• Fri. Apr 26th, 2024

PLACE YOUR AD HERE AT LOWEST PRICE

ಕೆಜಿಎಫ್:ಗ್ರಾಮಾಂತರ ಭಾಗದ ಹೋಬಳಿ ಕೇಂದ್ರವಾದ ಬೇತಮಂಗಲದಲ್ಲಿ ಸೂಕ್ತ ಮಾರುಕಟ್ಟೆ ಮಾಡುವುದರಲ್ಲಿ ಶಾಸಕಿ ರೂಪಕಲಾರವರು ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಎಸ್.ರಾಜೇಂದ್ರನ್ ಆರೋಪಿಸಿದರು.

ಬೇತಮಂಗಲದ ಹೊಸ ಬಡಾವಣೆಯ ಸಂತೆ ಮೈದಾನದಲ್ಲಿ ಆರ್‍ಪಿಐ ಪಕ್ಷದ ನೂತನ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಮಾತನಾಡಿ, ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ ಎಂದರು.

ಶಾಸಕಿ ರೂಪಕಲಾ ಶಶಿಧರ್ ಪ್ರತಿ ಭಾರಿ ಭಾಷಣ ಮಾಡುವಾಗ 500 ಕೋಟಿಯಲ್ಲಿ ಅಭಿವೃದ್ಧಿ ಮಾಡಿದ್ದೀವಿ ಅಂತ ಹೇಳುತ್ತಾರೆ, ಅದರೆ 500 ಕೋಟಿ ಅನುದಾನದಲ್ಲಿ ಏನು ಅಭಿವೃದ್ಧಿಯಾಗಿದೆ, ಕ್ಷೇತ್ರದ ಹಳ್ಳಿ ಭಾಗದ ರಸ್ತೆಗಳಲ್ಲಿ ಸಂಚಾರ ಮಾಡಲು ಆಗುವುದಿಲ್ಲ ಎಂದರು.

ನಾನು ಮೊದಲು ಶಾಸಕರಾಗಿ ಆಯ್ಕೆಯಾದಾಗ ಕೆಜಿಎಫ್ ನಗರದಲ್ಲಿ ಕಾಲೇಜು ಸ್ಥಾಪನೆ ಮಾಡಿದ್ದೇನೆ. ಈ ಭಾರಿ ಶಾಸಕನಾಗಿ ಆಯ್ಕೆಯಾದರೆ ಕ್ಯಾಸಂಬಳ್ಳಿ ಹಾಗೂ  ಬೇತಮಂಗಲ ಹೋಬಳಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕಾಲೇಜು ಸ್ಥಾಪನೆ ಮಾಡುವುದಾಗಿ ತಿಳಿಸಿದರು.

ಗ್ರಾಮಾಂತರ ಭಾಗದ ಜನರು ಆರೋಗ್ಯ ತೊಂದರೆಗಾಗಿ ಕೆಜಿಎಫ್, ಕೋಲಾರ ನಗರಗಳಿಗೆ ತೆರಳಿ ಚಿಕಿತ್ಸೆ ಪಡೆಯಬೇಕಾಗಿದೆ. ನಾನು ಶಾಸಕನಾಗಿ ಆಯ್ಕೆಯಾದರೆ ಸುಂದರಪಾಳ್ಯ ಭಾಗದಲ್ಲಿ ಸುಸಜ್ಜಿತ ಆಸ್ವತ್ರೆಯನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದರು.

ಕಾರ್ಯಕರ್ತರ ಒತ್ತಾಯದ ಮೇರಿಗೆ ಬೇತಮಂಗಲ ಹೋಬಳಿಯಲ್ಲಿ ಕಛೇರಿಯನ್ನು ಉದ್ಘಾಟನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸುಂದರಪಾಳ್ಯ ಹಾಗೂ ಕ್ಯಾಸಂಬಳ್ಳಿ ಹೋಬಳಿ ಕೇಂದ್ರಗಳಲ್ಲಿಯೂ ಪಕ್ಷದ ಕಛೇರಿಗಳನ್ನು ಉದ್ಘಾಟನೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಸುರೇಶ್ ಬಾಬು, ಶ್ರೀನಿವಾಸ್, ನಾರಾಯಣಸ್ವಾಮಿ, ಅನಂದ್, ಸುರೇಶ್, ರಫೀಕ್, ಮಹಮದ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!