• Sun. Apr 28th, 2024

PLACE YOUR AD HERE AT LOWEST PRICE

ಕೆಜಿಎಫ್:ಗಡಿಯಲ್ಲಿ ಸೈನಿಕ ತನ್ನ ಸಂಸಾರ, ಮಕ್ಕಳು, ಪರಿವಾರವನ್ನೆಲ್ಲ ಮರೆತು ಹಗಲಿರುಳು ಪಹರೆ ಕಾಯುವ ರೀತಿಯಲ್ಲಿ ಯುವ ಮೋರ್ಚಾ ಕಾರ್ಯಕರ್ತರೆಲ್ಲರೂ ಹಗಲಿರುಳು ವಿರಮಿಸದೇ ಚುನಾವಣೆ ಮುಗಿಯುವವರೆಗೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ದುಡಿಯಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು.

ಅವರು ನಗರದ ಮಲಯಾಳಿ ಮೈದಾನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿ, ರಾಜ್ಯ ಮತ್ತು ಕೇಂದ್ರದ ನಾಯಕರು ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಲಿ ಅವರನ್ನು ಗೆಲ್ಲಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡುವ ಕೆಲಸವನ್ನು ಮಾಡಬೇಕಾಗಿದ್ದು, ಹಾಗೆ ಮಾಡಿದಲ್ಲಿ ಮಾತ್ರ ಜಿಲ್ಲೆಯ ಎಲ್ಲಾ 6 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕಾಂಗ್ರೆಸ್ ನವರು ಇಲ್ಲಿಯವರೆಗೆ ತಾವು ಏನೆಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ, ಮುಂದೆ ಏನು ಮಾಡುತ್ತೇವೆ ಎಂಬುದರ ಬಗ್ಗೆ ತಿಳಿಸಿ ಮತಯಾಚನೆ ಮಾಡದೇ, ಈ ಬಾರಿ ಅಧಿಕಾರಕ್ಕೆ ಬಂದರೆ ಅದು ಮಾಡುತ್ತೇವೆ, ಇದು ಮಾಡುತ್ತೇವೆ ಎಂದು ಪೊಳ್ಳು ಭರವಸೆಗಳ ಗ್ಯಾರಂಟಿಯನ್ನು ಕೊಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಸಂವಿಧಾನ ರಚಿಸಿದ ಅಂಬೇಡ್ಕರ್‍ರವರು ನಿಧನವಾದ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಗೌರವಯುತವಾಗಿ ಅವರ ಅಂತ್ಯ ಸಂಸ್ಕಾರ ಮಾಡಲು 6*3 ಜಾಗವನ್ನು ನೀಡಲಿಲ್ಲ. ಆದರೆ ಚುನಾವಣೆಗಳು ಬಂದೊಡನೆ ಕಾಂಗ್ರೆಸ್ ಪಕ್ಷದವರು ಅಂಬೇಡ್ಕರ್‍ರವರ ಜಪ ಮಾಡುತ್ತಾರೆ ಎಂದು ವ್ಯಂಗ್ಯ ಮಾಡಿದರು.

ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷ ಹಾಗೂ ಕರ್ನಾಟಕ ಚುನಾವಣೆ ಸಹ ಉಸ್ತುವಾರಿ ಅಣ್ಣಾಮಲೈ ಮಾತನಾಡಿ, ನಿಜವಾಗಿಯೂ ರೈತರ ಪರವಾಗಿ ಕೆಲಸ ಮಾಡುವ ಸರ್ಕಾರವೆಂದರೆ ಅದು ಬಿಜೆಪಿ ಮಾತ್ರವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳಿಗೆ ರಾಜ್ಯದ ಯಾವೊಬ್ಬ ರೈತನೂ ಮತವನ್ನು ನೀಡಬಾರದು ಎಂದು ಕಿವಿಮಾತು ಹೇಳಿದರು.

ಕರ್ನಾಟಕದಲ್ಲಿ ಪ್ರಧಾನಿಯಾಗಿ ನಾನು ನಿಮಗೆ ಸೇವೆ ಮಾಡಬೇಕೆಂದರೆ ಬಿಜೆಪಿ ಪಕ್ಷಕ್ಕೆ 150 ಸೀಟುಗಳ ಸ್ಪಷ್ಟ ಬಹುಮತವನ್ನು ನೀಡಿದಲ್ಲಿ ಮಾತ್ರ ನಿಜವಾದ ಡಬಲ್ ಇಂಜಿನ್ ಸರ್ಕಾರದ ಶಕ್ತಿಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇಡೀ ಜಿಲ್ಲೆಯ ಅಭಿವೃದ್ಧಿ ಕೇವಲ ಒಬ್ಬ ಸಂಸದರು ಕನಸು ಕಂಡರೆ ಸಾಧ್ಯವಿಲ್ಲ, ಸಂಸದರೊಂದಿಗೆ ಜಿಲ್ಲೆಯ ಎಲ್ಲ 6 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರೆ ಮಾತ್ರ ಸಂಸದರು ಕಂಡ ಕನಸನ್ನು ನನಸು ಮಾಡಲು ಸಾಧ್ಯವಾಗುತ್ತದೆ.

ಇತರೆ ರಾಜ್ಯಗಳಲ್ಲಿ ಪಿಎಂ ಕಿಸಾನ್ ಯೋಜನೆಯಲ್ಲಿ 6 ಸಾವಿರ ರೂ ರೈತರ ಖಾತೆಗಳಿಗೆ ಬರುತ್ತಿದ್ದರೆ, ಕರ್ನಾಟಕದಲ್ಲಿ 10 ಸಾವಿರ ರೂಗಳು ಜಮೆಯಾಗುತ್ತಿದೆ. ಅಲ್ಲದೇ ರೈತರ ಮಕ್ಕಳಿಗಾಗಿ ರೈತ ಮಿತ್ರ ಯೋಜನೆಯಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುತ್ತಿರುವ ಏಕೈಕ ಸರ್ಕಾರ ಬಿಜೆಪಿ ಮಾತ್ರ ಎಂದರು.

ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸಿ ಇಷ್ಟುದ್ದಕ್ಕೆ ಗಡ್ಡ ಬೆಳೆಸಿಕೊಂಡರೇ ಹೊರತೂ ತಲೆಯಲ್ಲಿ ಬುದ್ಧಿಯನ್ನು ಬೆಳೆಸಿಕೊಳ್ಳಲಿಲ್ಲ ಎಂದು ವ್ಯಂಗ್ಯವಾಡಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಮನೆಗೆ ಕಳುಹಿಸುವ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಮಾಡಬೇಕೆಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಾಲಾಜಿ, ರಾಜ್ಯ ಕಾರ್ಯದರ್ಶಿ  ಹಾಗೂ ಮೋರ್ಚಾ ಸಮಾವೇಶಗಳ ಸಹ ಉಸ್ತುವಾರಿ ಜಗದೀಶ್, ನಗರ ಘಟಕ ಅಧ್ಯಕ್ಷ ಕಮಲ್‍ನಾಥ್, ಗ್ರಾಮಾಂತರ ಅಧ್ಯಕ್ಷ ಜಯಪ್ರಕಾಶ್‍ನಾಯ್ಡು, ಮಾಜಿ ಶಾಸಕರಾದ ವೈ.ಸಂಪಂಗಿ, ಬಿ.ಪಿ.ವೆಂಕಟಮುನಿಯಪ್ಪ, ಎಂ.ನಾರಾಯಣಸ್ವಾಮಿ, ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣ, ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಮೊದಲಾದವರು ಇದ್ದರು

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!