• Sat. Mar 2nd, 2024

PLACE YOUR AD HERE AT LOWEST PRICE

ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎಷ್ಟೇ ತಿಪ್ಪರಲಾಗ ಹಾಕಿದರೂ ಈ ಬಾರಿ ಅಧಿಕಾರಕ್ಕೆ ಬರಲ್ಲ ಜನ ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಮನಸ್ಸು ಮಾಡಿದ್ದಾರೆ ಅದರಿಂದಾಗಿ ನಿಮ್ಮ ಮತ ವ್ಯರ್ಥವಾಗಬಾರದು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಎಂದು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಹುತ್ತೂರು ಹೋಬಳಿ ವ್ಯಾಪ್ತಿಯ ಸೀಸಂದ್ರ ಗ್ರಾಮದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಹಿಂದೆ ಕಾಂಗ್ರೆಸ್ ಪಕ್ಷದ ನೇತೃತ್ವದ ಸಿದ್ದರಾಮಯ್ಯ ಸರಕಾರವಿದ್ದಾಗ ಬಡವರು, ಸಾಮಾನ್ಯ ವರ್ಗದ ಜನರು ನೆಮ್ಮದಿಯಿಂದ ಬದುಕುವಂತಾಗಿತ್ತು ಆದರೆ ಬಿಜೆಪಿ ಯಾವತ್ತೂ ಅಧಿಕಾರಕ್ಕೆ ಬಂದರು ಅವತ್ತಿನಿಂದ ನೆಮ್ಮದಿಯ ಬದುಕನ್ನೇ ಕಿತ್ತುಕೊಂಡುಬಿಟ್ಟಿತ್ತು ಇಂತಹ ಬಡವರ ವಿರೋಧಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟು ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿಯಲ್ಲಿ 200 ಯೂನಿಟ್​ ಉಚಿತ ವಿದ್ಯುತ್​, ಮನೆಯ ಯಜಮಾನಿಗೆ ಗೃಹಲಕ್ಷ್ಮಿ ಹೆಸರಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ, ಬಡವರಿಗೆ 10 ಕೆಜಿ ಅಕ್ಕಿ , ಯುವನಿಧಿಯಲ್ಲಿ ನಿರುದ್ಯೋಗ ಭತ್ಯೆ ಪದವೀಧರ ಯುವಕರಿಗೆ ಪೋತ್ಸಾಹಧನ, ಮಹಿಳೆಯರಿಗೆ ಸರಕಾರಿ ಬಸ್ ನಲ್ಲಿ ಉಚಿತ ಪ್ರಯಾಣ, ಸೇರಿದಂತೆ ಇನ್ನೂ ಅನೇಕ ಯೋಜನೆಗಳನ್ನು ಜಾರಿ ಮಾಡಲು ಮುಂದಾಗಿದೆ ಅದರಿಂದಾಗಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ 40 % ಕಮಿಷನ್ ಬಿಜೆಪಿ ಸರಕಾರದ ದುರಾಡಳಿತವನ್ನು ಮತ್ತು ಅವಕಾಶವಾದಿ ಜೆಡಿಎಸ್ ಪಕ್ಷಗಳ ಧೋರಣೆಯನ್ನು ಕಂಡು ಜನ ರೋಸಿಹೋಗಿದ್ದಾರೆ ಸಮಾಜದ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಮುಂದಾಗಿದೆ ಹಿಂದೆ ಕಾಂಗ್ರೆಸ್ ಸರಕಾರ ಚುನಾವಣೆಯ ಪೂರ್ವ ಪ್ರಣಾಳಿಕೆಯಲ್ಲಿ ನೀಡಿದ್ದ ವಾಗ್ದಾನವನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನ ನಡೆಸಿದೆ ಬಡವರಿಗಾಗಿ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ವಿದ್ಯಾಸಿರಿ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಅದೇ ರೀತಿಯಲ್ಲಿ ಈಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಮಾತನಾಡಿ ಹುತ್ತೂರು ಹೋಬಳಿಯಲ್ಲಿ ಏನಾದರೂ ಅಭಿವೃದ್ಧಿಯಾಗಿದ್ದರೆ ಅದು ಎಸ್.ಎನ್ ನಾರಾಯಣಸ್ವಾಮಿ ಅವರ ಅವಧಿಯಲ್ಲಿ ಮಾತ್ರ ಜೆಡಿಎಸ್ ಒಂದು ಅಡಿ ಸಿಮೆಂಟ್ ರಸ್ತೆ ಮಾಡಿದ ಉದಾಹರಣೆಯಿಲ್ಲ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಕೇವಲ ಚುನಾವಣೆ ಸಂದರ್ಭದಲ್ಲಿ ಬಂದು ಭಾಷಣ ಮಾಡಿ ಮುಖ ತೋರಿಸಿ ಹೋಗುತ್ತಾರೆ ಅಷ್ಟೇ ನಿಮಗೆಲ್ಲ ಅಭಿವೃದ್ಧಿ ಪರವಾಗಿ ನಿರಂತರವಾಗಿ ನಿಮ್ಮ ಜೊತೆಗೆ ಇರುವ ಎಸ್.ಎನ್ ನಾರಾಯಣಸ್ವಾಮಿ ಬೇಕಾ ಚುನಾವಣೆ ಸಂದರ್ಭದಲ್ಲಿ ಬಂದು ಮುಖ ತೋರಿಸಿ ಹೋಗುವ ವ್ಯಕ್ತಿಗಳು ಬೇಕಾ ಯೋಚನೆ ಮಾಡಿ ಮತ ಹಾಕಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್.ಎನ್ ನಾರಾಯಣಸ್ವಾಮಿ ಸಚಿವರಾಗಿ ಮತ್ತಷ್ಟು ಅಭಿವೃದ್ಧಿ ಮಾಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್ ನಾಗರಾಜ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಜಾರಿ ಮಾಡುವ ಪಕ್ಷ ಸಮಾಜದಲ್ಲಿ ಶೋಷಿತರು, ದೀನ ದಲಿತರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ನೆಮ್ಮದಿಯಾಗಿ ಬದುಕಬೇಕಾಗಿರುವುದರಿಂದ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬರಬೇಕು ಅದಕ್ಕಾಗಿ ಬಂಗಾರಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್ ಎನ್ ನಾರಾಯಣಸ್ವಾಮಿ ಅವರನ್ನು ಗೆಲ್ಲಿಸಿ ಹ್ಯಾಟ್ರಿಕ್ ಗೆಲುವು ಮಾಡುವ ಸಂಕಲ್ಪವನ್ನು ನಾವು ಎಲ್ಲರೂ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸೀಸಂದ್ರ ಗ್ರಾಮದಲ್ಲಿ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಹಾಗೂ ಮುಖಂಡರಿಗೆ ಕ್ರೇನ್ ಮೂಲಕ ಅಫಲ್ ಹಾರದ ಸ್ವಾಗತ ಕೋರಲಾಯಿತು. ವಡಗೂರು ಗ್ರಾಪಂ ಅಧ್ಯಕ್ಷ ಶ್ರೀನಿವಾಸ್, ಹುತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕೋಟೆ ಸಿಎಂ ನಾರಾಯಣಸ್ವಾಮಿ, ಷಾಪೂರು ಗ್ರಾಪಂ ಮಾಜಿ ಅಧ್ಯಕ್ಷ ದೊಡ್ನಹಳ್ಳಿ ರಾಮಕೃಷ್ಣೇಗೌಡ, ಉಪಾಧ್ಯಕ್ಷರಾದ ಹರಟಿ ಬಾಬು, ಅಬ್ಬಣಿ ಸಂಪತ್, ಮುಖಂಡರಾದ ಬೆಂಕಿ ನಾಗರಾಜ್, ನಡುಪಳ್ಳಿ ಸಂತೋಷ್, ಮಲ್ಲಂಡಹಳ್ಳಿ ಬಾಬು, ನಂದೀಶ್, ಮುಂತಾದವರು ಇದ್ದರು

Leave a Reply

Your email address will not be published. Required fields are marked *

You missed

error: Content is protected !!