ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರಕ್ಕೆ ಬರಬೇಕೆಂಬುದು ನನ್ನ ಅಭಿಲಾಷೆ ಆದರೆ ಇನ್ನೂ ಹೈಕಮಾಂಡ್ ಈ ಕುರಿತು ಅಂತಿಮ ನಿರ್ಧಾರ ಪ್ರಕಟಿಸಿಲ್ಲ, ಅವರು ಬಾರದಿದ್ದರೆ ನಾನೂ ಸಹಾ ಇಲ್ಲಿನ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.
ಕೋಲಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ಸಿನ ಪರಮೋಚ್ಛ ನಾಯಕ ಸಿದ್ದರಾಮಯ್ಯ ನನಗೆ ಕೋಲಾರದಲ್ಲಿ ಸ್ಪರ್ಧೆ ಮಾಡುವುದಕ್ಕೆ ಆಸೆ ಇದೆ ಆದರೆ ಹೈಕಮಾಂಡ್ ಎಲ್ಲಿ ಸೂಚಿಸುತ್ತದೆ ಅಲ್ಲಿ ಸರ್ಧೆ ಮಾಡುತ್ತೆನೆ ಅಂತ ಈಗಾಗಲೆ ಹೇಳಿದ್ದಾರೆ, ಅದು ಹೈಕಮಾಂಡ್ ಹಂತದಲ್ಲಿ ಚರ್ಚೆ ನಡೆಯುತ್ತಿದೆ ಇನ್ನು ಕೆಲವೇ ದಿನಗಳಲ್ಲಿ ಅಂತಿಮ ತೀರ್ಮಾನ ಬರುತ್ತದೆ ಹೀಗಾಗಿ ಕೋಲಾರದಲ್ಲಿ ಯಾವುದೇ ರೀತಿಯ ಆತಂಕವಿಲ್ಲ ಎಂದು ತಿಳಿಸಿದರು.
ಡಿಕೆ ಶಿವಕುಮಾರ್ ಅವರು ಸತತವಾಗಿ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಅವಿಭಜಿತ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯ ವಿಚಾರವಾಗಿ ಏನು ನಿಮ್ಮ ತೀರ್ಮಾನ ಎಂದು ಕೇಳಿದ್ದಾರೆ, ಇಂತಹ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಅಂತ ಹೇಳಿಲ್ಲ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡಿದರೆ ಸಂತೋಷ ಒಂದು ವೇಳೆ ಆಗದಿದ್ದರೆ ಕೋಲಾರದಲ್ಲಿ ಸ್ಪರ್ಧಿಸಲು ತಾನು ಸಿದ್ದನಿದ್ದು, ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್ ಅವರ ಸೂಚನೆ ಪಾಲಿಸುತ್ತೇನೆ ಎಂದರು.
ಸಿದ್ದರಾಮಯ್ಯ ಬಂದರೆ ಇದು ಹೈವೋಲ್ಟೇಜ್ ಕ್ಷೇತ್ರವಾಗಲಿದೆ, ಅವರು ಬಹಳ ಎತ್ತರದ ವ್ಯಕ್ತಿ ರಾಜ್ಯದ ಎಲ್ಲ ಮೂಲೆಯಲ್ಲ ಆಕರ್ಷಕ ವಿರುವಂತಹ ವ್ಯಕ್ತಿತ್ವ ಅವರದ್ದಾಗಿದ್ದು, ಎಲ್ಲೇ ನಿಂತರೂ ಗೆಲುವನ್ನು ತಡೆಯಲು ಸಾಧ್ಯವಿಲ್ಲ ಎಂದರು.