• Mon. May 29th, 2023

ಕೆಜಿಎಫ್:ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಕಂಗಾಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಕಸಿರೆಡ್ಡಿಗಾಂಡ್ಲಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈ ಮಾಸ್ಟ್ ದೀಪ ಉದ್ಘಾಟನೆ ನೆರವೇರಿಸಿದರು.

ಈ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಾಮದ ಸಾರ್ವಜನಿಕರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಶುದ್ದ ಕುಡಿಯುವ ನೀರಿನ ಘಟಕ ಅಳವಡಿಸಿ ಕೊಡಲು ಮನವಿ ಸಲ್ಲಿಸಿದ್ದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕಿ ತಮ್ಮ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದಲ್ಲಿ ರೂ.10.00 ಲಕ್ಷ ಅನುದಾನ ನೀಡಿ ಶುದ್ದ ಕುಡಿಯುವ ನೀರಿನ ಘಟಕವನ್ನು ಅಳವಡಿಸಲು ಅನುದಾನ ಬಿಡುಗಡೆಗೊಳಿಸಿದ್ದರು.

ಜೊತೆಗೆ ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ಹೈ ಮಾಸ್ಟ್ ದೀಪ ಅಳವಡಿಸಿದ್ದು ಇದೇ ವೇಳೆ ಹೈ ಮಾಸ್ಟ್ ದೀಪವನ್ನು ಉದ್ಘಾಟಿಸಿ ಶಾಸಕಿ ಮಾತನಾಡಿ ಪ್ರತಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳನ್ನು ತಮ್ಮ ಇತಿ ಮಿತಿಯಲ್ಲಿ ಪೂರೈಸಲು ಪ್ರಯತ್ನಿಸಿರುವುದಾಗಿ ತಿಳಿಸಿದರು.

ಕ್ಷೇತ್ರದಲ್ಲಿ ತಮ್ಮ ಶಕ್ತಿ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ರಸ್ತೆ, ಚರಂಡಿ, ಕೊಳವೆ ಬಾವಿಗಳು, ಶುದ್ದ ನೀರಿನ ಘಟಕಗಳು, ಹೈ ಮಾಸ್ಟ್ ದೀಪಗಳು ಹಾಗೂ ಇನ್ನಿತರೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಸುಮಾರು ರೂ. 350.00 ಕೋಟಿಗೂ ಅಧಿಕ ಅನುದಾನದಲ್ಲಿ ಕೈಗೊಂಡಿರುವುದಾಗಿ ತಿಳಿಸಿದರು.

ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾತನಾಡಿ  2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಖಚಿತ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಹಲವು ಯೋಜನೆಗಳನ್ನು ಜಾರಿಗೆ ತರಲಿದೆ.

ಗೃಹಲಕ್ಷ್ಮಿ ರೂ.2000  ಮನೆ ಯಜಮಾನಿಗೆ ಪ್ರತಿ ತಿಂಗಳು, ಗೃಹಜ್ಯೋತಿ 200 ಯೂನಿಟ್  ಪ್ರತಿ ಮನೆಗೆ ಉಚಿತ ವಿದ್ಯುತ್, ಅನ್ನಭಾಗ್ಯ 10 ಕೆ.ಜಿ. ಅಕ್ಕಿ ನಿರುದ್ಯೋಗಿ ಪದವೀಧರರಿಗೆ ರೂ.3000 ಮತ್ತು ನಿರುದ್ಯೋಗಿ ಡಿಪ್ಲೊಮಾ ಪದವೀದರರಿಗೆ ರೂ.1500 ಭತ್ಯೆ.

ಕಾಂಗ್ರೆಸ್ ಹಮ್ಮಿಕೊಳ್ಳಲಾಗಿರುವ ಯೋಜನೆಗಳಿಂದ ಪ್ರತಿ ಬಡ ಕುಟುಂಬ ನೆಮ್ಮದಿಯ ಜೀವನ ನಡೆಸಲು ಅನುವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಧಕೃಷ್ಣಾರೆಡ್ಡಿ, ಆನಂದಮೂರ್ತಿ, ವಿಜಯರಾಘವರೆಡ್ಡಿ,  ಪದ್ಮನಾಭರೆಡ್ಡಿ, ಶ್ರೀನಿವಾಸರೆಡ್ಡಿ (ಎನ್.ಟಿ.ಆರ್) ತಿಪ್ಪಣ್ಣ, ವಿದ್ಯಾದರ್, ಪಾಪಿರೆಡ್ಡಿ, ಜಗನ್ನಾತ್ ರೆಡ್ಡಿ, ಪಟ್ಟಾಬಿ ನಾಯ್ಡು  ಹಾಗೂ ಪ್ರಮುಖ ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *

You missed

error: Content is protected !!