• Sat. Apr 20th, 2024

PLACE YOUR AD HERE AT LOWEST PRICE

ಕೆಜಿಎಫ್:ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಕೆಜಿಎಫ್‍ನಲ್ಲಿ ಗೆಲ್ಲಿಸುವುದು ನಮ್ಮ ಗುರಿಯಾಗಿದ್ದು ಅದನ್ನು ಸಾಧಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.

ಅವರು ನಗರದ ಅಂಬೇಡ್ಕರ್ ಮತ್ತು ತಿರುವಳ್ಳುವರ್ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಅಪಾರ ಬೆಂಬಲಿಗರೊಂದಿಗೆ ಪ್ರಸನ್ನ ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿ, ಬೆಂಗಳೂರಿನ ವೇಲು ನಾಯಕರ್ ಕೆಜಿಎಫ್ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದು ತಮ್ಮೊಟ್ಟಿಗೆ ಬಂದು ಪೂಜೆ ಸಲ್ಲಿಸುವಂತೆ ಆಹ್ವಾನ ನೀಡಿದ್ದಕ್ಕೆ ಅವರೊಂದಿಗೆ ಬಂದು ಪೂಜೆ ಸಲ್ಲಿಸಿರುವುದಾಗಿ ತಿಳಿಸಿದರು.

ಕೆಜಿಎಫ್ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಐದಾರು ಮಂದಿ ಆಕಾಂಕ್ಷಿಗಳಿದ್ದು, ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿದ್ದು, ಅವರ ಗತಿಯೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯು ರಾಷ್ಟ್ರೀಯ ಪಕ್ಷವಾಗಿದ್ದು, ಪಕ್ಷಕ್ಕಾಗಿ ಹಲವಾರು ಮಂದಿ ದುಡಿಯುತ್ತಿದ್ದರೂ ಸಹ ಅಭ್ಯರ್ಥಿ ಒಬ್ಬರೇ ಆಗುತ್ತಾರೆ. ಪಕ್ಷ ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ಯಾರೇ ನನ್ನನ್ನು ಕರೆದರೂ ಅವರೆಲ್ಲರೊಟ್ಟಿಗೆ ಬರುವುದಾಗಿ ತಿಳಿಸಿ, ಇಲ್ಲಿ ಲೋಕಲ್ ಔಟ್  ನವರು ಎನ್ನುವುದು ಗಣನೆಗೆ ಬರುವುದಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಅಭ್ಯರ್ಥಿ ಯಾರೆಂಬುದನ್ನು ಪಕ್ಷ ತೀರ್ಮಾನಿಸುತ್ತದೆ. 9 ಜನ ಆಕಾಂಕ್ಷಿಗಳಿದ್ದರೂ ಒಬ್ಬರು ಅಭ್ಯರ್ಥಿಯಾಗುತ್ತಾರೆ, ಉಳಿದ 8 ಮಂದಿ ಆ ಒಬ್ಬ ವ್ಯಕ್ತಿಗೆ ಕೆಲಸ ಮಾಡುತ್ತಾರೆ.

ಕೆಜಿಎಫ್‍ನಲ್ಲಿ ಎಷ್ಟು ಜನ ಆಕಾಂಕ್ಷಿಗಳಿದ್ದಾರೋ ಅವರೆಲ್ಲರೂ ನಮ್ಮವರೇ, ಅದು ಸಂಪಂಗಿಯವರಾಗಲೀ, ಮೋಹನ್‍ಕೃಷ್ಣಾ ಆಗಲೀ ಎಲ್ಲರೂ ಒಂದೇ. ನಮ್ಮ ಉದ್ದೇಶ ಒಂದೇ ಆಕಾಂಕ್ಷಿಗಳೆಷ್ಟೇ ಜನ ಇದ್ದರೂ ಅಂತಿಮವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿ ಒಬ್ಬರೇ ಆಗಿದ್ದು, ಅವರು ಗೆಲ್ಲುವವರಾಗಿರಬೇಕು, ಅಂತಹ ಅಭ್ಯರ್ಥಿಯನ್ನು ಪಕ್ಷವು ಆಯ್ಕೆ ಮಾಡಲಿದೆ ಎಂದರು.

ಬಿಜೆಪಿ ನೂತನ ಟಿಕೆಟ್ ಆಕಾಂಕ್ಷಿ ವೇಲು ನಾಯಕರ್ ಮಾತನಾಡಿ, ಕಾರ್ಯಕರ್ತರ ಸೇವೆಯನ್ನು ಗುರ್ತಿಸುವ ಪಕ್ಷವೆಂದರೆ ಅದು ಬಿಜೆಪಿ ಪಕ್ಷವಾಗಿದ್ದು, ನಾನು ಪರಿಶಿಷ್ಟ ಜಾತಿಯ ಬಲ ಪಂಥೀಯ ಸಮುದಾಯಕ್ಕೆ ಸೇರಿದವನಾಗಿದ್ದು, ಬೆಂಗಳೂರಿನಲ್ಲಿ ಬಹುತೇಕ ಸಾಮಾನ್ಯ ವರ್ಗಕ್ಕೆ ಸೀಟುಗಳು ಮೀಸಲಾಗಿದ್ದು, ಬೆಂಗಳೂರಿನ ಸುತ್ತಮುತ್ತಲ ಮೀಸಲು ಕ್ಷೇತ್ರಗಳಲ್ಲಿ ಕೆಜಿಎಫ್‍ನ್ನು ಆಯ್ಕೆ ಮಾಡಿಕೊಂಡಿದ್ದೇನೆ.

ಇಲ್ಲಿರುವ ನಾಲ್ಕೈದು ಮಂದಿ ಆಕಾಂಕ್ಷಿಗಳೊಂದಿಗೆ ನಾನೂ ಸಹ ಒಬ್ಬ ಆಕಾಂಕ್ಷಿಯಾಗಿ ಇಲ್ಲಿಗೆ ಬಂದಿದ್ದೇನೆ. ಬೆಂಗಳೂರಿನ ಲಕ್ಷ್ಮಿದೇವಿನಗರದ ಕಾರ್ಪೊರೇಟರ್ ಆದ ಬಳಿಕ ಬಿಬಿಎಂಪಿ ಅಕೌಂಟ್ಸ್ ಸಮಿತಿ ಅಧ್ಯಕ್ಷನಾಗಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದರಿಂದ ಬಿಜೆಪಿ ಪಕ್ಷವು ನನ್ನ ಸೇವೆಯನ್ನು ಗುರ್ತಿಸಿ ಗುಲ್ಬರ್ಗಾ ಚುನಾವಣೆ ಉಸ್ತುವಾರಿ ನೀಡಿದ್ದು,ಅಲ್ಲಿನ ನಾಲ್ಕು ವಾರ್ಡ್‍ಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳನ್ನು  ಗೆಲ್ಲಿಸಿಕೊಂಡು ಬಂದಿದ್ದೇನೆ ಎಂದರು.

ಈ ವೇಳೆ ಬಿಜೆಪಿ ನಗರ ಘಟಕ ಅಧ್ಯಕ್ಷ ಕಮಲ್‍ನಾಥನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ನಾರಾಯಣ್ ಕುಟ್ಟಿ, ಡಾ.ಅರಿವಳಗನ್, ಮುಖಂಡ ಚಂದ್ರಶೇಖರರೆಡ್ಡಿ (ಸುನೀಲ್), ಶ್ಯಾಮ್, ಕಣ್ಣೂರು ವಿಜಿಕುಮಾರ್, ಬಾಬಿ ಸುರೇಶ್ ಮೊದಲಾದವರು ಇದ್ದರು.

Related Post

2024ರ ಲೋಕಸಭಾ ಚುನಾವಣೆ ಸಂವಿಧಾನ ಪರ ಮತ್ತು ಸಂವಿಧಾನ ವಿರೋಧಿ ಧೋರಣೆ ಹಾಗೂ ಮನಸ್ಥಿತಿಗಳ ನಡುವಿನ ಯುದ್ಧವಾಗಿದೆ – ಎಂ.ಎಲ್.ಸಿ. ಸುಧಾಮದಾಸ್
ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,

Leave a Reply

Your email address will not be published. Required fields are marked *

You missed

error: Content is protected !!