• Thu. Apr 25th, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಸುಗಮ ಪ್ರಥಮ ಭಾಷೆ ಕನ್ನಡಕ್ಕೆ ೬೩೨ ಗೈರು-ಪಿಯು ಡಿಡಿ ರಾಮಚಂದ್ರಪ್ಪ

ಕೋಲಾರ ಜಿಲ್ಲಾದ್ಯಂತ ೨೮ ಕೇಂದ್ರಗಳಲ್ಲಿ ಮಾ.೯ರ ಗುರುವಾರ ಆರಂಭಗೊoಡ ದ್ವಿತೀಯ ಪಿಯುಸಿ ಪ್ರಥಮ ಭಾಷೆ ಕನ್ನಡವ ಪರೀಕ್ಷೆ ಸುಗಮವಾಗಿ ನಡೆದಿದ್ದು, ೬೩೨ ಮಂದಿ ಗೈರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದರು.

ಈ ಕುರಿತು ಮಾಹಿತಿ ನೀಡಿರುವ ಅವರು, ಜಿಲ್ಲೆಯ ೨೮ ಕೇಂದ್ರಗಳಲ್ಲಿ ಇಂದು ಬೆಳಗ್ಗೆ ೧೦-೧೫ಕ್ಕೆ ಆರಂಭಗೊoಡಿದ್ದು, ಕನ್ನಡ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ ೧೨೪೦೩ ಮಂದಿ ಪೈಕಿ ೧೧೭೭೧ ಮಂದಿ ಹಾಜರಾಗಿದ್ದು, ೬೩೨ಮಂದಿ ಗೈರಾಗಿದ್ದರು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲೂ ಯಾವುದೇ ಸಮಸ್ಯೆಗಳು ಎದುರಾಗದಂತೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನಯ ಕೈಗೊಳ್ಳಲಾಗಿದ್ದು, ಮೊಬೈಲ್ ಬಳಕೆಗೆ ಪೂರ್ಣ ನಿಷೇಧ ಹೇರಲಾಗಿತ್ತು ಎಂದರು. ಈಗಾಗಲೇ ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ೧೪೪ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿತ್ತು ಎಂದರು.


ಶ್ರೀನಿವಾಸಪುರ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಯುಕೇಶ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.ಹೊರ ಜಿಲ್ಲೆಗಳಿಂದ ಪ್ರತಿ ಕೇಂದ್ರಕ್ಕೂ ತಲಾ ಇಬ್ಬರಂತೆ ಸ್ಥಾನಿಕ ಜಾಗೃತದಳ ಸಿಬ್ಬಂದಿಯನ್ನು ನಿಯೋಜಿಸಿದ್ದು, ಉಳಿದಂತೆ ಪಿಯು ಡಿಡಿ ನೇತೃತ್ವದ ತಂಡ ಹಾಗೂ ರಾಜ್ಯಮಟ್ಟದಿಂದಲೂ ಜಾಗೃತದಳ ತಂಡಗಳು ಭೇಟಿ ನೀಡಿದ್ದು, ಜಿಲ್ಲೆಯಲ್ಲಿ ಎಲ್ಲೂ ಪರೀಕ್ಷಾ ಅವ್ಯವಹಾರ ನಡೆದ ಬಗ್ಗೆ ವರದಿಯಾಗಲ್ಲ ಎಂದು ತಿಳಿಸಿದರು.

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!