• Mon. Apr 29th, 2024

PLACE YOUR AD HERE AT LOWEST PRICE

ಕೆಜಿಎಫ್:ಸರ್ಕಾರಿ ಸೇವೆಯಿಂದ ನಿವೃತ್ತರಾಗುವ ಅಧಿಕಾರಿ, ಸಿಬ್ಬಂದಿಗಳ ಸೇವೆಯು ಶ್ಲಾಘನೀಯವಾಗಿದ್ದು, ಅನುಭವಿ ಅಧಿಕಾರಿಗಳ ಸೇವೆ, ಆದರ್ಶಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಕೆಜಿಎಫ್ ಪೊಲೀಸ್ ಜಿಲ್ಲಾ ರಕ್ಷಣಾಧಿಕಾರಿ ಡಾ|| ಕೆ.ಧರಣೀದೇವಿ ಅವರು ಕರೆ ನೀಡಿದರು.

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಸುದೀರ್ಘವಾದ ಸೇವೆ ಸಲ್ಲಿಸಿ, ಮಾ.31 ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಯನ್ನು ಹೊಂದಿದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಏರ್ಪಡಿಸಿದ್ದ ಆತ್ಮಿಯ ಬಿಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ನೌಕರಿಯಲ್ಲೇ ಪೊಲೀಸ್ ಇಲಾಖೆಯ ನೌಕರಿಯು ಬಹಳ ವಿಶಿಷ್ಟವಾದ ಸೇವೆಯಾಗಿರುತ್ತದೆ. ಪೊಲೀಸ್ ಇಲಾಖೆಯಲ್ಲಿ ಯಾವುದೇ ತಕ್ಲೀಪುಗಳಿಲ್ಲದೇ ಸೇವೆ ಸಲ್ಲಿಸಿ, ಇಲಾಖೆಯಿಂದ ವಯೋ ನಿವೃತ್ತಿ ಮೇರೆಗೆ ನಿರ್ಗಮಿಸುವುದು ಸಹ ಒಂದು ವಿಶಿಷ್ಟ ಸಾಧನೆಯಾಗಿದ್ದು ನಿವೃತ್ತ ಅಧಿಕಾರಿ, ಸಿಬ್ಬಂದಿಗಳ ಮಾರ್ಗದರ್ಶನವನ್ನು ಪಡೆದು ಇಂದಿನ ಯುವಜನರು ಮುಂದುವರೆಯುವುದು ಒಳ್ಳೆಯದೆಂದು ಕರೆ ನೀಡಿದರು.

ಕೆಜಿಎಫ್ ಘಟಕದಲ್ಲಿ ಪ್ರಸ್ತುತ ನಿವೃತ್ತಿ ಹೊಂದಿದ ನಿವೃತ್ತ ಅಧಿಕಾರಿಗಳು ಪೊಲೀಸ್ ಇಲಾಖೆಯ ವಿವಿಧ ವಿಭಾಗ, ಠಾಣೆ, ಕಛೇರಿಗಳಲ್ಲಿ ಅರ್ಥಪೂರ್ಣ ಸೇವೆಯನ್ನು ಸಲ್ಲಿಸುವ ಮೂಲಕ ಯಶಸ್ವಿಯಾಗಿರುತ್ತಾರೆ. ಇವರುಗಳ ಸೇವೆ, ಅನುಭವವು ಎಲ್ಲರಿಗೂ ಮಾರ್ಗದರ್ಶನವಾಗಲೆಂದರು.

ಉದ್ಯೋಗಿಗಳಿಗೆ ನಿವೃತ್ತಿಯು ಇದ್ದೇ ಇರುತ್ತದೆ, ಇರುವುದರೊಳಗೆ ಉತ್ತಮವಾದ ರೀತಿಯಲ್ಲಿ ಸೇವೆಯನ್ನು ಸಲ್ಲಿಸಬೇಕೆಂದರು. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವವರು ನೈತಿಕ ಬೆಂಬಲದೊಂದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸುವ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕೆಂದರು.

ಮಾ.31 ರಂದು ಇಲಾಖೆಯ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಡಿಎಸ್‍ಬಿ ವಿಭಾಗದ ಪೊಲೀಸ್ಇ ನ್ಸ್‍ಪೆಕ್ಟರ್ ಪಿ.ಬಿ.ಹನುಮಂತಪ್ಪ, ಬಂಗಾರಪೇಟೆ ಎಎಸ್‍ಐ ಎಸ್.ಕೆ.  ದಿವಾಕರನಾಯ್ಡು ಅವರುಗಳಿಗೆ ಶಾಲು ಹೊದಿಸಿ, ಆತ್ಮೀಯವಾಗಿ ಸನ್ಮಾನಿಸಿ, ಹಣ್ಣುಹಂಪಲು, ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ವಿ.ಎಲ್. ರಮೇಶ್, ಶಾಖಾಧೀಕ್ಷಕ ಎಂ.ಮೂರ್ತಿ, ಪಿಐ ಮಂಜುನಾಥ ಲಿಂಗಾರೆಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಪಿಎಸ್‍ಐಗಳು, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು, ನಿವೃತ್ತ ಅಧಿಕಾರಿಗಳ ಕುಟುಂಬವರ್ಗದವರು ಹಾಜರಿದ್ದರು.ಪಿಎಸ್‍ಐ ಮಹೇಶ್‍ಮಾಳಿ ರವರಿಂದ ಸ್ವಾಗತ, ಪೊಲೀಸ್ ಪೇದೆ ಶರಣಪ್ಪ ಕವಟಗಿ ಅವರಿಂದ ನಿರೂಪಣೆ, ಎಎಸ್‍ಐ ಎಲ್.ರಘು ಅವರು ವಂದಿಸಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!