಡಿರುವ ಆದೇಶವನ್ನು ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿ ಮಾ.7 ರಂದು ರೈಲ್ವೆ ಇಲಾಖೆಗೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ನಗರದ ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಲಕ್ಷ ಲಕ್ಷ ಸಂಬಳ ಪಡೆಯುವ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತೇವೆಂಬ ಸವಾಲಿಗೆ ಮಣಿದು ಸರ್ಕಾರ 17ರಷ್ಟು ಮೂಲ ವೇತನ ಹೆಚ್ಚಿಸಿ, 7ನೇ ವೇತನ ಆಯೋಗ ಜಾರಿ ಮಾಡಿದೆ. ಆದರೆ ಬಡ ಕೂಲಿ ಕಾರ್ಮಿಕರ ಸಿಲಿಂಡರ್ ದರ ಏರಿಕೆ ಮಾಡುವ ಮುಖಾಂತರ ಜನ ವಿರೋದಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಇಡೀ ಜಗತ್ತೆ ಹಣ ದುಬ್ಬರದ ಕಪಿಮುಷ್ಠಿಗೆ ಸಿಲುಕಿ ಒದ್ದಾಡುತ್ತಿರುವುದು ಎಲ್ಲಾರಿಗೂ ಗೊತ್ತಿರುವ ವಿಚಾರ.  ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತೊಂದು ಕಡೆ ಗೃಹ ಬಳಕೆಯ ಸಿಲಿಂಡರ್ 50 ರೂ ಬೆಲೆ ಏರಿಕೆ ಮಾಡುವ ಮುಖಾಂತರ ಮತ್ತೆ ಪೂರ್ವಜನರ ಕಾಲದ ಸೌದೆ ಹೊಲೆಗೆ ಮರುಕಳಿಸುವಂತೆ ಮಾಡುತ್ತಿದ್ದಾರೆಂದು ದೂರಿದರು.

ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಮಾತನಾಡಿ ಸರ್ಕಾರ ಕಾರ್ಮಿಕ ವಿರೋದಿ ನೀತಿಗಳಿಂದ ಕಾರ್ಖಾನೆ ಮಾಲೀಕರು ಕಾರ್ಮಿಕರನ್ನು ಯಂತ್ರಗಳಂತೆ ದುಡಿಸಿಕೊಳ್ಳುವ  ಮೂಲಕ ಕಾರ್ಮಿಕ ಹಕ್ಕುಗಳನ್ನು ಕಸಿಯುತ್ತಿವೆ. ಈಗಾಗಲೇ 9 ತಾಸು ದುಡಿಯುವ ಕಾರ್ಮಿಕರಿಗೆ ಕಾರ್ಖಾನೆಗಳಲ್ಲಿ ಯವುದೇ ಮೂಲಭೂತ ಸೌಕರ್ಯಗಳಿಲ್ಲದೆ ಕನಿಷ್ಟ ವೇತನ ನೀಡದೆ ಕಾರ್ಮಿಕರನ್ನು ವಂಚನೆ ಮಾಡುತ್ತಿದ್ದಾರೆ.

ಜನಸಾಮಾನ್ಯರ ಬದುಕು ಕಸಿಯುತ್ತಿರುವ ಬೆಲೆ ಏರಿಕೆ ಹಾಗೂ ಕಾರ್ಮಿಕ ನೀತಿಗಳ ಅವೈಜ್ಞಾನಿಕ ಆದೇಶಗಳನ್ನು ವಾಪಸ್ಸು ಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮಾ.7 ರ ಮಂಗಳವಾರ ಸಿಲಿಂಡರ್ ಹಾಗೂ ಸೌದೆ ಸಮೇತ ಬಂಗಾರಪೇಟೆ ರೈಲ್ವೆ ನಿಲ್ದಾಣ ಮುತ್ತಿಗೆ ಹಾಕಲು ಸಭೆಯಲ್ಲಿ ತಿರ್ಮಾನಿಸಲಾಯಿತು.

ಸಭೆಯಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಜಿಲ್ಲಾ ಕಾರ್ಯದ್ಯಕ್ಷ ವಕ್ಕಲೇರಿ ಹನುಮಯ್ಯ, ಮುಖಂಡರಾದ ಚಾಂದ್‍ಪಾಷ, ಬಾಬಾಜಾನ್, ಆರೀಪ್, ಜಾವೇದ್, ಮುನಿಯಪ್ಪ, ಐತಾಂಡಹಳ್ಳಿ  ಮುನ್ನಾ, ಸಂದೀಪ್‍ರೆಡ್ಡಿ, ಸಂದೀಪ್‍ಗೌಡ, ರಾಮಸಾಗರ ವೇಣು, ಕಿರಣ್, ಮುನಿಕೃಷ್ಣ,ಕದರಿನತ್ತ ಅಪ್ಪೋಜಿರಾವ್, ವಿಶ್ವ, ಮುನಿರಾಜು, ಯಲ್ಲಪ್ಪ, ಹರೀಶ್, ಮಂಗಸಂದ್ರ ತಿಮ್ಮಣ್ಣ, ಮುಂತಾದವರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!