• Thu. Jun 8th, 2023

ಕೆಜಿಎಫ್: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಬಹುಮತ ಸರಕಾರ ಆಧಿಕಾರಕ್ಕೆ ಬಂದು ಉತ್ತಮ ಆಡಳಿತ ನೀಡುತ್ತಿದೆ. ಅದೇ ರೀತಿಯ ಅಭಿವೃದ್ಧಿಗೆ ಕೆಜಿಎಫ್ ಕ್ಷೇತ್ರದಲ್ಲಿಯೂ ಬಿಜೆಪಿ ಪಕ್ಷದ ಅಭ್ಯರ್ಥಿ ಅಶ್ವಿನಿ ಸಂಪಂಗಿಗೆ ಒಂದು ಅವಕಾಶ ಕಲ್ಪಿಸಿ ಎಂದು ಮಾಜಿ ಶಾಸಕ ವೈ.ಸಂಪಂಗಿ ಮನವಿ ಮಾಡಿದರು.

ಬೇತಮಂಗಲ ಹೋಬಳಿ ಸುಂದರಪಾಳ್ಯ ಗ್ರಾಮದಲ್ಲಿ ಸ್ಥಳೀಯ ಮುಖಂಡರೊಂದಿಗೆ ಮಾಜಿ ಶಾಸಕ ವೈ.ಸಂಪಂಗಿ ಬಿಜೆಪಿ ಅಭ್ಯರ್ಥಿ ಅಶ್ವಿನಿ ಪರ ಮತಯಾಚನೆ ಮಾಡಿ ಮಾತನಾಡಿ ಕೆಜಿಎಫ್ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಶಾಸಕರ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳೇ ಕಣ್ಣು ಮುಂದೆ ಇವೆ.

ಕಾಂಗ್ರೆಸ್ ಪಕ್ಷದ ಶಾಸಕರ 5 ವರ್ಷದಲ್ಲಿ ಮಾಡಿರುವ ಕಾಮಗಾರಿಗಳಾದರು ಏನು ಎಂದು ಪ್ರಶ್ನಿಸಿದ ಅವರು ನಾವು ಅಧಿಕಾರದಲ್ಲಿದ್ದಾಗ ಮಾಡಿರುವ ಕೆಲಸಗಳನ್ನು ನೋಡಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಮುಖಂಡ ಲಕ್ಷ್ಮೀನಾರಾಯಣ್ ಶರ್ಮ ಮಾತನಾಡಿ, ಸುಂದರಪಾಳ್ಯ ಗ್ರಾಪಂಯಲ್ಲಿ ಕಾಂಗ್ರೆಸ್ ಪಕ್ಷದವರು ಆಡಳಿತಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಮಾಡಿಲ್ಲ, ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಸಹ ಮಾಡಿಲ್ಲ ಎಂದು ಆರೋಪಿಸಿದರು.

ಬೇಕಾದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಮತ್ತು ಜನರಿಗೆ ಸದಾ ಹತ್ತಿರವಾಗಿರುವ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ, ಗ್ರಾಪಂ ಸದಸ್ಯರಾದ ಮುರಳಿ, ಸುರೇಶ್ ರೆಡ್ಡಿ, ರಾಧಕೃಷ್ಣಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ವಾಣಿ ದಾಮೋಧರ್, ಮಾಜಿ ಸದಸ್ಯ ರಮೇಶ್, ಗ್ರಾಪಂ ಅಧ್ಯಕ್ಷ ಸುನೀಲ್, ಪ್ರಸಾದ್, ಕೇಶವ, ಶ್ರೀನಿವಾಸ್, ಮಂಜು ಮೊದಲಾದವರಿದ್ದರು.

Leave a Reply

Your email address will not be published. Required fields are marked *

You missed

error: Content is protected !!