ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲೆಯ ಸರ್ಕಾರಿ ನೌಕರ ಕ್ರೀಡಾಪಟುಗಳು ಆಯ್ಕೆಯಾಗಿರುವುದು ಇಡೀ ಜಿಲ್ಲೆಯ ನೌಕರರು ಹಾಗೂ ಜಿಲ್ಲೆಗೆ ಸಂದ ಗೌರವ ಎಂದು ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದರು.
ಕೋಲಾರ ಜಿಲ್ಲಾ ನೌಕರರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಬೆಂಗಳೂರು ನಗರ ತಂಡವನ್ನು ಮಣಿಸಿ ಗೆಲುವು ಸಾಸಿದ್ದ ಕೋಲಾರ ಜಿಲ್ಲೆಯ ಸರ್ಕಾರಿ ನೌಕರರಾದ ಬಿ.ಎಸ್.ರಾಜೇಶ್, ಡಾ.ಶ್ರೀನಿವಾಸಗೌಡ, ಬಿ.ಎಸ್.ಮಂಜುನಾಥ್, ಎಂ.ಲಕ್ಷ್ಮೀನಾರಾಯಣ,ಕಿರಣ್ ಗಜಾಕೋಶ್, ವೆಂಕಟಾಚಲಪತಿ, ಸಿದ್ದಲಿಂಗಪ್ಪಪೂಜಾರಿ ಅವರನ್ನು ಸನ್ಮಾನಿಸಿ ಬೀಳ್ಕೊಟ್ಟು ಅವರು ಮಾತನಾಡುತ್ತಿದ್ದರು.
ಸರ್ಕಾರಿನೌಕರರು ಕರ್ತವ್ಯದ ಒತ್ತಡದ ನಡುವೆಯೂ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಂಡಿರುವುದು ಶ್ಲಾಘನೀಯ ಎಂದ ಅವರು, ರಾಜ್ಯಮಟ್ಟದಲ್ಲಿ ಗೆದ್ದು ರಾಷ್ಟ್ರಮಟ್ಟಕ್ಕೆ ಹೋಗುವ ಮೂಲಕ ಈ ನೌಕರರು ಜಿಲ್ಲೆಯ ಘನತೆ ಹೆಚ್ಚಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ನಾರಾಯಣಸ್ವಾಮಿ, ನೌಕರರ ಸಂಘದ ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ,ಗೌರವಾಧ್ಯಕ್ಷ ರವಿಚಂದ್ರ, ನಿಕಟಪೂರ್ವ ಅಧ್ಯಕ್ಷರಾದ ಕೆ.ಎನ್.ಮಂಜುನಾಥ್, ಕೆ.ಬಿ.ಅಶೋಕ್, ಉಪಾಧ್ಯಕ್ಷರಾದ ಪುರುಷೋತ್ತಮ್,ಮಂಜುನಾಥ್ ಸೇರಿದಂತೆ ಎಲ್ಲಾ ನೌಕರರ ಸಂಘ ಹಾಗೂ ವೃಂದಸಂಘಗಳ ಪದಾಧಿಕಾರಿಗಳು ಹಾಜರಿದ್ದರು.