• Sat. May 18th, 2024

ಕೋಲಾರ I ತಾತಯ್ಯನವರ ಜನ್ಮದಿನ ಅಂಗವಾಗಿ ಸ್ತಬ್ದಚಿತ್ರಗಳ ಅದ್ದೂರಿ ಮೆರವಣಿಗೆ ಕಾಲಜ್ಞಾನಿ ಕೈವಾರತಾತಯ್ಯನವರ ಭವಿಷ್ಯ ವಾಣಿ ಸತ್ಯವಾಗಿದೆ – ಸಂಸದಮುನಿಸ್ವಾಮಿ

PLACE YOUR AD HERE AT LOWEST PRICE

ಕಾಲಜ್ಞಾನಿ ದಾರ್ಶನಿಕ ಕೈವಾರ ತಾತಯ್ಯನವರು ನುಡಿದಿದ್ದ ಭವಿಷ ವಾಣಿಯ ಬಹುತೇಕ ಘಟನೆಗಳು ಸತ್ಯವಾಗಿವೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.

ಕೋಲಾರ ನಗರದ ನಗರದ ಶ್ರೀ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೋಲಾರ ಇವರ ಸಹಯೋಗದಲ್ಲಿ ಶ್ರೀ ಯೋಗಿ ನಾರೇಯಣ ಯತೀಂದ್ರರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲಜ್ಞಾನಿಯಾದ ಕೈವಾರ ತಾತಯ್ಯ ಯೋಗಿ ನಾರೇಯಣ ಯತೀಂದ್ರರು ದೇಶ ಹಾಗೂ ಪ್ರಪಂಚದಲ್ಲಿ ಮುಂದೆ ಏನೆಲ್ಲ ಆಗುತ್ತದೆ ಎಂಬ ಕಾಲಜ್ಞಾನವನ್ನು ಹೇಳುವ ಮೂಲಕ ಎಲ್ಲರನ್ನು ಅಚ್ಚರಿಪಡಿಸಿದ್ದರು. ಆಹಾರವಿದ್ದರು ಕೊಳ್ಳಲು ಆಗಲ್ಲ ದುಬಾರಿ ಜಗತ್ತಿನಲ್ಲಿ ವಿಚಿತ್ರ ಬರಗಾಲ, ಪ್ರಚಲಿತ ವಿಷಯಗಳ ಬಗ್ಗೆ ಬಹಳ ಹಿಂದೆಯೇ ಉಲ್ಲೇಖಿಸಿದ್ದಾರೆ ಎಂದು ತಿಳಿಸಿದರು.

೨೯೭ನೇ ಶ್ರೀ ಯೋಗಿ ನಾರೇಯಣ ಯತೀಂದ್ರರ ಜಯಂತಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮಾತನಾಡಿ, ಕೀರ್ತನೆ, ತತ್ವಪದಗಳ ಜನಕ ಎಂದೇ ಖ್ಯಾತಿ ಕೈವಾರ ತಾತಯ್ಯ ಯೋಗಿ ನಾರಾಯಣಪ್ಪ ತನ್ನ ಕೀರ್ತನೆಗಳು ಹಾಗೂ ತತ್ವಪದಗಳನ್ನು ಹೇಳುವ ಮೂಲಕ ಮನೆ ಮಾತಾಗಿದ್ದರು ಎಂದು ಹೇಳಿದರು. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಸಾವಿರಾರು ಕೀರ್ತನೆಗಳನ್ನು ರಚಿಸಿ, ಸಾಮಾನ್ಯ ಜನರಿಗೂ ಅರ್ಥ ಆಗುವ ರೀತಿಯಲ್ಲಿ ವಚನ ಸಾಹಿತ್ಯವನ್ನು ಪಸರಿಸಿದರು ಎಂದರು.

ನಿವೃತ್ತ ಡಿವೈಎಸ್ಸಿ ವೆಂಕಟಸ್ವಾಮಿ ಅವರು ಶ್ರೀ ಯೋಗಿ ನಾರೇಯಣ ಯತೀಂದ್ರರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆಯ ಮಾಜಿ ಸದಸ್ಯ ಚಿಟ್ಟಿ ರಘು, ಉಪ ವಿಭಾಗಾಽಕಾರಿ ವೆಂಕಟಲಕ್ಷ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಽಕಾರಿ ಸೋನಿಯಾ ವರ್ಣೇಕರ್, ಎಸ್.ಎನ್.ಆರ್ ಆಸ್ಪತ್ರೆಯ ನೇತ್ರ ತಜ್ಞರಾದ ಪುಷ್ಪಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್‌ರೆಡ್ಡಿ, ಕೆಎಸ್‌ಆರ್‌ಟಿಸಿ ಸಂಸ್ಥೆಯ ಆರ್.ಪ್ರಸಾದ್, ಸಮುದಾಯದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂಮುನ್ನ ಕೋಲಾರ ನಗರದ ಕಠಾರಿಪಾಳ್ಯ ಶ್ರೀವೇಣುಗೋಪಾಲಸ್ವಾಮಿ ಪುಷ್ಕರಿಯ ಕೈವಾರತಾತಯ್ಯನವರ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ಸ್ತಬ್ದಚಿತ್ರಗಳ ಮೆರವಣಿಗೆ ಆರಂಭವಾಯಿತು. ನಗರ ಹಾಗೂ ಗ್ರಾಮಾಂತರ ಪ್ರದೇಶದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದ ಸ್ತಬ್ದಚಿತ್ರ ಮೆರವಣಿಗೆ ಜನರನ್ನು ಆಕರ್ಷಿಸಿತು.

 

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!