• Fri. May 3rd, 2024

PLACE YOUR AD HERE AT LOWEST PRICE

ಬಂಗಾರಪೇಟೆ:2023ರ ವಿಧಾನಸಭಾ ಚುನಾವಣೆಯಲ್ಲಿ ಸಂವಿಧಾನದ ನಿಯಮಗಳ ಅಡಿಯಲ್ಲಿ ಸುಭದ್ರ ಬಲಿಷ್ಠ, ರಾಜ್ಯ ಕಟ್ಟುವ ನಿಟ್ಟಿನಲ್ಲಿ ಜಾತ್ಯಾತೀತ ಪಕ್ಷಕ್ಕೆ ಬೆಂಬಲಿಸಲಾಗುವುದು, ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿರವರು ದೂರ ದೃಷ್ಟಿಯ ಅಭಿವೃದ್ಧಿಯ ಪರಿಕಲ್ಪನೆಗಳನ್ನು ಹೊಂದಿದ್ದು,  ಉತ್ತಮ ಾಡಳಿತಗಾರರಾಗಿದ್ದಾರೆ.

ಮಾರ್ಚ್ 26ರಂದು ಸಲಹಾ ಸಮಿತಿ ಸದಸ್ಯರಾದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಔಪಚಾರಿಕವಾಗಿ ಭೇಟಿ ಮಾಡಿ ಚರ್ಚಿಸಲಾಗಿದ್ದು, ಎರಡು ದಿನಗಳಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಆನಂದ್ ಅಂಬೇಡ್ಕರ್ ಬೆಂಗಳೂರಿಗೆ ಆಗಮಿಸಲಿದ್ದು ಮತ್ತೊಮ್ಮೆ ಚರ್ಚಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಬಗ್ಗೆ ತೀರ್ಮಾನಿಸಲಾಗುವುದು.

ದೇಶವು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಸೈದ್ಧಾಂತಿಕ ನೆಲಗಟ್ಟಿನಲ್ಲಿ ಅಭದ್ರತೆಯಿಂದ ಕೂಡಿದೆ. ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಜಾತ್ಯಾತೀತ ಶಕ್ತಿಗಳು ಒಟ್ಟಾಗಿ ಸುಭದ್ರ  ರಾಷ್ಟ್ರ ನಿರ್ಮಾಣದ ಕಾರ್ಯಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಜಾತ್ಯಾತೀತ ಪಕ್ಷವನ್ನು ಬೆಂಬಲಿಸಬೇಕೆಂದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಕಾಂಗ್ರೆಸ್ ಮುಖಂಡ ಚಂದು, ಪುರಸಭಾ ಸದಸ್ಯ ಶಫಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಸುಹೇಲ್, ಜಿಲ್ಲಾಧ್ಯಕ್ಷ ಚಿಕ್ಕನಾರಾಯಣ, ರಾಜ್ಯ ಮುಖಂಡ ನಾಗೇಶ್, ಶ್ರೀನಿವಾಸ್, ಸಕ್ಕನಹಳ್ಳಿ ಮುನಿರಾಜು, ರಾಮು ಮೊದಲಾದವರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!