• Tue. May 14th, 2024

ಹಸು ಹೊಟ್ಟೆಯಲ್ಲಿ ೧೫ ಕೆಜಿ ಪ್ಲಾಸಿಕ್ ತ್ಯಾಜ್ಯ! ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಪಶು ಪ್ರಾಣ ಉಳಿಸಿದ ವೈದ್ಯರು

PLACE YOUR AD HERE AT LOWEST PRICE

ಸುಮಾರು ಎರಡು ವರ್ಷಗಳಿಂದಲೂ ಸುಮಾರು ೧೫ ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೊಟ್ಟೆಯಲ್ಲಿಟ್ಟುಕೊಂಡು ಅಚ್ಚರಿಯಾಗಿ ಬದುಕಿದ್ದ ಹಸುವೊಂದಕ್ಕೆ ನಗರದಲ್ಲಿ ಪಶು ವೈದ್ಯರು ಯಶಸ್ವಿ ಚಿಕಿತ್ಸೆ ಮಾಡಿ ಹಸುವಿನ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು.

ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು ೧೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು.
ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು.

ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು ಪಶು ಶಸ್ತ್ರಚಿಕಿತ್ಸಕ ಡಾ.ರಾಹುಲ್ ಮತ್ತು ಪಶು ವೈದ್ಯಾಧಿಕಾರಿ ಡಾ.ರಘುನಾಥ್.

ತೀರಾ ನಿತ್ರಾಣ ಸ್ಥಿತಿಯಲ್ಲಿದ್ದ ಹಸುವಿಗೆ ಇನ್ಯಾವುದು ಚಿಕಿತ್ಸೆ ಫಲಕಾರಿಯಾಗುವುದಿಲ್ಲ ಎಂಬುದನ್ನು ಅರಿತುಕೊಂಡು ಶಸ್ತ್ರಚಿಕಿತ್ಸೆಗೆ ಮುಂದಾದರು. ಬಲಹೀನ ಪರಿಸ್ಥಿತಿಯಲ್ಲಿಯೂ ಹಸು ಶಸಚಿಕಿತ್ಸೆಯನ್ನು ತಡೆದುಕೊಂಡಿತ್ತಲ್ಲದೆ ತನ್ನದೇ ಹೊಟ್ಟೆಯಲ್ಲಿ ಸುಮಾರು ಎರಡು ವರ್ಷಗಳಿಂದಲೂ ಸೇರಿಕೊಂಡಿದ್ದ ಸುಮಾರು ೧೫ ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೊರತೆಗೆಯಲು ಸಹಕರಿಸಿತ್ತು.

ಹಸು ಮೇವಿನ ಜೊತೆ ಪ್ಲಾಸ್ಟಿಕ್ ಕೈಗವಸುಗಳು ಸೇರಿದಂತೆ ಅನೇಕ ರೀತಿಯ ತ್ಯಾಜ್ಯವನ್ನು ತಿಂದಿರುವುದು ಶಸ್ತ್ರಚಿಕಿತ್ಸೆ ನಂತರ ಪತ್ತೆಯಾಗಿತ್ತು. ಸುಮಾರು ಎರಡು ವರ್ಷಗಳಿಂದಲೂ ಈ ಮಟ್ಟದ ತ್ಯಾಜ್ಯವು ಹಸುವಿನ ಕರುಳುಗಳಲ್ಲಿ ಸುತ್ತಿಕೊಂಡು ಮೇವು ಜೀರ್ಣವಾಗದೇ ಇದ್ದರೂ ಆರೋಗ್ಯಕರವಾಗಿ ಬದುಕಿದ್ದೇ ಆಶ್ಚರ್ಯ ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದರು.

ಯಶಸ್ವಿ ಶಸ್ತ್ರಚಿಕಿತ್ಸೆ ಯ ನಂತರ ಹಸು ಈಗ ಚೇತರಿಸಿಕೊಳ್ಳುತ್ತಿದ್ದು, ಕ್ರಮೇಣ ಮೇವು ತಿನ್ನುವುದು ಮತ್ತು ಯಥಾ ಪ್ರಕಾರ ಗುಣಮಟ್ಟದ ಅಷ್ಟೇ ಪ್ರಮಾಣದ ಹಾಲು ನೀಡಲು ಸಿದ್ಧವಾಗುತ್ತಿರುವುದು ಹಸು ಸಾಕಾಣಿಕೆದಾರರ ಸಂತಸಕ್ಕೆ ಕಾರಣವಾಗಿದೆ.

ಹಸುಗಳಿಗೆ ಮೇವು ತಿನ್ನಲು ಹೊರಗೆ ಬಿಡುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಹೊಟ್ಟೆ ಸೇರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬ ಹಸು ಸಾಕಾಣಿಕೆದಾರರ ಜವಾಬ್ದಾರಿಯಾಗಬೇಕು, ಇಲ್ಲವಾದರೆ ಲಕ್ಷಾಂತರ ರೂಪಾಯಿ ಮೌಲ್ಯದ ಉತ್ತಮ ತಳಿಯ ರಾಸುಗಳನ್ನು ಕಳೆದುಕೊಳ್ಳಬೇಕಾಗುತ್ತದೆಯೆಂದು ಪಶು ಶಸಚಿಕಿತ್ಸಕ ಡಾ.ರಾಹುಲ್ ಮತ್ತು ಡಾ.ರಘುನಾಥ್ ಪಶು ಸಾಕಾಣಿಕೆದಾರರಿಗೆ ಸಲಹೆ ನೀಡಿದ್ದಾರೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!