• Thu. Apr 25th, 2024

ಇಂದಿನಿoದ ಜಿಲ್ಲೆಯ ೨೮ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲಾಡಳಿತ, ಪಿ.ಯು. ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ – ರಾಮಚಂದ್ರಪ್ಪ

PLACE YOUR AD HERE AT LOWEST PRICE

ಜಿಲ್ಲೆಯ ೨೮ ಕೇಂದ್ರಗಳಲ್ಲಿ ಮಾ.೯ ಆದ ಇಂದಿನಿoದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕೋಲಾರ ನಗರದಲ್ಲಿನ ೧೦ಕೇಂದ್ರಗಳು ಸೇರಿದಂತೆ ಎಲ್ಲಾ ಕೇಂದ್ರಗಳಲ್ಲೂ ಮಕ್ಕಳ ಸುರಕ್ಷತೆ, ಸೌಲಭ್ಯಗಳ ಕುರಿತು ನಿಗಾ ವಹಿಸಲಾಗಿದೆ, ಕೇಂದ್ರಗಳಲ್ಲಿ ಕುಡಿಯುವ ನೀರು, ಸಿಸಿ ಕ್ಯಾಮರಾ, ವಿದ್ಯಾರ್ಥಿಗಳಿಗೆ ಅಗತ್ಯ ಪ್ರಮಾಣದಲ್ಲಿ ಡೆಸ್ಕ್ ಮತ್ತಿತರ ಸೌಲಭ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳಲಾಗಿದ್ದು, ಇಂದು ಪರೀಕ್ಷಾ ಕಾರ್ಯನಿರ್ವಹಿಸುವ ಸಿಬ್ಬಂದಿ ಸಭೆ ನಡೆಸಿ ಮಾರ್ಗಸೂಚಿ ನೀಡಲಾಗಿದೆ ಮತ್ತು ನೋಂದಣಿ ಸಂಖ್ಯೆಗಳನ್ನು ಡೆಸ್ಕ್ ಮೇಲೆ ದಾಖಲಿಸುವ ಕಾರ್ಯವೂ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ೧೬೫೫೯ ವಿದ್ಯಾರ್ಥಿಗಳು ಕುಳಿತಿದ್ದು, ಈ ಬಾರಿ ಹೊಸದಾಗಿ ೬೪೪೪ ಬಾಲಕರು, ೭೨೯೧ ಬಾಲಕಿಯರು ಸೇರಿದಂತೆ ೧೩೭೩೫ ಹೊಸ ಅಭ್ಯರ್ಥಿಗಳು ಪರೀಕ್ಷೆಗೆ ಕುಳಿತಿದ್ದಾರೆ, ಪುನರಾವರ್ತಿತ ಅಭ್ಯರ್ಥಿಗಳಲ್ಲಿ ೧೩೭೯ ಬಾಲಕ, ೧೦೦೬ ಬಾಲಕಿಯರು ಸೇರಿದಂತೆ ೨೩೮೫ ಮಂದಿ ಪರೀಕ್ಷೆ ತೆಗೆದುಕೊಂಡಿದ್ದು, ಖಾಸಗಿಯಾಗಿ ೨೩೭ ಬಾಲಕ, ೨೦೨ ಬಾಲಕಿಯರು ಸೇರಿದಂತೆ ೪೩೯ ಮಂದಿ ಪರೀಕ್ಷೆಗೆ ಕುಳಿತಿದ್ದಾರೆ ಎಂದರು.

ಕೋಲಾರದಲ್ಲಿ ೧೦, ಬಂಗಾರಪೇಟೆ-೩, ಕೆಜಿಎಫ್-೩, ಶ್ರೀನಿವಾಸಪುರ-೩, ಮುಳಬಾಗಿಲು-೫, ಮಾಲೂರಿನಲ್ಲಿ ೪ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಇದರಲ್ಲಿ ೧೩ ಸರ್ಕಾರಿ, ೫ ಅನುದಾನಿತ, ೧೦ ಅನುದಾನರಹಿತ ಪರೀಕ್ಷಾ ಕೇಂದ್ರಗಳಾಗಿವೆ ಎಂದರು. ಜಿಲ್ಲೆಯಲ್ಲಿ ಪರೀಕ್ಷಾಕಾರ್ಯದಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗೆ ಗುರುತಿನ ಚೀಟಿ ನೀಡಲಾಗಿದೆ. ಇದ್ದರೆ ಮಾತ್ರವೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದು, ಅನಧಿಕೃತ ವ್ಯಕ್ತಿಗಳು ಕೇಂದ್ರದಲ್ಲಿ ಕಂಡು ಬಂದರೆ ಆಯಾ ಮುಖ್ಯಅಧೀಕ್ಷಕರನ್ನೇ ಹೊಣೆ ಮಾಡಲಾಗುವುದು ಎಂದರು.

ಪ್ರತಿ ಕೇಂದ್ರಕ್ಕೂ ಓರ್ವ ಮುಖ್ಯ ಅಧೀಕ್ಷಕರಿದ್ದು, ಅವರೊಂದಿಗೆ ಜಂಟಿ ಮುಖ್ಯ ಅಧೀಕ್ಷಕರು ಕಾರ್ಯನಿರ್ವಹಿಸುವರು, ಪ್ರಶ್ನೆಪತ್ರಿಕೆ ಬಂದಾಗ ಸ್ವೀಕರಿಸಿ, ಮಧ್ಯಾಹ್ನ ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್ ಅಲ್ಲಿಂದ ಹೋಗುವವರೆಗೂ ಇವರು ಅಲ್ಲೇ ಇದ್ದು, ಎಚ್ಚರವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಪ್ರಶ್ನೆಪತ್ರಿಕೆಗಳನ್ನು ಎಲ್ಲಾ ೨೮ ಕೇಂದ್ರಗಳಿಗೆ ಪರೀಕ್ಷೆಗೆ ಮುನ್ನಾ ಖಜಾನೆಯಿಂದ ಪಡೆದು ಸರಬರಾಜು ಮಾಡಲು ಪೊಲೀಸ್ ಬಂದೋಬಸ್ತ್ ಇರುವ ೯ ವಾಹನಗಳು ೯ ಮಾರ್ಗಗಳಲ್ಲಿ ಸಾಗಲಿವೆ ಎಂದು ತಿಳಿಸಿದರು.

ಕೋಲಾರದಲ್ಲಿ ೩ ಮಾರ್ಗ, ಮುಳಬಾಗಿಲು ೨, ಬಂಗಾರಪೇಟೆ, ಕೆಜಿಎಫ್,ಶ್ರೀನಿವಾಸಪುರ, ಮಾಲೂರುಗಳಲ್ಲಿ ತಲಾ ಒಂದೊoದು ಮಾರ್ಗಾಧಿಕಾರಿಗಳ ವಾಹನ ಪ್ರಶ್ನೆಪತ್ರಿಕೆಗಳನ್ನು ಕೇಂದ್ರಕ್ಕೆ ತಲುಪಿಸಲಿದೆ. ಈ ಎಲ್ಲಾ ವಾಹನಗಳಿಗೂ ಜಿಪಿಎಸ್ ಅಳವಡಿಸಿದ್ದು, ಯಾವುದೇ ಅವ್ಯವಹಾರ,ಪ್ರಶ್ನೆಪತ್ರಿಕೆ ಸೋರಿಕೆ ಮತ್ತಿತರ ಸಮಸ್ಯೆಗಳು ಎದುರಾಗದಂತೆ ಎಲ್ಲಾ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ನಕಲು,ಅವ್ಯವಹಾರ ತಡೆಯಲು ಕೇಂದ್ರ ಕಚೇರಿಯ ೨ ಜಾಗೃತದಳ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ೧, ಉಪನಿರ್ದೇಶಕರ ನೇತೃತ್ವದಲ್ಲಿ ೧ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಜಾಗೃತದಳಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಮಂಡಳಿಯಿoದಲೇ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಹೊರ ಜಿಲ್ಲೆಗಳ ತಲಾ ಇಬ್ಬರು ಸ್ಥಾನಿಕ ಜಾಗೃತದಳ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರಗಳಿಗೆ ಬಂದೋಬಸ್ತ್ ೨೦೦ಮೀ.ವ್ಯಾಪ್ತಿ ನಿಷೇದಾಜ್ಞೆ :
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲ್ಪಟ್ಟ ಪೊಲೀಸ್ ಅಧೀಕಾರಿಗಳು ಪರೀಕ್ಷಾ ಆರಂಭಕ್ಕೆ ಅರ್ಧಗಂಟೆ ಮುನ್ನಾ ಕರ್ತವ್ಯಕ್ಕೆ ಹಾಜರಾಗಬೇಕು ಮತ್ತುಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳ ಬಂಡೆಲ್‌ಗಳನ್ನು ಅಂಚೆ ಕಚೇರಿಗೆ ಪರೀಕ್ಷಾ ಸಿಬ್ಬಂದಿಯೊoದನೆ ತೆಗೆದುಕೊಂಡು ಹೋಗಲು ಸೂಚಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷೆ ನಡೆಯುವ ದಿನ ಬೆಳಗ್ಗೆ ೧೦-೧೫ ರಿಂದ ಮಧ್ಯಾಹ್ನ ೧-೩೦ ರವರೆಗೂ ೨೦೦ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ನಿಷೇದಾಜ್ಞೆ ಜಾರಿ ಮಾಡಿದ್ದು, ಈ ಭಾಗದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಪೋನ್, ಇ-ಕ್ಯಾಮರಾ, ಲ್ಯಾಪ್‌ಟಾಪ್ ಮತ್ತಿತರ ಎಲೆಕ್ಟಾçನಿಕ್ ಉಪಕರಣಗಳನ್ನು ತರದಂತೆ ಎಚ್ಚರಿಕೆ ನೀಡಿದ ಅವರು, ಎಲೆಕ್ಟಾçನಿಕ್, ಮುಳ್ಳಿನ ಕೈಗಡಿಯಾರವನ್ನೂ ತರುವಂತಿಲ್ಲ, ಸೈಂಟಿಫಿಕ್ ಕ್ಯಾಲುಕುಲೇಟರ್‌ಗೂ ಅವಕಾಶವಿಲ್ಲ, ಆದರೆ ಸಾಮಾನ್ಯ ಕ್ಯಾಲುಕುಲೇಟರ್ ಬಳಸಲು ಅವಕಾಶವಿದೆ. ಪರೀಕ್ಷೆಯಲ್ಲಿ ಗೊಂದಲಕ್ಕೆ ಅವಕಾಶವಾಗದಂತೆ ಕ್ರಮವಹಿಸಲಾಗಿದೆ ಎಂದರು. ಪರೀಕ್ಷೆಗೆ ಬರುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಆತಂಕ ಗೊಂದಲವಿಲ್ಲದೇ ಖುಷಿಯಿಂದ ಪರೀಕ್ಷೆ ಬರೆಯುವಂತೆ ತಿಳಿಸಿ ಶುಭ ಕೋರಿದ್ದಾರೆ.

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!