• Wed. Apr 24th, 2024

ಕೋಲಾರ I ಅಡುಗೆ ಅನಿಲ ಸಿಲೆಂಡರ್ ಬೆಲೆ ಏರಿಕೆಗೆ ಖಂಡನೆ ಮಹಿಳಾ ಕಾಂಗ್ರೆಸ್‌ನಿಂದ ಕೋಲಾರದಲ್ಲಿ ಪ್ರತಿಭಟನೆ

PLACE YOUR AD HERE AT LOWEST PRICE

ಕೇಂದ್ರ ಸರಕಾರ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರ ನೇತೃತ್ವದಲ್ಲಿ ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಾ.ಪುಷ್ಪ ಅಮರನಾಥ್, ಮೋದಿಯವರ ಅಚ್ಚೇ ದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ೧೨೦೦ ಗಡಿ ದಾಟಿಹೋಗಿದೆ. ಕೇಂದ್ರದ ಉಜ್ವಲಾ ಯೋಜನೆಯ ಮೂಲಕ ಗ್ಯಾಸ್ ಸಂಪರ್ಕ ಪಡೆದಿದ್ದ ಬಡಪಾಯಿ ಬಡವರು ಅದರಲ್ಲೂ ಕೂಲಿ ಕಾರ್ಮಿಕ, ಬಡ ಹಾಗೂ ಮಾಧ್ಯಮ ವರ್ಗದ ಜನನರಿಗೆ ಗ್ಯಾಸ್ ಸಿಲಿಂಡರ್ ಬೆಲೆಯೇರಿಕೆಯ ಶಾಕ್ ಗೆ ತತ್ತರಿಸಿ ಹೋಗಿದ್ದಾರೆ. ಸೌದೆ ಬಿಟ್ಟು ಸಿಲಿಂಡರ್ ಮೊರೆ ಹೋಗಿದ್ದವರು ಇಂತಹ ದರ ಏರಿಕೆಯಿಂದ ಕಷ್ಟಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸರಕಾರದ ವಿರುದ್ದ ಕಿಡಿಕಾರಿದರು.

ಕಾಂಗ್ರೆಸ್ ನೇತೃತ್ವದಲ್ಲಿ ೨೦೧೪ ರ ಮನಮೋಹನ್ ಸಿಂಗ್ ಸರಕಾರದಲ್ಲಿ ಕೇವಲ ೪೧೦ ಇತ್ತು ಪ್ರಸ್ತುತ ಬಿಜೆಪಿ ನೇತೃತ್ವದ ಸರಕಾರ ೧೨೦೦ ರೂಪಾಯಿ ಮಾಡಿದ್ದಾರೆ ಅವತ್ತು ಕಾಂಗ್ರೆಸ್ ೧೦ ರೂಪಾಯಿ ಏರಿಕೆ ಮಾಡಿದ್ದರೆ ಸಾಕು ಬಿಜೆಪಿ ಪಕ್ಷದ ಮಹಿಳಾ ಮುಖಂಡರಾದ ಮಾಳವಿಕ ಅವಿನಾಶ್, ತಾರಾ, ಶೋಭಾ ಕರಂದ್ಲಾಜೆ, ಶಶಿಕಲಾ ಜೊಲ್ಲೆ ಬೀದಿಯಲ್ಲಿ ಪ್ರತಿಭಟನೆಗಳು ಮಾಡಿದ್ದೇ ಮಾಡಿದ್ದೇ ಇವತ್ತು ಇವರು ಬದುಕಿದ್ದಾರೆ ಎಂದು ಪ್ರಶ್ನೆ ಮಾಡಬೇಕಾಗಿದೆ ನಾಚಿಕೆಯಾಗಬೇಕು ಇವರು ಹೆಣ್ಣು ಮಕ್ಕಳ ಕಷ್ಟ ಗೊತ್ತಿಲ್ಲದ ನಾಯಕರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಮತಿ ಶ್ರೀನಿವಾಸ್ ಮಾತನಾಡಿ ಕೇಂದ್ರ ಸರಕಾರ ಸಿಲಿಂಡರ್ ಬೆಲೆಯನ್ನು ಬೇಕಾಬಿಟ್ಟಿ ಏರಿಸಿದರೆ ಬಡವರಿಗೆ ಕೊಳ್ಳುವ ಶಕ್ತಿ ಇಲ್ಲವಾಗಿದೆ ಬಡವರು ಈ ದರದಲ್ಲಿ ಸಿಲಿಂಡರ್ ಖರೀದಿಸಿ ಅನ್ನ ಬೇಯಿಸಲು ಸಾಧ್ಯವಿಲ್ಲ ಯುಪಿಎ ಸರ್ಕಾರವಿದ್ದಾಗ ಗ್ಯಾಸ್ ಗೆ ಸಬ್ಸಿಡಿ ದೊರೆಯುತಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ ಏರಿಳಿತವಾದರೂ ಅದರ ಬಿಸಿ ಗ್ರಾಹಕರಿಗೆ ತಟ್ಟದಂತೆ ಯುಪಿಎ ಸರ್ಕಾರ ನೋಡಿಕೊಂಡಿತ್ತು. ಆದರೆ ಮೋದಿ ಸರ್ಕಾರ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಸುಳಿವೇ ಕೊಡದೆ ರದ್ದು ಮಾಡಿದೆ. ಬಡವರು ಬದುಕಬಾರದು ಎನ್ನುವುದು ಮೋದಿ ಸರ್ಕಾರದ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರತ್ನಮ್ಮ ಮಾತನಾಡಿ ಕೇಂದ್ರ ಸರಕಾರ ಬಡವರ ವಿರೋ ಸರಕಾರವಾಗಿದೆ ಕೇವಲ ಶ್ರೀಮಂತರ ಪರವಾಗಿದ್ದು ಮುಂದಿನ ಚುನಾವಣೆಯಲ್ಲಿ ಮಹಿಳಾ ವಿರೋಧಿ ಬಿಜೆಪಿ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕು ಇಲ್ಲದೇ ಹೋದರೆ ಸಾಮಾನ್ಯ ವರ್ಗದ ಜನರು ಬದುಕುವುದು ಕಷ್ಟವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಧಾ, ಸುಜಾತ, ನಾಗಮ್ಮ, ಜಯಲಕ್ಷ್ಮೀ, ಜಿಲ್ಲಾ ಮಹಿಳಾ ಕಾಂಗ್ರೆಸ್ ಮುಖಂಡರಾದ ರೂಪ, ಶಾಂತಮ್ಮ, ಅಪೋಜ ಬಾನು, ಸ್ವರಸ್ವತಿ, ಶಶಿಕಲಾ, ಮುಂತಾದವರು ಇದ್ದರು.

 

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!