• Fri. Apr 26th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಯಶಸ್ಸು ಎಂಬುವುದು ಒಂದು ನಿರ್ದಿಷ್ಟ ಘಟ್ಟಕ್ಕೆ ಸೀಮಿತವಾಗಬಾರದು ಅದು ಸಾಗರದಂತೆ ಜೀವನದ ನಿರಂತರ ಪಯಣವಾಗಬೇಕು. ಇದಕ್ಕೆ ಸ್ಪೂರ್ತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಎಂದು ತಹಶೀಲ್ದಾರ್ ರಶ್ಮಿ. ಯು ರವರು ಅಭಿಪ್ರಾಯ ಪಟ್ಟರು.

ಅವರು ಪಟ್ಟಣದ ಎಸ್.ಡಿ.ಸಿ ಕಾಲೇಜಿನಲ್ಲಿ ಅನಿಕೇತನ ಕನ್ನಡ ಬಳಗದ ವತಿಯಿಂದ ಡಾ॥ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರ 132ನೇ ಜನ್ಮ ದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಂಪರೆಗೆ ಸುಮಾರು ಎರಡು ಸಾವಿರದ ಐನೂರು ವರ್ಷಗಳ ಸುದೀರ್ಘ ಇತಿಹಾಸವಿದೆ. ಇಂತಹ ಐತಿಹಾಸಿಕ ಪರಂಪರೆ ಸಾಹಿತ್ಯವನ್ನು ಅನೇಕ ಲೇಖಕರು, ಸಾಹಿತಿಗಳು ಶ್ರೀಮಂತ ಗೊಳಿಸಿದ್ದಾರೆ.

ಸಾಹಿತ್ಯ ಪ್ರಕಾರಗಳಲ್ಲಿ ಸಣ್ಣ ಕಥೆಗಳು ಅತ್ಯಂತ ಮನೋರಂಜನೆ ಮತ್ತು ಆಕರ್ಷಕವಾಗಿರುತ್ತದೆ ಇದರ ಜನಕರೇ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಕನ್ನಡ ಸಾಹಿತ್ಯ ಪರಂಪರೆಯ ಹೊಸ ಅಧ್ಯಯನಕ್ಕೆ ಮೈಲುಗಲ್ಲು ಸೃಷ್ಟಿಸಿದ ಧೀಮಂತರು. ಅವರು ಮಾಸ್ತಿ ಕನ್ನಡದ ಆಸ್ತಿ ಎಂಬ ಪ್ರಖ್ಯಾತಿ ಹೊಂದಿದವರು.

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರು ಕಡು ಬಡತನದಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬಲ್ಲಿ ಜನಿಸಿದರು. ಆದರೆ ಅವರ ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ ಯಾಗಲಿಲ್ಲ, ಇವರು 1914ರಲ್ಲಿ ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಎಂ. ಎ. ಪದವಿಯನ್ನು ಪಡೆದುಕೊಂಡ್ಡಿದ್ದರು.

ಅಂದಿನ ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದ್ದರು. ತದನಂತರ ಸ್ವಂತ ಜಿಲ್ಲೆಯಾದ ಕೋಲಾರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಲಕ್ಷಾಂತರ ಯುವ ಪೀಳಿಗೆಗೆ ದಾರಿ ದೀಪವಾಗಿದ್ದಾರೆ.

ಮಾಸ್ತಿ ಕನ್ನಡಿಗರಿಗೆ ಒಂದು ಆಸ್ತಿ ಇವರು ಅನೇಕ ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳನ್ನು ರಚಿಸಿದ್ದಾರೆ, ಇವರ ಸಾಹಿತ್ಯ ಪ್ರೌಢಿಮೆಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.

ಇದರೊಂದಿಗೆ ಮೈಸೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ವಿಶ್ವವಿದ್ಯಾಲಯ ಡಿ. ಲಿಟ್ ಗೌರವ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ ಎಂದರು.

ಪ್ರಾಸ್ತಾವಿಕ ಭಾಷಣ ಮಾಡಿದ ಸಂಘದ ಅಧ್ಯಕ್ಷ ರಾಮ್ ಪ್ರಸಾದ್ ರವರು ಅನಿಕೇತನ ಕನ್ನಡ ಬಳಗವು ಸತತ ಆರು ವರ್ಷಗಳಿಂದ ಕುವೆಂಪು ರವರ ಆದರ್ಶ ತತ್ವಗಳನ್ನು ಅಳವಡಿಸಿಕೊಂಡು ಪ್ರತಿ ತಿಂಗಳು ಕನ್ನಡ ಸಾಹಿತ್ಯ ವನ್ನು ವಿವಿಧ ಕಾರ್ಯಕ್ರಮಗಳ ಮೂಲಕ ಕನ್ನಡವನ್ನು ಶ್ರೀಮಂತ ಗೊಳಿಸುತ್ತಾ ಬಂದಿದ್ದೇವೆ

ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಾಠ್ಯೇತರ ಚಟುವಟಿಕೆಗಳು ಬಹಳ ಅಗತ್ಯ. ಇವುಗಳು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿಯಾಗಿದೆ ಇಂತಹ ಸಂದರ್ಭದಲ್ಲಿ ಕನ್ನಡ ಭಾಷೆ ಸಂಸ್ಕೃತಿ ಸಂಪ್ರದಾಯ ಹಾಗೂ ಸಾಹಿತ್ಯದ ಬಗ್ಗೆ ಅಧ್ಯಯನ ನಡೆಸುವುದು ಅನಿವಾರ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ವಕೀಲ ಎನ್. ಜಯಪ್ರಕಾಶ್. ಉಪನ್ಯಾಸಕ ನಾಗಾನಂದ ಕೆಂಪರಾಜ್. ಸಂಘದ ಅಧ್ಯಕ್ಷ ಎಂ.ಎಸ್. ರಾಮ್ ಪ್ರಸಾದ್ ಇತರರು ಉಪಸ್ಥಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!