* ಪಕ್ಷದ ಯೋಜನೆಯ ಬಗ್ಗೆ ಪ್ರಚಾರ.*
ಕೆಜಿಎಫ್:ಕೆಜಿಎಫ್ ವಿಧಾನ ಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಸರ್ವಾಗೀಣ ಅಭಿವೃದ್ಧಿಗಾಗಿ ಒಂದು ಭಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಎಂದು ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮನವಿ ಮಾಡಿದರು.
ತಾಲ್ಲೂಕಿನ ಸುಂದರಪಾಳ್ಯ ಗ್ರಾಪಂಯ ರಾಯಸಂದ್ರ ಹಾಗೂ ಗೋಪೇನಹಳ್ಳಿ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ ಬಗ್ಗೆ ಮನೆ-ಮನೆಗೂ ಭೇಟಿ ನೀಡಿ ಪ್ರಚಾರ ಮಾಡಿ ಅವರು ಮಾತನಾಡಿದರು.
ಕೆಜಿಎಫ್ ವಿಧಾನ ಸಭಾ ಕ್ಷೇತ್ರವು ಅಭಿವೃದ್ಧಿಯಲ್ಲಿ ಭಾರಿ ಕುಂಠಿತವಾಗಿದೆ. ತಾಲ್ಲೂಕಿನ ಜನತೆ ನಿತ್ಯ ಅನೇಕ ಸಮಸ್ಯೆಗಳ ಮದ್ಯೆ ಜೀವನ ನಡೆಸುತ್ತಿದ್ದಾರೆ. ಸುಮಾರು 10-15 ವರ್ಷಗಳಿಂದ ತಾಲ್ಲೂಕು ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂದರು.
ಗ್ರಾಮೀಣ ಭಾಗದ ಬಹುತೇಕ ಗ್ರಾಮಗಳಲ್ಲಿ ಬಡ ಜನರು ಗುಡಿಸಲಿನಿಂದಲ್ಲೇ ಜೀವನ ನಡೆಸುತ್ತಿದ್ದಾರೆ. ಹಾಲಿ ಶಾಸಕರು ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುವುದರಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಕೆಜಿಎಫ್ ಜನತೆಯು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿ ಮೋಸ ಹೋಗಿದ್ದೀರಿ. ಒಂದು ಭಾರಿ ಪ್ರಾದೇಶಿಕ ಪಕ್ಷಕ್ಕೆ ಅವಕಾಶ ನೀಡಿ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಬದಲಾವಣೆ ಮಾಡಿ ರಾಜ್ಯಕ್ಕೆ ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ ಎಂದರು.
ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣೆಗಾಗಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಅದರೆ ಯಾರಿಂದಲ್ಲೂ ಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಆಗಿಲ್ಲ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೈಗಾರಿಕೆಗಳನ್ನು ನಿರ್ಮಿಸಿ ಸಾವಿರಾರೂ ಮಂದಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಪಂ ಸದಸ್ಯ ಮಂಜುನಾಥ್, ಮುಖಂಡರಾದ ಗಣೇಶ್, ಮಂಜುನಾಥ್, ಕೃಷ್ಣಂರಾಜು ಮೊದಲಾದವರಿದ್ದರು.