• Fri. Apr 19th, 2024

PLACE YOUR AD HERE AT LOWEST PRICE

ಮಾಸ್ತಿ ಕನ್ನಡದ ಆಸ್ತಿ ಎಂದೇ ಪ್ರಖ್ಯಾತರಾದ ಸಣ್ಣ ಕಥೆಗಳ ಜನಕ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಕೋಲಾರ ಜಿಲ್ಲೆಯವರೇ ಆದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಅವರು ಬರೆದಿರುವ ಸಣ್ಣ ಕಥೆಗಳು, ಕಾದಂಬರಿಗಳನ್ನು ಹೆಚ್ಚಾಗಿ ಓದಿ ಅರ್ಥೈಸಿಕೊಂಡು ಅವರಂತೆ ಕನ್ನಡದ ಆಸ್ತಿಯಾಗಬೇಕುಂದು ನಿವೃತ್ತ ಪ್ರಾಂಶುಪಾಲ ವಿ.ರುದ್ರಪ್ಪ ಅಭಿಪ್ರಾಯಪಟ್ಟರು.

ಕೋಲಾರ ನಗರದ ಶುಭಲ ವಿದ್ಯಾಲಯದಲ್ಲಿ ಕೋಲಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಮಾಸ್ತಿ ವೆಂಕಟೇಶ್ ಅಯ್ಯಾಂಗರ್ ೧೩೨ನೇ ಜನ್ಮದಿನಾಚರಣೆಯಲ್ಲಿ ಮಾಸ್ತಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಕೋಲಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವಾಧ್ಯಕ್ಷ ಟಿ.ಸುಬ್ಬರಾಮ್ಯ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕುವಾರು ಇಂತಹ ಹಲವಾರು ಮಹನೀಯರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನುಡಿದರು.

ಶುಭಲ ವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಮಹನೀಯರ ಜನ್ಮ ದಿನಾಚರಣೆಗಳನ್ನು ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಇದರಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಬಗ್ಗೆ ಒಲವು ಮೂಡಲು ಸಹಕಾರಿಯಾಗಲಿದೆ ಎಂದರು.

ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಕೋ.ನಾ ಪರಮೇಶ್ವರನ್ ವಿದ್ಯಾರ್ಥಿಗಳಿಗೆ ಮಾಸ್ತಿ ವೆಂಕಟೇಶ್ ಅಯ್ಯಂಗಾರ್‌ರವರ ಜೀವನ, ವಿದ್ಯಾಭ್ಯಾಸ, ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಬಗ್ಗೆ ಸವಿಸ್ತಾರವಾಗಿ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಚಾಲಕರಾದ ಪಿ.ನಾರಾಯಣಪ್ಪ, ತಾಲ್ಲೂಕು ಪ್ರಧಾನ ಸಂಚಾಲಕರಾದ ವೇಣು ಸುಂದರಗೌಡ, ನಿವೃತ್ತ ಶಿಕ್ಷಕರಾದ ರಾಘವೇಂದ್ರ, ರಾಮಕೃಷ್ಣಪ್ಪ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!