• Fri. Mar 29th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ನಮ್ಮ ಕ್ಷೇತ್ರ 10ವರ್ಷಗಳ ಹಿಂದೆ ಬರಪೀಡಿತವಾಗಿತ್ತು.  ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಂತಹ ಸಂದಿಗ್ದ  ಪರಿಸ್ಥಿತಿಯಲ್ಲಿ ಟ್ಯಾಂಕರ್ ಗಳ ಮೂಲಕ ನೀರು ನೀಡಿ ಜನರ ಬವಣೆಯನ್ನು ಶಾಸಕ ಎಸ್.ಎನ್ ನಾರಾಯಣಸ್ವಾಮಿ ದೂರ ಮಾಡಿದರು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು ಹೇಳಿದರು.

ಅವರು ಕೇತಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಗೆದೆಗಲು, ಬೋಯನಹಳ್ಳಿ, ಮುದುಗೂಳಿ, ಗ್ರಾಮಗಳಲ್ಲಿ ಕಾಂಗ್ರೆಸ್ ಮತ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ಚುನಾವಣೆ  ಸಮಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ಆಸೆ ಆಮಿಷಗಳನ್ನು ನೀಡಿ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸುತ್ತಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಅವಧಿಯಲ್ಲಿ ಮಹಿಳಾ ಸಬಲೀಕರಣವಾಗಬೇಕು, ಸಾವಲಂಬಿ ಬದುಕಿಗೆ ಆಸರೆಯಾಗಬೇಕು ಎಂಬ ನಿಟ್ಟಿನಲ್ಲಿ 65,000 ಮಹಿಳೆಯರಿಗೆ 230 ಕೋಟಿಗಳನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿದರು ಎಂದರು.

ಜೆಡಿಎಸ್ ಪಕ್ಷದಲ್ಲಿ ನಾಯಕರ ಕೊರತೆ ಇದ್ದು ಯುವಸಮುದಾಯವನ್ನು ಚುನಾವಣೆಗೆ ದುರ್ಬಳಕೆ ಮಾಡಿಕೊಂಡು ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.  ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ಕ್ಷೇತ್ರಕ್ಕೆ ಅನುದಾನವನ್ನು ತಂದುಕೊಡಲು ವಿಫಲವಾಗಿದ್ದರು.

ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು 2018ರ ಚುನಾವಣೆಯ ನಂತರ ಕ್ಷೇತ್ರದಲ್ಲಿ ಕಣ್ಮರೆಯಾಗಿದ್ದರು. ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ಹಣದ ಹೊಳೆಯನ್ನು ಹರಿಸಲು ಬಂದಿದ್ದಾರೆ. ಆದರೆ ಕ್ಷೇತ್ರದ ಜನ ಸ್ವಾಭಿಮಾನಿಗಳಾಗಿದ್ದು ಅಭಿವೃದ್ಧಿಗೆ ಮತ ನೀಡಲಿದ್ದಾರೆ ಎಂದರು.

ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ನನಗೆ ಶಾಸಕತ್ವದ ವ್ಯಾಮೋಹವಿಲ್ಲ.  ಆದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದು ನನ್ನ ಮಹತ್ವಕಾಂಕ್ಷೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ.

ಡಾಂಬರೀಕರಣ ರಸ್ತೆ, ಸಿಸಿ ರಸ್ತೆ, ಐಮಾಸ್ಟ್ ದೀಪಗಳನ್ನು ಅಳವಡಿಸುವುದರೊಂದಿಗೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದೇನೆ. ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಕೈಗಾರಿಕಾ ಕ್ರಾಂತಿಯನ್ನು ಸೃಷ್ಟಿಸುತ್ತೇನೆ ಆ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಬಡವರ ಪಾಲಿಗೆ ಆಧಾರವಾಗಿ ನಿಲ್ಲುತ್ತೇನೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಮನೆಗೆ 200 ಯೂನಿಟ್ ಉಚಿತ ವಿದ್ಯುತ್.  ,ಮಹಿಳೆ ಯಜಮಾನಿ 2000 ಮಾಸಿಕ ವೇತನ. ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕ. 2 ವರ್ಷಗಳವರೆಗೆ ನಿರುದ್ಯೋಗಿಗಳಿಗೆ 3000 ಭತ್ಯೆ ನೀಡಲು ನಿರ್ಧರಿಸಲಾಗಿದೆ.

ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರಗಳು ದೇಶದ ಭವಿಷ್ಯವನ್ನು ಅವನತಿಯತ್ತ ಕೊಂಡೊಯ್ಯುತ್ತಿದೆ. ವಸಿತಿ ರಹಿತರಿಗೆ ವಸತಿ ನೀಡುವಲ್ಲಿ ವಿಫಲವಾಗಿದೆ. ದಿನನಿತ್ಯ ವಸ್ತುಗಳ ಬೆಲೆ, ಪೆಟ್ರೋಲ್, ಗ್ಯಾಸ್, ಡೀಸೆಲ್, ಕೃಷಿ ಪರಿಕರಗಳು ರಸಗೊಬ್ಬರದ ಬೆಲೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ.

ಇದರಿಂದ ಜನಜೀವನ ಕಷ್ಟದಲ್ಲಿ ಮುಳುಗಿ ಹೋಗಿದೆ. ಸದೃಢ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಅಭಿವೃದ್ಧಿಯ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ  ಅವರು ಮನವಿ ಮಾಡಿದರು.

ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಮುಖಂಡರಾದ ಮೇಸ್ತ್ರಿ ಸೀನಪ್ಪ,  ಚಂಗಾರೆಡ್ಡಿ, ವೆಂಕಟರಾಮ್, ನಾಗರಾಜು, ವೆಂಕಟಸ್ವಾಮಿ, ಚಲಪತಿ, ಪ್ರದೀಪ್ ಗೌಡ, ನಾಗಭೂಷಣ್, ಸಂದೀಪ್ ಗೌಡ ಮೊದಲಾದವರಿದ್ದರು.

Leave a Reply

Your email address will not be published. Required fields are marked *

You missed

error: Content is protected !!