• Mon. May 29th, 2023

ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: ೭೦/೨೦೨೨ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ ಬಿ.ಪಿ.ದೇವಮಾನೆ ರವರು ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ಮುಬಾರಕ್ ಪಾಷಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ೨೦ ವರ್ಷ ಸಜೆ ಜೊತೆಗೆ ರೂ.೨೦,೦೦೦/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ ೬ ತಿಂಗಳ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.೪,೦೦,೦೦೦/- ಗಳನ್ನು ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!