• Tue. Apr 23rd, 2024

ಖುಷಿಯಿಂದ ಪರೀಕ್ಷೆ ಬರೆದ ಮಕ್ಕಳು-ಎಸ್ಸೆಸ್ಸೆಲ್ಸಿ ಮೊದಲ ದಿನದ ಪರೀಕ್ಷೆ ಯಶಸ್ವಿ ಪ್ರಥಮ ಭಾಷೆಗೆ ೨೪೪ ಮಂದಿ ಗೈರು-ಲೋಪಕ್ಕೆ ಎಡೆಯಿಲ್ಲ-ಡಿಡಿಪಿಐ ಕೃಷ್ಣಮೂರ್ತಿ

PLACE YOUR AD HERE AT LOWEST PRICE

 

ಕೋಲಾರ ಜಿಲ್ಲೆಯ ೮೩ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಖಾಸಗಿ ಅಭ್ಯರ್ಥಿಗಳು ೬೭ ಮಂದಿ, ಹೊಸ ಅಭ್ಯರ್ಥಿಗಳು ೧೭೭ ಮಂದಿ ಸೇರಿದಂತೆ ಒಟ್ಟು ೨೪೪ ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.

ನಗರದ ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಬರುವ ಮಕ್ಕಳಿಗೆ ಸ್ವತಃ ಹೂ ನೀಡಿ ಸ್ವಾಗತಿಸಿ, ಶುಭ ಕೋರಿದ ಅವರು, ಪರೀಕ್ಷೆ ಮುಗಿದ ನಂತರ ಮಾಧ್ಯಮಗಳಿಗೆ ಮಾಹಿತಿ ಒದಗಿಸಿದರು.೨೦೨೦ರ ಮಾರ್ಚ್ನಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ೩೧೦ ವಿದ್ಯಾರ್ಥಿಗಳು ಮೊದಲ ದಿನ ಗೈರಾಗಿದ್ದರು ಆದರೆ ಈ ಬಾರಿ ಅದರ ಪ್ರಮಾಣ ಕೇವಲ ೨೪೪ಕ್ಕಿಳಿದಿದೆ ಎಂದರು.

ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ ೧೯೮೧೩ ವಿದ್ಯಾರ್ಥಿಗಳ ಪೈಕಿ ೧೯೫೬೯ ಮಂದಿ ಹಾಜರಾಗಿದ್ದು, ೨೪೪ ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೇ ಸುಗಮವಾಗಿ ನಡೆದಿದೆ ಎಂದು ತಿಳಿಸಿದರು. ಬಂಗಾರಪೇಟೆ ತಾಲ್ಲೂಕಿನ ೯ ಕೇಂದ್ರಗಳಲ್ಲಿ ಪ್ರಥಮ ಭಾಷೆಗೆ ೨೩೯೦ ಮಂದಿ ನೊಂದಾಯಿಸಿದ್ದು, ೨೩೬೮ ಮಂದಿ ಹಾಜರಾಗಿ ೨೨ ಮಂದಿ ಗೈರಾಗಿದ್ದಾರೆ, ಕೆಜಿಎಫ್ ತಾಲ್ಲೂಕಿನ ೧೩ ಕೇಂದ್ರಗಳಲ್ಲಿ ೩೨೨೫ ಮಕ್ಕಳು ಹೆಸರು ನೊಂದಾಯಿಸಿದ್ದು, ೩೧೮೫ ಮಂದಿ ಹಾಜರಾಗಿ ೪೦ ಮಂದಿ ಗೈರಾಗಿದ್ದಾರೆ.

ಕೋಲಾರ ತಾಲ್ಲೂಕಿನ ೨೨ ಕೇಂದ್ರಗಳಲ್ಲಿ ೪೯೮೭ ಮಂದಿ ಹೆಸರು ನೊಂದಾಯಿಸಿದ್ದು, ೪೯೩೩ ಮಂದಿ ಹಾಜರಾಗಿ ಕೇವಲ ೫೪ ಮಂದಿ ಗೈರಾಗಿದ್ದಾರೆ. ಮಾಲೂರು ತಾಲ್ಲೂಕಿನ ೧೪ ಕೇಂದ್ರಗಳಲ್ಲಿ ೩೦೫೮ ಮಂದಿ ಹೆಸರು ನೊಂದಾಯಿಸಿದ್ದು, ೩೦೪೩ ಮಂದಿ ಹಾಜರಾಗಿದ್ದು, ೧೫ ಮಂದಿ ಗೈರಾಗಿದ್ದಾರೆ. ಮುಳಬಾಗಿಲು ತಾಲ್ಲೂಕಿನ ೧೩ ಕೇಂದ್ರಗಳಲ್ಲಿ ೩೦೬೮ ಮಂದಿ ನೊಂದಾಯಿಸಿದ್ದು, ೩೦೩೮ ಮಂದಿ ಹಾಜರಾಗಿದ್ದು, ೩೦ ಮಂದಿ ಗೈರಾಗಿದ್ದಾರೆ, ಶ್ರೀನಿವಾಸಪುರ ತಾಲ್ಲೂಕಿನ ೧೩ ಕೇಂದ್ರಗಳಲ್ಲಿ ೨೫೮೫ ಮಂದಿ ಹೆಸರು ನೊಂದಾಯಿಸಿದ್ದು, ೨೫೬೯ ಮಂದಿ ಹಾಜರಾಗಿದ್ದು, ೧೬ ಮಂದಿ ಗೈರಾಗಿದ್ದಾರೆ.

ಕೋಲಾರದ ಖಾಸಗಿ ಅಭ್ಯರ್ಥಿಗಳ ಕೇಂದ್ರದಲ್ಲಿ ೫೦೦ ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಅವರಲ್ಲಿ ೪೩೩ ಮಂದಿ ಹಾಜರಾಗಿದ್ದು, ಉಳಿದ ೬೭ ಮಂದಿ ಗೈರಾಗಿದ್ದಾರೆ ಎಂದು ತಿಳಿಸಿದರು.ಮೊದಲ ದಿನದ ಪರೀಕ್ಷೆಯಲ್ಲಿ ಜಿಲ್ಲಾದ್ಯಂತ ಯಾವುದೇ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳು ನಡೆದ ಬಗ್ಗೆ ವರದಿಯಾಗಿಲ್ಲ, ಪರೀಕ್ಷೆ ಸುಗಮವಾಗಿ ನಡೆಸುವಲ್ಲಿ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ, ಎಸ್ಪಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಸಹಕಾರ ನೀಡಿದ್ದಾರೆ ಎಂದರು.

ಆಶಾಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಥರ್ಮಲ್ ಸ್ಕಿçÃನಿಂಗ್ ಹಾಗೂ ಸ್ಯಾನಿಟೈಸರ್ ಹಾಕಲು ಬಂದಿದ್ದರಾದರೂ, ಕೋವಿಡ್ ಆತಂಕವಿಲ್ಲದ ಕಾರಣ ಮಕ್ಕಳು ನೇರವಾಗಿ ಪರೀಕ್ಷಾ ಕೊಠಡಿಗಳಿಗೆ ತೆರಳಿದರು. ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು, ರಾಜ್ಯ ಜಾಗೃತದಳ ತಂಡ ಸೇರಿದಂತೆ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.

ಡಿಡಿಪಿಐ ಕೃಷ್ಣಮೂರ್ತಿ, ಡಿವೈಪಿಸಿಗಳಾದ ಚಂದ್ರಕಲಾ, ಮಂಜುಳಾ, ಎವೈಪಿಸಿ ಮೋಹನ್‌ಬಾಬು, ಪ್ರಭಾರ ಪರೀಕ್ಷಾ ನೋಡಲ್ ಅಧಿಕಾರಿ ಶಂಕರೇಗೌಡ, ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ, ಕೃಷ್ಣಪ್ಪ, ವೆಂಕಟೇಶಪ್ಪ ಮತ್ತಿತರರೂ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದರಲ್ಲದೇ ಸಣ್ಣಪುಟ್ಟ ಲೋಪಗಳಿಗೂ ಅವಕಾಶವಿಲ್ಲದಂತೆ ಎಚ್ಚರವಹಿಸಿ ಮೆಚ್ಚುಗೆಗೆ ಪಾತ್ರವಾದರು.

ಎಲ್ಲಾ ಕೇಂದ್ರಗಳಲ್ಲೂ ಭದ್ರತೆಗಾಗಿ ಮಹಿಳಾ,ಪುರಷ ಪೊಲೀಸರನ್ನು ನಿಯೋಜಿಸಿದ್ದು, ಎಲ್ಲೂ ಸಮಸ್ಯೆಗಳು ಕಂಡು ಬರಲಿಲ್ಲ. ಒಟ್ಟಾರೆ ಮೊದಲದಿನದ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಮುಂದಿನ ಐದು ವಿಷಯಗಳ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವ ಆತ್ಮಸ್ಥೆöÊರ್ಯ ತಂದುಕೊಟ್ಟಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.

ಡಿಡಿಪಿಐ ಕೃಷ್ಣಮೂರ್ತಿ, ಮುಖ್ಯ ಅಧೀಕ್ಷಕ ಹಾಗೂ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಖಜಾಂಚಿ ಜಿ.ಎನ್.ವೇಣುಗೋಪಾಲ್, ಪ್ರಶ್ನೆಪತ್ರಿಕೆ ಅಭಿರಕ್ಷಕಿ ರಾಧಮ್ಮ, ಪರೀಕ್ಷಾ ಸಿಬ್ಬಂದಿ ಶಿಕ್ಷಕರಾದ ಭವಾನಿ, ಲಕ್ಷಿö್ಮÃದೇವಮ್ಮ, ಎಂ.ರಮೇಶ್,ಮAಜುಳಾ, ಎಂ.ವೇದಾ, ಸುರೇಶ್, ಬಿ.ಜಯಂತಿ, ಸಂಗೀತಾ ಅಂಗಡಿ, ಲಲಿತಾ ಕುಮಾರಿ, ಸೌಮ್ಯ, ಮಂಜುಳಾ,ನಿರ್ಮಲಮ್ಮ, ನಾರಾಯಣಸ್ವಾಮಿ, ಸುಷ್ಮಾ, ವೆಂಕಟೇಶ್, ಸುಬ್ರಮಣಿ,ಶ್ರೀನಿವಾಸಲು ಆನಂದ್ ಹಾಜರಿದ್ದರು.

 

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!