• Mon. May 29th, 2023

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಭಾಗದ ಬಡ ಜನರ ಅನುಕೂಲಕ್ಕಾಗಿ ಪಂಚರತ್ನ ಯೋಜನೆ – ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್

ಕೋಲಾರ ಜೆಡಿಎಸ್ ಪಕ್ಷ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಭಾಗದ ಬಡ ಜನರ ಅನುಕೂಲಕ್ಕಾಗಿ ಪಂಚರತ್ನ ಯೋಜನೆಯನ್ನು ರೂಪಿಸಿದ್ದು ಕೋಲಾರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಮನೆಗೆ ಯೋಜನೆಯ ಅನುಕೂಲಗಳ ಕುರಿತಂತೆ ಕರಪತ್ರ ತಲುಪಿಸುವ ಕೆಲಸವನ್ನು ಮಾಡುತ್ತಾ ಇದ್ದೇವೆ ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ತಿಳಿಸಿದರು.

ತಾಲೂಕಿನ ತೋರದೇವಂಡಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಬುಧವಾರ ಜೆಡಿಎಸ್ ಪಕ್ಷದ ವತಿಯಿಂದ ಪಂಚರತ್ನ ಯೋಜನೆಗಳ ಕುರಿತಂತೆ ಮನೆ ಮನೆಗೆ ಬೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಮೇಲೆ ಜನರು ವಿಶ್ವಾಸ ಕಳಿದುಕೊಂಡಿದೆ ಜೆಡಿಎಸ್ ಪಕ್ಷದಿಂದ ಮಾತ್ರವೇ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಎಂಬುದನ್ನು ಜನ ಅರ್ಥ ಮಾಡಿಕೊಂಡು ಪಂಚರತ್ನ ಯೋಜನೆಗಳ ಅನುಕೂಲಗಳಿಂದ ಅಭೂತಪೂರ್ವ ಬೆಂಬಲ ನೀಡಿದ್ದಾರೆ ಎಂದರು.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕೆಳದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಾಸಕರಾಗಿ ಆಯ್ಕೆಯಾದರು ಅವರಿಂದ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ ಕ್ಷೇತ್ರದ ಜನರ ವಿಶ್ವಾಸ ಗಳಿಸಲು ಅವರಿಂದ ಸಾಧ್ಯವಾಗಲಿಲ್ಲ ಇವತ್ತು ದೂರ ವ್ಯಕ್ತಿಗಳಿಗೆ ಮಣೆ ಹಾಕಲು ಹೊರಟಿದ್ದಾರೆ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಸ್ಥಳೀಯನಾಗಿ ನಿಮ್ಮ ಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸುಮಾರು ವರ್ಷಗಳಿಂದ ನಿಮ್ಮ ಜೊತೆಯಲ್ಲಿ ಇದ್ದೇನೆ ದಿನನಿತ್ಯ ನಿಮ್ಮ ಸಮಸ್ಯೆಗಳನ್ನು ಆಲಿಸಿದ್ದೇನೆ ಅ ಸಮಸ್ಯೆಗಳನ್ನು ಬಗೆಹರಿಸುವುದೇ ನನ್ನ ಪ್ರಣಾಳಿಕೆಯಾಗಿದ್ದು ಅವುಗಳ ಪರಿಹಾರ ಮಾಡಲು ಕುಮಾರಸ್ವಾಮಿ ಮತ್ತು ನಾನು ನಿಮ್ಮ ಜೊತೆಯಲ್ಲಿ ಇರುತ್ತೇವೆ

ಮನೆ ಮನೆಗೆ ಪಂಚರತ್ನ ಯೋಜನೆಯನ್ನು ಜಾರಿ ಮಾಡಲು ಸ್ವಾಭಿಮಾನಿ ಮತದಾರ ಬಂಧುಗಳು ಕೋಲಾರ ಸಂಪೂರ್ಣ ಅಭಿವೃದ್ಧಿಗಾಗಿ ಹೋರಾಡಲು ನಿಮ್ಮ ಆಶೀರ್ವಾದ ಮತ್ತು ಸಂಪೂರ್ಣ ಬೆಂಬಲ ಕೋರಲು ಬಂದಿದ್ದೇನೆ ಈ ಒಂದು ಬಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಕೋಲಾರದಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವAತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮಾಜಿ ತಾಲೂಕು ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ ಮಾತನಾಡಿ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿಯಲ್ಲಿ ರೈತರ ಮಹಿಳೆಯರ ಕಾರ್ಮಿಕರ ಪರವಾಗಿ ಕೆಲಸ ಮಾಡಲಿದ್ದಾರೆ ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಿಎಂಆರ್ ಶ್ರೀನಾಥ್ ಅವರನ್ನು ಆಯ್ಕೆ ಮಾಡಲಾಗಿದ್ದು ಅವರನ್ನು ಗೆಲ್ಲಿಸುವ ಮೂಲಕ ಕೋಲಾರ ಕ್ಷೇತ್ರವನ್ನು ಅಭಿವೃದ್ಧಿ ಮಾಡೋಣ ಜೊತೆಗೆ ಹಿಂದೆ ಜೆಡಿಎಸ್ ಪಕ್ಷ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ನಡೆಸಿದ ಅಂಶಗಳನ್ನು ಜನರಿಗೆ ತಿಳಿಸೋಣ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ವೆಂಕಟಾಚಲಗೌಡ, ಬಲಿಜ ಸಂಘದ ಅಶೋಕ್, ಖಾದ್ರಿಪುರ ಶ್ರೀರಾಮ್ ಬಾಬು, ಮಿಲ್ ಜಗದೀಶ್, ಅಮ್ಮೇರಹಳ್ಳಿ ಸತೀಶ್, ಕಾಶಿ, ಶಿವರಾಜ್, ವಿಜಿಗೌಡ, ಅರಹಳ್ಳಿ ಅಶ್ವಥ್ ನಾರಾಯಣ, ನಾಚೇಗೌಡ, ಶ್ರೀನಿವಾಸಯ್ಯ, ಕೃಷ್ಣಪ್ಪ, ಮುನಿವೆಂಕಟಪ್ಪ, ನಾರಾಯಣಸ್ವಾಮಿ, ದೇವಾರಜ್ ಯಲ್ಲಪ್ಪ, ಇದ್ದರು

Leave a Reply

Your email address will not be published. Required fields are marked *

You missed

error: Content is protected !!