• Mon. Apr 29th, 2024

ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-೨೦೨೩, ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ

PLACE YOUR AD HERE AT LOWEST PRICE

 

                                                             ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-೨೦೨೩,

                                  ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು

                     ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ

ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-೨೦೨೩ಕ್ಕೆ ಸಂಬoಧಿಸಿದoತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಸಹಕಾರವನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಏಪ್ರಿಲ್ ೧೩ ರಂದು ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಿಗೆ ಚುನಾವಣೆ ಜರುಗಿಸಲು ಅಧಿಸೂಚನೆ ಹೊರಡಿಸಲಾಗುತ್ತದೆ. ಈಗಾಗಲೇ ದಿನಾಂಕ: ೨೯-೦೩-೨೦೨೩ ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಾರ್ವಜನಿಕರು ಸಭೆ, ಸಮಾರಂಭ, ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲುವ ಮುಂಚಿತವಾಗಿ ಚುನಾವಣಾಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಈಗಾಗಲೇ ಜಿಲ್ಲೆಯಲ್ಲಿ ಅಳವಡಿಸಿರುವ ಸರ್ಕಾರಿ, ಖಾಸಗಿ ಮತ್ತು ರಾಜಕೀಯ ವ್ಯಕ್ತಿಗಳ ಬ್ಯಾನರ್, ಪೋಸ್ಟರ್‌ಗಳನ್ನು ತೆರವುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ ಆಯುಧಗಳನ್ನು ಸ್ಕ್ರೀನಿಂಗ್ ಕಮಿಟಿ ಪರಿಶೀಲನೆಗೆ ಒಳಪಡಿಸಬೇಕು ಮತ್ತು ಚುನಾವಣಾ ಪ್ರಕ್ರೀಯೆ ಸಂಪೂರ್ಣವಾಗಿ ಮುಗಿಯುವವರೆಗೆ ತಮ್ಮ ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲು ಸೂಚಿಸಿ ಆದೇಶ ಹೊರಡಿಸಲಾಗಿದೆ.

ಪ್ರಚುರ ಪಡಿಸಲಾಗುವ ಎಲ್ಲಾ ಚುನಾವಣಾ ಜಾಹೀರಾತುಗಳನ್ನು ಎಂ.ಸಿ.ಎo.ಸಿ ಸಮಿತಿಯ ಪ್ರಮಾಣಿಕನದೊಂದಿಗೆ ಪ್ರಕಟಿಸಬಹುದಾಗಿದೆ. ಈ ನಿಟ್ಟಿನಲ್ಲಿ ಮುದ್ರಣ, ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆದಾರರ ಸಹಕಾರವನ್ನು ನಿರೀಕ್ಷಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ತರಹದ ಧ್ವನಿ ವರ್ಧಕಗಳನ್ನು ರಾತ್ರಿ ೧೦.೦೦ ರಿಂದ ಬೆಳಿಗ್ಗೆ ೬.೦೦ ರವರೆಗೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಅನುಮತಿ ಇಲ್ಲದೆ ಯಾವುದೇ ರೀತಿಯ ಪ್ರಚಾರ ಸಾಮಗ್ರಿಗಳನ್ನು ಅಳವಡಿಸುವಂತಿಲ್ಲ. ನಿಯಮ ಮೀರಿದವರ ವಿರುದ್ಧ ಭಾರತ ಚುನಾವಾಣಾ ಆಯೋಗದ ನಿರ್ದೇಶನದಂತೆ ಮತ್ತು ಜಾರಿಯಲ್ಲಿರುವ ವಿವಿಧ ಕಾನೂನುಗಳಡಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!