• Fri. Apr 19th, 2024

PLACE YOUR AD HERE AT LOWEST PRICE

ದೇಶದಲ್ಲಿ ಮಹಿಳೆಯರ ಸಾಧನೆಗಳು ನಮಗೆಲ್ಲ ಸ್ಪೂರ್ತಿಯಾಗಿದೆ. ಇಂದಿನ ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ಕೆಲಸ ನಿರ್ವಹಿಸುತ್ತಿದ್ದು, ಅವರಿಗೆ ಸಮಾಜದಲ್ಲಿ ಪ್ರತಿಯೊಬ್ಬರು ಮಹಿಳೆಯರಿ ಗೌರವ ನೀಡಬೇಕೆಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರು ತಿಳಿಸಿದರು.

ಇಂದು ನಗರದ ಶ್ರೀ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎನ್.ಆರ್.ಎಲ್.ಎಂ ಸಂಜೀವಿನಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (DAY-NULM),  ಕೋಲಾರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

1975ರಲ್ಲಿ ಮೊದಲಿಗೆ ಈ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಅಂದಿನಿಂದಲೂ ಮಾರ್ಚ್ 08 ರಂದು ವಿಶ್ವದಾದ್ಯಂತ ಮಹಿಳಾ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ದಿನದಂದು ಸಾಮಾಜಿಕ, ಆರ್ಥಿಕ, ಸಾಂಸ್ಕøತಿಕ, ರಾಜಕೀಯ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮಾಡಿರುವ ಸಾಧನೆಯನ್ನು ಸ್ಮರಿಸುವಂತಹ ದಿನ ಇದಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಮಹಿಳೆಯರ ಸಾಧನೆಗಳು ನಮಗೆಲ್ಲ ಸ್ಪೂರ್ತಿಯಾಗಿದೆ. ನಮ್ಮ ದೇಶದ ಮೊದಲ ರಾಷ್ಟ್ರಪತಿಯಾದ ಪ್ರತಿಭಾ ಪಾಟೀಲ್, ಪ್ರಧಾನಿಯಾದಂತಹ ಇಂದಿರಾ ಗಾಂಧಿ ಹಾಗೂ ನಮ್ಮ ಕೇಂದ್ರ ಸರ್ಕಾರದ ವಿತ್ತಸಚಿವರಾದ ನಿರ್ಮಾಲ ಸೀತಾರಾಮನ್ ಅವರು ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಮಹಿಳೆ ಎಂದು ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಹೆಣ್ಣು ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ನಿರ್ವಹಿಸಿ ತಮ್ಮ ಸಂಸಾರವನ್ನು ನಿಭಾಯಿಸಿರುವುದು ಹೆಮ್ಮೆಯ ಸಂಗತಿ. ಕೇಂದ್ರ ಸರ್ಕಾರದಿಂದ ನಮ್ಮ ದೇಶದಲ್ಲಿ 80 ಕೋಟಿ ಜನರಿಗೆ ಉಚಿತವಾಗಿ ಪಡಿತರವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ 2022-23ನೇ ಸಾಲಿನಲ್ಲಿ ಏಪ್ರಿಲ್-2022 ರಿಂದ ಫೆಬ್ರವರಿ 2023 ರವರೆಗೆ 9020 ಭೌತಿಕ ಗುರಿಯಿದ್ದು, 9020 ಫಲಾನುಭವಿಗಳ ನೋಂದಣಿ ಮಾಡಲಾಗಿ ಶೇ.100 ರಷ್ಟು ಸಾಧನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ತ್ರೀಶಕ್ತಿ ಯೋಜನೆಯಡಿ ಇದುವರೆಗೂ 5012 ಸ್ತ್ರೀ ಶಕ್ತಿ ಗುಂಪುಗಳು ರಚನೆಯಾಗಿರುತ್ತದೆ. ಇದರಡಿ ಒಟ್ಟು 75720 ಸದಸ್ಯರುಗಳಿರುತ್ತಾರೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರು ಮಾತನಾಡಿ, ವಿಶ್ವದಲ್ಲಿ ಅನೇಕ ಮಹಿಳೆಯರು ನಿರಂತರವಾಗಿ ವೈಯಕ್ತಿಕ ಮತ್ತು ವೃತ್ತಿಪರವಾಗಿ ಅಭಿವೃದ್ಧಿಗೆ ಹಲವು ಕೊಡುಗೆಗಳನ್ನು ನೀಡುತ್ತಿದ್ದಾರೆ. ಎಲ್ಲಾ ಮಹಿಳೆಯರು ತಮ್ಮ ಕಠಿಣ ಪರಿಶ್ರಮದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ. ಈ ದಿನ ಮಹಿಳಾ ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ವಿಶೇಷ ದಿನ ಇದಾಗಿದೆ. ಜೊತೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

 

ಗರ್ಭೀಣಿ/ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ಹೆಚ್ಚು ಪೌಷ್ಠಿಕತೆ ಅಂಶಗಳನ್ನು ಒಳಗೊಂಡ ಮಧ್ಯಾಹ್ನದ ಪೌಷ್ಠಿಕ ಊಟವನ್ನು ಒದಗಿಸುವ ಮೂಲಕ ಅವರ ಪೌಷ್ಠಿಕಾಂಶದ ಪ್ರಮಾಣವನ್ನು ಹೆಚ್ಚಿಸಿ, ಕಡಿಮೆ ತೂಕದ ಮಕ್ಕಳ ಜನನ ಹಾಗೂ ಮಕ್ಕಳಲ್ಲಿನ ಅಪೌಷ್ಠಿಕತೆ ಪ್ರಮಾಣವನ್ನು ಕಡಿಮೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಮತ್ತು ಉತ್ತಮ ಕೆಲಸ ನಿರ್ವಹಿಸಿದ್ದ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಶ್ರೀನಿವಾಸಗೌಡ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಕುಮಾರ್, ನಗರಸಭೆ ಸದಸ್ಯ ಪ್ರವೀಣ್ ಗೌಡ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ, ಸಿಡಿಪಿಓ ನಾಗರತ್ನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಸೌಮ್ಯ, ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಮಮತಾರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!