• Thu. Sep 28th, 2023

PLACE YOUR AD HERE AT LOWEST PRICE

ಕುಸ್ತಿ ಪಟುಗಳಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ತಕ್ಷಣ ಬಂಧಿಸಿ ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಕೋಲಾರ ನಗರದ ತಹಶಿಲ್ದಾರ್ ಕಛೇರಿ ಮುಂದೆ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು ಸೇರಿಕೊಂಡು ಅಪ್ರಾಪ್ತ ಹೆಣ್ಣು ಮಕ್ಕಳು, ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ
ಪೊಲೀಸ್ ಅವರಿಗೆ ದೂರು ನೀಡಿದ್ದರೂ ಎಫ್‌ಐಆರ್ ದಾಖಲಾಗಿರಲಿಲ್ಲ ಸುಪ್ರೀಂಕೋರ್ಟ್ ಮಧ್ಯಪ್ರವೇಶದ ನಂತರವಷ್ಟೇ ಎಫ್‌ಐಆರ್ ದಾಖಲಾಗಿದೆ ಕುಸ್ತಿಪಟುಗಳು ಮೇಲಾಗಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕುಸ್ತಿ ಪಟುಗಳ ಆರೋಪದ ಹಿನ್ನೆಲೆಯಲ್ಲಿ ರಚಿಸಲಾದ ವಿಚಾರಣಾ ಸಮಿತಿಯ ವರದಿಯನ್ನು ಸಾರ್ವಜನಿಕರ ಅವಗಾಹನೆ ತರಬೇಕು ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಪ್ರಚಾರ ಮಾಡುವ ಮೋದಿ ನೇತೃತ್ವದ ಸರ್ಕಾರ ಹೀನ ಅಪರಾಧದ ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ ಇತನ ವಿರುದ್ದ ಕಾನೂನು ಕ್ರಮ ಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದ್ದ ಬಿಜೆಪಿ ನೇತೃತ್ವದ ಸರ್ಕಾರ ತನ್ನ
ಪೊಲೀಸ್ ಪಡೆಗಳನ್ನು ಬಳಸಿ, ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು

ಈ ಸಂದರ್ಭದಲ್ಲಿ ಮಹಿಳಾ ಸಂಘಟನೆ ಮುಖಂಡರಾದ ವಿ.ಗೀತಾ ಮಾತನಾಡಿ ದೆಹಲಿ ಪೊಲೀಸರು ಕುಡಿದು ಬಂದು ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆಸಿದ್ದಾರೆ
ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೊನೆಗಾಣಬೇಕು ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆ ಇಷ್ಟು ಕಿರುಕುಳ ಆದರೆ, ಇನ್ನು ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಇದ್ದೀಯಾ ದೇಶಕ್ಕೆ ಕೀರ್ತಿ ತರುವ ಸಾಮರ್ಥ್ಯದ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕು. ಈ ಕೂಡಲೇ ಪೋಸ್ಕೋ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿಯನ್ನು ವಿರುದ್ದ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಪಾತಕೋಟೆ ನವೀನ್‌ಕುಮಾರ್, ಕಾರ್ಮಿಕ ಮುಖಂಡರಾದ ಎಂ. ವಿಜಯಕೃಷ್ಣ, ಎಂ.ಭೀಮರಾಜ್, ಹೆಚ್.ಬಿ.ಕೃಷ್ಣಪ್ಪ, ಆಶಾ, ಮಂಜುಳ, ರೈತ ಮುಖಂಡರಾದ ಗಂಗಮ್ಮ, ವೀರೇಗೌಡ, ಭಾಗ್ಯಮ್ಮ, ಅಂಜನಪ್ಪ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!