• Sat. Apr 20th, 2024

PLACE YOUR AD HERE AT LOWEST PRICE

ಕೋಲಾರ : ನಗರದ ಹೊರವಲಯದ ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಇತ್ತೀಚೆಗೆ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಗೌರವಿಸಿದೆ.

ಬುದ್ಧಿಮಾಂದ್ಯ ಮಕ್ಕಳ ಸರ್ವತೋಮುಖ ವಿಕಾಸವನ್ನೇ ಮೂಲ ಉದ್ದೇಶವಾಗಿಟ್ಟುಕೊಂಡು ಸ್ಥಾಪಿತಗೊಂಡಿರುವ ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರವು ಕೋಲಾರ ಜಿಲ್ಲೆಯಾದ್ಯಂತ ನೂರಾರು ಬುದ್ಧಿಮಾಂದ್ಯ ಮಕ್ಕಳ ಆಶಾಕಿರಣವಾಗಿದೆ. ಮುಖ್ಯವಾಗಿ ವಿಶೇಷಚೇತನ ಮಕ್ಕಳಿಗೆ ಮೂಲಭೂತವಾಗಿ ಕಲ್ಪಿಸಬೇಕಾದ ಅಗತ್ಯ ಶಿಕ್ಷಣವನ್ನು ನೀಡುತ್ತಿದೆ. ಆ ಮೂಲಕ ಅವರಲ್ಲಿ ಸ್ವಾವಲಂಬಿ ಜೀವನ ನಡೆಸಲು ಬೇಕಾದ ಅರ್ಹತೆಯನ್ನು ಪಡೆಯಲು ತರಬೇತಿಗೊಳಿಸುತ್ತಲಿದೆ. ಅದಕ್ಕಾಗಿ ಹತ್ತು ಹರವಾರು ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ತನ್ನ ವ್ಯಾಪ್ತಿಯಲ್ಲಿನ ಸಂಘ-ಸoಸ್ಥೆಗಳ, ವ್ಯಕ್ತಿಗಳ ಸಹಕಾರ, ಸಲಹೆ, ಮಾರ್ಗದರ್ಶನ ಪಡೆಯುವ ಮೂಲಕ ಸಾರ್ಥಕವಾದ ಸೇವೆ ಸಲ್ಲಿಸುತ್ತಿದೆ.

ಮಕ್ಕಳಲ್ಲಿನ ವಿಕಲತೆ ಕಾರಣದಿಂದ ಅನೇಕ ಸೌಲಭ್ಯಗಳಿಂದ ಅವರು ವಂಚಿತರಾಗುತ್ತಿದ್ದಾರೆ. ಅಂತಹ ಮಕ್ಕಳನ್ನು ಗುರುತಿಸಿ, ಪ್ರೀತಿಯಿಂದ ತಮ್ಮ ಸಂಸ್ಥೆಗೆ ಆಹ್ವಾನಿಸಿಕೊಂಡು ಅವರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವನ್ನು ಸತತ ಇಪ್ಪತ್ತೇಳು ವರ್ಷಗಳಿಂದ ಮಾಡುತ್ತಾ ಬಂದಿದೆ. ವಿಶೇಷಚೇತನ ಮಕ್ಕಳಿಗೆ ಸಂತುಲಿತ ಆಹಾರ, ಅಗತ್ಯ ಚಿಕಿತ್ಸೆಗಳನ್ನು ನೀಡಿ, ಅವರಲ್ಲಿನ ನ್ಯೂನ್ಯತೆಯನ್ನು ಕಡಿಮೆ ಮಾಡಿ, ಅವರು ಲವಲವಿಕೆಯಿಂದ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ತೊಡಗುವಂತೆ ಮಾಡುವಲ್ಲಿ ಸಂಸ್ಥೆಯು ಅವಿತರವಾಗಿ ಶ್ರಮವಹಿಸುತ್ತಿದೆ. ಬುದ್ಧಿಮಾಂದ್ಯತೆಯ ಪ್ರಮಾಣ ಮತ್ತು ಮಗುವಿನ ಸಾಮಥ್ಯ-ಆಸಕ್ತಿಗನುಗುಣವಾಗಿ ಜೀವನ ಕೌಶಲ್ಯ ಮತ್ತು ವೃತ್ತಿ ಕೌಶಲ್ಯಗಳಲ್ಲಿ ತರಬೇತಿ ನೀಡುತ್ತಲಿದೆ.

ಮಕ್ಕಳ ಮನೋವಿಕಾಸಕ್ಕೆ ಮತ್ತು ಸವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ಮಾಡುತ್ತಿರುವ ಸಂಸ್ಥೆಯ ಸಮಾಜಮುಖಿ ಕಾರ್ಯಕ್ಕೆ ಸರಕಾರ ಹಾಗೂ ಸಂಘ ಸಂಸ್ಥೆಗಳು ಪುರಸ್ಕಾರಗಳನ್ನು ನೀಡಿ ಪ್ರೋತ್ಸಾಹಿಸುತ್ತಿವೆ. ಪ್ರಸ್ತುತ ವಿಶೇಷಚೇತನ ಮಕ್ಕಳ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯು ಧಾರವಾಡದಲ್ಲಿ ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ೨೦೨೦-೨೧ನೇ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಗೌರವಿಸಿದೆ.

Related Post

2024ರ ಲೋಕಸಭಾ ಚುನಾವಣೆ ಸಂವಿಧಾನ ಪರ ಮತ್ತು ಸಂವಿಧಾನ ವಿರೋಧಿ ಧೋರಣೆ ಹಾಗೂ ಮನಸ್ಥಿತಿಗಳ ನಡುವಿನ ಯುದ್ಧವಾಗಿದೆ – ಎಂ.ಎಲ್.ಸಿ. ಸುಧಾಮದಾಸ್
ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,

Leave a Reply

Your email address will not be published. Required fields are marked *

You missed

error: Content is protected !!