• Tue. May 7th, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ಸಹಕಾರ ಕ್ಷೇತ್ರದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ದಲಿತ ಸಮುದಾಯದ ಡಿ.ಪಿ.ಎಸ್.ಮುನಿರಾಜು ನೂತನ ಕೋಲಾರ ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷ ವಿ.ಕೃಷ್ಣ ತಮ್ಮ ಸ್ಥಾನಕ್ಕೆ ಸ್ವಯಂ ಪ್ರೇರಿತವಾಗಿ ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಜರುಗಿದ ಚುನಾವಣೆಯಲ್ಲಿ ಡಿಪಿಎಸ್ ಮುನಿರಾಜು ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಅವಿರೋಧ ಎಂದು ಘೋಷಿಸಲಾಯಿತು.

ಇದೇ ಸಂದರ್ಭದಲ್ಲಿ ಈ ಹಿಂದೆ ಉಪಾಧ್ಯಕ್ಷರಾಗಿದ್ದ ಡಿಪಿಎಸ್ ಮುನಿರಾಜು ತೆರವು ಮಾಡಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಅವಿರೋಧ ಎಂದು ಘೋಷಿಸಲಾಯಿತು.
ಅಧ್ಯಕ್ಷ ಡಿಪಿಎಸ್ ಮುನಿರಾಜುರಿಗೆ ಮಾಜಿ ಅಧ್ಯಕ್ಷ ರಾಜಣ್ಣ ಮತ್ತು ಉಪಾಧ್ಯಕ್ಷ ವೆಂಕಟೇಶಪ್ಪರಿಗೆ ನಿರ್ಗಮಿತ ಅಧ್ಯಕ್ಷ ವಿ.ಕೃಷ್ಣ ಸೂಚಕರಾಗಿದ್ದರು. ಚುನಾವಣಾಽಕಾರಿಯಾಗಿ ಸಹಕಾರ ಇಲಾಖೆಯ ಅಽಕಾರಿ ಹಬೀದ್ ಹುಸೇನ್ ಕಾರ್ಯನಿರ್ವಹಿಸಿದ್ದರು.
ನೂರು ವರ್ಷಗಳ ಇತಿಹಾಸವಿರುವ ಕೋಲಾರ ಅರ್ಬನ್ ಬ್ಯಾಂಕ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಲಿತ ಮುಖಂಡ ಡಿಪಿಎಸ್ ಮುನಿರಾಜು ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಿಲ್ಲೆಯ ದಲಿತರಲ್ಲಿ ಸಂತಸ ತಂದಿದೆ ಎಂದು ಈ ಸಂದರ್ಭದಲ್ಲಿ ಹಾಜರಿದ್ದ ದಲಿತ ಮುಖಂಡರು ಅಭಿಪ್ರಾಯಪಟ್ಟು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಕೋಲಾರ ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ಆಡಳಿತ ಮಂಡಳಿಯಲ್ಲಿ ಕೇವಲ ಇಬ್ಬರು ಮಾತ್ರ ಪರಿಶಿಷ್ಟ ಜಾತಿಯವರು ನಿರ್ದೇಶಕರಾಗಿದ್ದು, ಸರ್ಕಾರದ ಮೀಸಲಾತಿ ಅಡಿಯಲ್ಲಿ ಇನ್ನು ಹೆಚ್ಚಿನ ಸ್ಥಾನಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನಿರ್ದೇಶಕ ಸ್ಥಾನ ಮೀಸಲಿಟ್ಟು ಮುಂಬರುವ ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿಯವರಿಗೆ ಮೀಸಲಿಡಬೇಕೆಂದು ಈ ಮೂಲಕ ಸರ್ಕಾರಕ್ಕೆ ಎಂ.ಆರ್.ಚೇತನ್ ಬಾಬು ಮನವಿ ಮಾಡಿದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!