• Sat. May 4th, 2024

PLACE YOUR AD HERE AT LOWEST PRICE

ಬಿಜೆಪಿ ಸರ್ಕಾರದ ಕರ್ಮಕಾಂಡಗಳು ನಿತ್ಯ ಬಯಲಾಗುತ್ತಿವೆ. ಈ ಸರ್ಕಾರ ಹಗರಣದಲ್ಲಿ ಮುಳುಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಕೋಲಾರ ನಗರದ ಹೊರವಲಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು ಜೆಡಿಎಸ್ ಗೆಲ್ಲಿಸಲು ತೀರ್ಮಾನ ಕೈಗೊಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನರು ಈಗಾಗಲೇ ಅಧಿಕಾರ ಕೊಟ್ಟು ನೋಡಿದ್ದಾರೆ. ಆದರೆ ಆ ಪಕ್ಷಗಳು ವಿಫಲವಾಗಿದ್ದು, ಜನರ ಸಾಮಾನ್ಯರಿಗೆ ಒಳ್ಳೆಯದು ಮಾಡಲು ಅಧಿಕಾರ ಬಳಸಿಕೊಳ್ಳಲಿಲ್ಲ ಎಂದರು.

ಬಜೆಟ್ ಸರಿಯಾಗಿ ಉಪಯೋಗ ಆಗಬೇಕೆಂದು ಕುಮಾರಸ್ವಾಮಿ ಪಂಚರತ್ನ ಯೋಜನೆ ರೂಪಿಸಿದ್ದಾರೆ ೭೭ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಕ್ಕಪಕ್ಕ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಆಡಳಿತ ನಡೆಸುತ್ತಿವೆ ಆ ರಾಜ್ಯದ ಮುಖ್ಯಮಂತ್ರಿಗಳು ಎಚ್.ಡಿ.ದೇವೇಗೌಡರ ಮೇಲೆ ವಿಶೇಷ ಗೌರವ ಇಟ್ಟುಕೊಂಡಿದ್ದಾರೆ. ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷಗಳು ಬರಬೇಕೆಂಬ ಆಶಯ ಇಟ್ಟುಕೊಂಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹೆಸರು ಶಾಶ್ವತ ಅವರ ಹೆಸರೇ ನಮಗೆ ಸ್ಪೂರ್ತಿ, ಈ ತಿಂಗಳ ೨೬ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ವರ್ಚುವಲ್ ವೇದಿಕೆಗಳಲ್ಲಿಯೂ ಅವರನ್ನು ಬಳಸಿಕೊಳ್ಳುತ್ತೇವೆ. ಅವರ ಮೇಲೆ ಕನ್ನಡಿಗರು ಬಹಳ ಗೌರವ ಇಟ್ಟುಕೊಂಡಿದ್ದಾರೆ ಎಂದು ನುಡಿದರು.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯಮಟ್ಟದ ನಾಯಕರು. ಅವರು ಎಲ್ಲಿ ಬೇಕಾದರೂ ಸ್ಪಽಸಬಹುದು. ಆದರೆ, ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಭ್ಯರ್ಥಿಗಳು ಪ್ರಬಲವಾಗಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ ಇದ್ದಂತೆ. ಜಿಲ್ಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಹಿಡಿತ ಸಾಽಸಲಿದ್ದೇವೆ ಎಂದು ಹೇಳಿದರು.

ಇದೇ ತಿಂಗಳು ಮಾರ್ಚ್ ೨೦ರಂದು ಕೋಲಾರ ಜಿಲ್ಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ನಾನು, ಸಿ.ಎಂ.ಇಬ್ರಾಹಿಂ ಭಾಗವಹಿಸಲಿದ್ದೇವೆ ಎಂದರು.

ಪದೇಪದೇ ಕೋಲಾರಕ್ಕೆ ಭೇಟಿ ನೀಡುವುದು ಎನ್ನುವುದಕ್ಕಿಂತ ಈ ಭಾಗದಲ್ಲಿ ಈ ಬಾರಿ ಜೆಡಿಎಸ್‌ಗೆ ಗೆಲುವಿನ ಅವಕಾಶಗಳು ಹೆಚ್ಚಿವೆ. ೧೨೩ ಮಿಷನ್‌ನೊಂದಿಗೆ ಪಂಚರತ್ನ ಯಾತ್ರೆ ಕೈಗೊಂಡಿದ್ದೇವೆ’ ಎಂದು ಹೇಳಿದರು.
ಹಾಸನ ಟಿಕೆಟ್ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ ಟಿಕೆಟ್ ವಿಚಾರ ಸಂಬಂಧ ಪಕ್ಷದ ವರಿಷ್ಠರು, ರಾಜ್ಯದ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಚರ್ಚಿಸುವುದಿಲ್ಲ ಎಂದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!