• Tue. Mar 19th, 2024

PLACE YOUR AD HERE AT LOWEST PRICE

ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯೂನಿಟ್ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್‌ ವಿದ್ಯುತ್‌ ಬಳಕೆ ಮಾಡುತ್ತಾರೆ. 2 ಲಕ್ಷಜ ನರು 200 ಯೂನಿಟ್‌ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.

ಸೇವಾ ಸಿಂಧು ಪೋರ್ಟ್‌ಲ್‌ ನಲ್ಲಿ ಜೂನ್‌ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್‌ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್‌ ಕಟ್ಟಬೇಕಿದೆ. ಆದರೆ ಉಚಿತ ಯೋಜನೆಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಅರ್ಜಿಸಲ್ಲಿಕೆಹೇಗೆ?

ಸೇವಾ ಸಿಂಧು ಪೋರ್ಟಲ್‌ ನಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್‌ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರುಒನ್‌, ಕರ್ನಾಟಕಒನ್‌, ಗ್ರಾಮಒನ್‌ ಸೆಂಟರ್‌ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್‌ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್‌ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನುE-Governance ಇಲಾಖೆ ಮಾಡಿಕೊಂಡಿರುತ್ತದೆ.

ಯೋಜನೆಯಡಿ ಬಾಡಿಗೆದಾರರು ಸೌಲಭ್ಯ ಪಡೆಯುವುದುಹೇಗೆ?

ವಿದ್ಯುತ್ ಬಿಲ್’ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ,  ಬಾಡಿಗೆ/ಭೋಗ್ಯದ ಕರಾರು ಪತ್ರಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಜೊತೆಗೆ ಆಧಾರ್ ಅನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?

ಜೂನ್‌ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.

  1. ಹೊಸ ಮನೆ ನಿರ್ಮಾಣ ಮಾಡಿದವರಿಗೆ ಈ ಯೋಜನೆ ಅನ್ವಯ ಆಗುತ್ತಾ?
  2. ಒಂದು ಮನೆಯಿಂದ ಮತ್ತೊಂದು ಮನೆಗೆ ಸ್ಥಳಾಂತರವಾದಾಗ ಈ ಯೋಜನೆ ಯಾವ ರೀತಿ ಅನ್ವಯವಾಗುತ್ತದೆ?

ಎಂಬ ಎರಡೂ ಅಂಶಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗು ಸಚಿವ ಸಂಪುಟದ ಗಮನಕ್ಕೆ ತಂದು ತುರ್ತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಇಂಧನ ಸಚಿವರು ಹೇಳಿದರು.

ಈ ಯೋಜನೆಗೆ ಸಂಬಂಧಿಸಿದಂತಹ ಮೇಲಿಂದ ಮೇಲೆ ಕೇಳಲಾಗುವ ಪ್ರಶ್ನೆಗಳು ಮತ್ತು ಸಂಶಯಗಳನ್ನು ನಿವಾರಿಸುವ ದೃಷ್ಠಿಯಿಂದ FAQ’s ತಯಾರಿಸಲಾಗಿದ್ದು,ಅದನ್ನು ಈ ಟಿಪ್ಪಣಿಯೊಂದಿಗೆ ಲಗತ್ತಿಸಿದೆ. ಈ ಮೂಲಕ ಗೃಹಬಳಕೆಯ ಗ್ರಾಹಕರಲ್ಲಿ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ.

ಆದಾಗ್ಯೂ ಈ ಯೋಜನೆಯ ಜಾರಿಯ ಸಂದರ್ಭದಲ್ಲಿ ಆಗ್ಗಾಗ್ಗೆ ಉದ್ಬವಿಸಬಹುದಾದ ಸಮಸ್ಯೆಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸ್ಪಂದಿಸಿ, ಅದಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಒಟ್ಟಾರೆ ಕರ್ನಾಟಕ ಸರ್ಕಾರದ ಈ ಮಹತ್ವದ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಜಾರಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ,  ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್.     ಜೆರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

error: Content is protected !!