• Thu. Sep 28th, 2023

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹೆಚ್.ಮುನಿಯಪ್ಪ ರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು ತಮ್ಮ ಜನಾಂಗವನ್ನು ರಾಜಕೀಯವಾಗಿ ಗುರ್ತಿಸುವುದರ ಜೊತೆಗೆ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದು ಎಲ್ಲಾ ಸಂದರ್ಭದಲ್ಲೂ ನಿಮ್ಮ ಜೊತೆಯಲ್ಲಿದ್ದ ಸಮುದಾಯದ ಮುಖಂಡರಿಗೆ ಸೂಕ್ತ ಸ್ಥಾನಮಾನಗಳನ್ನು ಒದಗಿಸಿಕೊಡಬೇಕು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಎಂ.ಬಾಲಗೋವಿಂದ್, ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ಜಿಲ್ಲಾಧ್ಯಕ್ಷ ಎಸ್.ಎಂ.ನಾಗರಾಜ್, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ನರಸಿಂಹಯ್ಯ, ತಾಲೂಕು ಅಧ್ಯಕ್ಷ ಆನಂದ್‌ಕುಮಾರ್, ಐತರಾಸನನಹಳ್ಳಿ ನರಸಿಂಹಪ್ಪ, ಗರುಡನಹಳ್ಳಿ ಬಾಬು, ವಕ್ಕಲೇರಿ ಬಾಬು, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಜ್ಯ ಯುವ ಸಂಘಟನಾ ಕಾರ್ಯದರ್ಶಿ ಬೆಳ್ಳೂರು ತಿರುಮಲೇಶ್, ಸುಗುಟೂರು ವೇಣು, ಕುಡುವನಹಳ್ಳಿ ಆಂಜಿ, ರಂಗನಾಥ್ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!