• Mon. Apr 29th, 2024

ಕೋಲಾರ ಜಿಲ್ಲೆಯಲ್ಲೆ ಮೊದಲ ಸಂಚಾರಿ ರಕ್ತದಾನ ಘಟಕ ಪ್ರಾರಂಭ ರಕ್ತದಾನಿಗಳು ಸದುಪಯೋಗ ಪಡೆಯಿರಿ-ಡಿಹೆಚ್‌ಓ ಡಾ.ಜಗದೀಶ್ ಕರೆ

PLACE YOUR AD HERE AT LOWEST PRICE

ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ವತಿಯಿಂದ ಜಿಲ್ಲೆಯಲ್ಲೆ ಮೊಟ್ಟ ಮೊದಲ ಸಂಚಾರಿ ರಕ್ತದಾನ ಘಟಕವನ್ನು ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಪ್ರಾರಂಭಿಸಿದ್ದು, ರಕ್ತದಾನಿಗಳು ಸಂಚಾರಿ ರಕ್ತದಾನ ಘಟಕದ ಸದುಪಯೋಗವನ್ನು ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ಕರೆ ನೀಡಿದರು.

ಕೋಲಾರ ನಗರದ ಸರ್ಕಾರಿ ಬಾಲಕರ ಕಾಲೇಜು ವೃತ್ತದಲ್ಲಿ ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ಸಂಚಾರಿ ರಕ್ತದಾನ ಘಟಕದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾರ್ಲ್ ಲ್ಯಾಂಡ್ ಸ್ಟೀನರ್ ರವರ ಜನ್ಮದಿನದ ಜ್ಞಾಪಕಾರ್ಥವಾಗಿ ಇಡೀ ವಿಶ್ವದಲ್ಲಿ ರಕ್ತದಾನಿಗಳ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ ಎಂದರು.

ಅವಶ್ಯಕತೆಯಿರುವ ವ್ಯಕ್ತಿಗಳಿಗೆ ರಕ್ತವನ್ನು ಸರಿಯಾದ ವೇಳೆಯಲ್ಲಿ ಪೂರೈಸುವುದು. ತುರ್ತು ಸಮಯದಲ್ಲಿ ವಿತರಿಸಲು ಅವಶ್ಯಕವಾದ ರಕ್ತ ಮತ್ತು ರಕ್ತದ ಉತ್ಪನ್ನಗಳನ್ನು ರಕ್ತನಿಧಿ ಘಟಕಗಳಲ್ಲಿ ಶೇಖರಿಸಿಡುವುದಕ್ಕೆ ಸಂಚಾರಿ ರಕ್ತದಾನ ಘಟಕ ಉಪಯುಕ್ತವಾಗಿದೆ ಎಂದರು.
ತುರ್ತು ಸಂದರ್ಭಗಳಲ್ಲಿ ರಕ್ತದಾನಿಗಳು ರಕ್ತ ನಿಧಿ ಕೇಂದ್ರಕ್ಕೆ ಭೇಟಿ ನೀಡಲು ಸಾಧ್ಯವಾಗದ ಸಂದರ್ಭದಲ್ಲಿ ಸಂಚಾರಿ ರಕ್ತದಾನ ಘಟಕದ ಮೂಲಕ ಸ್ಥಳದಲ್ಲೇ ರಕ್ತದಾನ ಮಾಡಬಹುದಾಗಿದೆ ಈ ರೀತಿಯಾದ ಸಂಚಾರಿ ರಕ್ತದಾನ ಘಟಕಗಳು ಬೆಂಗಳೂರು ಮಹಾ ನಗರದಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದು ಲಯನ್ಸ್ ರಕ್ತ ನಿಧಿ ಕೇಂದ್ರದ ವತಿಯಿಂದ ಕೋಲಾರ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಸಂಚಾರಿ ಘಟಕ ಪ್ರಾರಂಭಿಸಿದ್ದು ರಕ್ತದಾನಿಗಳಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಬಾಲಕರ ಕಾಲೇಜಿನ ವಿದ್ಯಾರ್ಥಿಗಳು, ರಕ್ತದಾನಿಗಳು ಸಂಚಾರಿ ರಕ್ತದಾನ ಘಟಕದಲ್ಲಿ ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಡಯಟ್ ಹಿರಿಯ ಉಪನ್ಯಾಸಕ ಸಿ.ಆರ್.ಅಶೋಕ್, ಲಯನ್ಸ್ ಕ್ಲಬ್ ಅಧ್ಯಕ್ಷ ಸುನಿತಾ, ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಟಿ.ಎಸ್.ಜನಾರ್ಧನ್, ಮುರಳಿ, ಕೆಎಸ್‌ಎಮ್‌ಎಸ್‌ಸಿಎಲ್ ವ್ಯವಸ್ಥಾಪಕ ಶ್ರೀರಾಮ್, ರೊಟೇರಿಯನ್‌ಗಳಾದ ಬಿಕೆ ದೇವರಾಜ್, ನಾಗಶೇಖರ್, ಡಾ.ಚೇತನ, ತಜ್ಞರಾದ ಪ್ರತಿಭಾ, ಅಜಿತ್, ಅಚ್ಚಯ್ಯ ಶೆಟ್ಟಿ , ಕುರುಬರಪೇಟೆ ವೆಂಕಟೇಶ್, ವಿದ್ಯಾಶ್ರೀ ಮುಂತಾದವರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!