• Thu. Sep 28th, 2023

PLACE YOUR AD HERE AT LOWEST PRICE

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಆದರೆ, ಒಂದೇ ಪಕ್ಷ ಅಧಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು.

ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದರ ಮಧ್ಯೆ ಇದೀಗ ಕೋಡಿಮಠದ ಡಾ.ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಗುರುವಾರ ಕೋಲಾರ ತಾಲ್ಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಕೋಡಿಮಠ ಶ್ರೀ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ. ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚನಕ್ಕಾಗಿ ಗುಡುಗು ಮಿಂಚು, ಬರಲಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿವೆ. ಎಲ್ಲೋ ನಡೆದ ಬಾಂಬ್ ದಾಳಿಯಿಂದ ಸಾಕಷ್ಟು ನಮಗೆ ಅನಾಹುತ ಸಂಭವಿಸಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದರು.

ಗಿಡ, ಮರ, ದೈವದ, ಆರಾಧ್ಯದ ಸಂಕೇತ. ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸಂಕೇತ ಇದೆ. ಅಂತಹ ಸೂಚನೆ ಈಗಾಗಲೇ ಸಿಕ್ಕಿದೆ. ಅದರಂತೆ ಬೆಟ್ಟದಲ್ಲಿ ಮೂನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಆದ್ಯಾತ್ಮಿಕವಾಗಿ ಅವರು ನಡೆಯುತ್ತಿದ್ದಾರೆ. ಹಾಗಾಗಿ ಅವರಿಗೆ ಒಳ್ಳೆಯದಾಗಲಿ‌. ಆಧ್ಯಾತ್ಮ ಬಿಟ್ಟು ಹೋದರೆ ಅವರಿಗೆ ದೈವವೇ ಉತ್ತರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಬಗ್ಗೆ ಅಭಿಪ್ರಾಯ ತಿಳಿಸಿದರು.

Leave a Reply

Your email address will not be published. Required fields are marked *

You missed

error: Content is protected !!