• Sat. Mar 2nd, 2024

PLACE YOUR AD HERE AT LOWEST PRICE

ಕೆಜಿಎಫ್:ರಾಜ್ಯದಲ್ಲಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಬಹುಮತದ ಸರಕಾರ ರಚನೆಯಾಗಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಲಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಡಾ.ರಮೇಶ್ ಬಾಬು ಹೇಳೀದರು.

ಅವರು ಕೆಜಿಎಫ್ ವಿಧಾನ ಸಭಾ ಕ್ಷೇತ್ರದ ಗ್ರಾಮಾಂತರ ಭಾಗದ ಘಟ್ಟಮಾದಮಂಗಲ ಗ್ರಾಪಂ, ಮಾರಿಕುಪ್ಪ ಗ್ರಾಪಂ ಹಾಗೂ ಪಾರಂಡಹಳ್ಳಿ ಗ್ರಾಪಂನ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತದಾರರ ಬಳಿ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯ ಮಂತ್ರಿಯಾದರೆ ರಾಜ್ಯದ ಚಿತ್ರಣ ಬದಲಿಸಿ ಅಭೀವೃದ್ಧಿ ದೃಷ್ಠಿಯಿಂದ ತಕ್ಷಣ ರೈತರಿಗೆ ಹಾಗೂ ರೈತರ ಮಕ್ಕಳ ಭವಿಷ್ಯಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಿದ್ದಾರೆಂದರು.

2018ರಲ್ಲಿ ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ್ದರು. ಅದೇ ರೀತಿ ಈ ಭಾರಿ ರಾಜ್ಯದ ಎಲ್ಲಾ ಡಿಸಿಸಿ ಬ್ಯಾಂಕಿನ ಸಾಲ ಮನ್ನಾ ಮಾಡುವ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೋತ್ಸಹ ನೀಡಲಿದ್ದಾರೆಂದರು.

ಕೆಜಿಎಫ್ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದೀರಿ ಅದರೆ ಅಭಿವೃದ್ಧಿ ಮಾತ್ರ ಸಾಧ್ಯವಾಗಿಲ್ಲ, ಈ ಭಾರಿ ಅಭಿವೃದ್ಧಿಯಲ್ಲಿ ಬದಲಾವಣೆ ಕಾಣಲು ಜೆಡಿಎಸ್ ಪಕ್ಷಕ್ಕೆ ಒಂದು ಅವಕಾಶ ಕಲ್ಪಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಪಂ ಸದಸ್ಯ ಮಂಜುನಾಥ್ ಮೊದಲಾದವರಿದ್ದರು.

Leave a Reply

Your email address will not be published. Required fields are marked *

You missed

error: Content is protected !!