• Fri. Apr 26th, 2024

PLACE YOUR AD HERE AT LOWEST PRICE

ಕೋಲಾರ: ಕರ್ನಾಟಕವನ್ನು ಭಾರತದ ನಂಬರ್ ಒನ್ ರಾಜ್ಯ ಮಾಡುವುದೇ ಬಿಜೆಪಿ ಸರ್ಕಾರದ ಉದ್ದೇಶವಾಗಿದೆ, ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆ ಯಾರೋ ಶಾಸಕ ಅಥವಾ ಸಚಿವರನ್ನಾಗಿ ಮಾಡಲು ನಡೆಯುತ್ತಿರುವ ಚುನಾವಣೆಯಲ್ಲ. ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ನಿರ್ಮಾಣ ಮಾಡುವಂತಹದ್ದು. ಮುಂದಿನ ಎರಡೂವರೆ ದಶಕಗಳ ವಿಕಾಸದ ಭಾರತವನ್ನಾಗಿ ಮಾಡುವ ಚುನಾವಣೆ ಇದಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.

ಕೋಲಾರದ ಕೆಂದಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೭೫ರ ಸಮೀಪ ಸುಮಾರು ೧೫೦ ಎಕರೆ ಪ್ರದೇಶದಲ್ಲಿ ನಿರ್ಮಿಸಿದ್ದ ಬೃಹತ್ ಚುನಾವಣೆ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. “ಚಿನ್ನದ ನಾಡು ಕೋಲಾರದ ಜನತೆಗೆ ನನ್ನ ಸಮಸ್ಕಾರಗಳು” ಎಂಬ ಕನ್ನಡದ ಮಾತಿನೊಂದಿಗೆ ಭಾಷಣ ಆರಂಭಿಸಿದ ಅವರು, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ೨೫ ವರ್ಷಗಳಿಗೆ ರಾಜ್ಯದ ಹಾಗೂ ದೇಶದ ಅಭಿವೃದ್ದಿಯ ಚಿಂತನೆ ನಡೆಸುವ ಸಮಯವಾಗಿದೆ. ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆಯಾದ್ರೆ ರಾಜ್ಯದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ತಿಳಿಸಿದರು.

ಕರ್ನಾಟದಲ್ಲಿ ಕಾಂಗ್ರೆಸ್ ಅವಧಿ ಮೀರಿದ ಹಳೆಯ ಎಂಜೀನ್ ಆಗಿದೆ, ಕಾಂಗ್ರೆಸ್ -ಜೆಡಿಎಸ್ ವಿಕಾಸ ಹಾಗೂ ಅಭಿವೃದ್ದಿ ಆದ್ಯತೆ ನೀಡಲ್ಲ, ಆದರೆ, ಬಿಜೆಪಿ ಬಿಜೆಪಿಯಿಂದ ಮಾತ್ರ ರಾಜ್ಯದ ವಿಕಾಸ ಸಾಧ್ಯ, ಈಗಾಗಲೇ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷವನ್ನು ಕ್ಲೀನ್ ಬೋಲ್ಡ್ ಮಾಡಿದೆ ಎಂದು ವ್ಯಂಗವಾಡಿದರು.

ಮತ್ತೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಕಾಂಗ್ರೆಸ್ ೮೫ ಪರ್ಸೆಂಟ್ ಕಮಿಷನ್ ಖ್ಯಾತಿ ಹೊಂದಿರುವ ಕಾರಣ ಜನರಿಗೆ ಇವರ ಸರ್ಕಾರದ ಮೇಲೆ ನಂಬಿಕೆಯೇ ಇಲ್ಲ. ೧ ರೂಪಾಯಿ ಕಳುಹಿಸಿದರೆ ಜನರಿಗೆ ತಲುಪುವಷ್ಟರಲ್ಲಿ ಅದು ೧೫ ಪೈಸೆಗೆ ಇಳಿಯುತ್ತದೆ ಎಂದು ಅವರ ಪ್ರಧಾನ ಮಂತ್ರಿಯೊಬ್ಬರು ಹೇಳಿದ್ದಾರೆ. ಕಾಂಗ್ರೆಸ್ ಯಾವಾಗಲೂ ತುಷ್ಟೀಕರಣ ರಾಜಕಾರಣ ಮಾಡುತ್ತದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ

ನಾನು ಭ್ರಷ್ಟಾರದ ವಿರುದ್ಧ ಹೋರಾಟುತ್ತಿರುವುದರಿಂದ ಕಾಂಗ್ರೆಸ್ ನನ್ನನ್ನು ದ್ವೇಷಿಸುತ್ತಿದೆ. ಅವರು ನನಗೆ ಮೋದಿ ಸಮಾಧಿ ಕಟ್ಟುತ್ತೇವೆ ಎಂದು ಬೆದರಿಕೆ ಹಾಕುವುದರ ಜೊತೆಗೆ ನಿಂದನೆಯನ್ನೂ ಮಾಡ್ತಿದ್ದಾರೆ. ಈ ಬಾರಿಯ ಚುನಾವಣೆಗೆ ಕಾಂಗ್ರೆಸ್ ವಿಷದ ಹಾವು ಎಂಬ ವಿಷಯವನ್ನು ಇಟ್ಟುಕೊಂಡು ನನ್ನನ್ನು ಹಾವಿಗೆ ಹೋಲಿಸುತ್ತಿದ್ದಾರೆ. ಅವರಿಗೆ ಮೇ ೧೦ ರಂದು ಕರ್ನಾಟಕದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನೂ ರೈತರಿಗಾಗಿ ಕಾಂಗ್ರೆಸ್ ಏನೂ ಮಾಡಿಲ್ಲ ಬಡವರನ್ನು ನಿರ್ಲಕ್ಷಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷ ನೀಡಿದ್ದ ೧೮ ಸಾವಿರ ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕದ ಗ್ಯಾರಂಟಿ ಭರವಸೆಗಳನ್ನು ನೀಡಿ ಸುಮ್ಮನಾದರು. ಆದರೆ ನಾವು ಅದೇ ೧೮ ಸಾವಿರ ಮನೆಗಳಿಗೆ ವಿದ್ಯುತ್ ನೀಡಿದ್ದೇವೆ. ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ೨.೫ ಲಕ್ಷ ಕೋಟಿ ರೂಪಾಯಿಗಳನ್ನು ಕೊಟ್ಟಿದ್ದೇವೆ. ರೈತರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದೇವೆ. ೮೦ ಕೋಟಿ ಬಡವರಿಗೆ ಉಚಿತ ಪಡಿತರ ಅಕ್ಕಿ ನೀಡುತ್ತಿದ್ದೇವೆ. ನೀಡಿದ್ದೇವೆ, ೯.೫ ಕೋಟಿ ಕುಟುಂಬಗಳಿಗೆ ಉಚಿತ ಅನಿಲ ಸಂಪರ್ಕ ನೀಡಿದ್ದೇವೆ. ೧೦ ಕೋಟಿ ಶೌಚಾಲಯಗಳನ್ನು ನಿರ್ಮಿಸಿಕೊಟ್ಟಿದ್ದೇವೆ ಎಂದಿದ್ದಾರೆ.

ಅಸ್ಥಿರದ ಸರ್ಕಾರ ಬಂದರೆ ಪ್ರಗತಿ ಆಗುವುದಿಲ್ಲ. ಇದರಿಂದ ನಷ್ಟವೇ ಜಾಸ್ತಿ. ದೇಶದ ಪ್ರಗತಿಗೆ ಬೇಕಾದ ಯೋಜನೆಗಳನ್ನು ನಿರ್ಧಾರ ಮಾಡಲು ಅಸ್ಥಿರ ಸರ್ಕಾರ ಅಡ್ಡಿಯಾಗುತ್ತದೆ. ಭ್ರಷ್ಟಾಚಾರದಿಂದ ಕರ್ನಾಟಕವನ್ನು ಮುಕ್ತಗೊಳಿಸುವುದೇ ಈ ಬಾರಿಯ ಚುನಾವಣೆ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಮಾರು ೭೦-೮೦ ಸಾವಿರ ಮಂದಿ ಭಾಗವಹಿಸಿದ್ದರು. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವಿವಿಧ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳು ಹಾಗೂ ಹಾಗೂ ಅವರ ಬೆಂಬಲಿಗ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮ ಯಶಸ್ವಿಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು. ಸಂಚಾರಕ್ಕೂ ಯಾವುದೇ ಅಡೆತಡೆಗಳಾಗಿಲ್ಲ.

ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಕೋಲಾರ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್, ಆರೋಗ್ಯ ಸಚಿವ ಡಾ.ಸುಧಾಕರ್, ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಕೋಲಾರ ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳಾದ ಕೆ.ಜಿ.ಎಫ್,ನ ಅಶ್ವಿನಿ ಸಂಪAಗಿ, ಮುಳಬಾಗಿಲು ಸೀಗೇಹಳ್ಳಿ ಸುಂದರ್, ಕೋಲಾರದ ವರ್ತೂರ್ ಪ್ರಕಾಶ್, ಮಾಲೂರಿನ ಕೆ.ಎಸ್.ಮಂಜುನಾಥಗೌಡ, ಬಂಗಾರಪೇಟೆಯ ಎಂ.ನಾರಾಯಣಸ್ವಾಮಿ, ಶ್ರೀನಿವಾಸಪುರದ ಶ್ರೀನಿವಾಸರೆಡ್ಡಿ, ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!