• Thu. May 2nd, 2024

PLACE YOUR AD HERE AT LOWEST PRICE

ಕೋಲಾರ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಗೆ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಾ. ಎಂ. ಮುನಿರಾಜು ಡಿಪಿಎಸ್, ಉಪಾಧ್ಯಕ್ಷರಾಗಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೆರವಾಗಿದ್ದ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿದ್ದು, ಹಿರಿಯ ಸಹಕಾರಿ ಹಾಗೂ ಸಾಮಾಜಿಕ ಹೋರಾಟಗಾರ ಡಾ.ಎಂ.ಮುನಿರಾಜು ಡಿಪಿಎಸ್ ರವರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದರು. ಎರಡೂ ಹುದ್ದೆಗಳಿಗೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಐ.ಎಂ. ಅಬೀಬ್ ಹುಸೇನ್ ರವರು ಡಾ.ಎಂ.ಮುನಿರಾಜು ಡಿಪಿಎಸ್ ರವರನ್ನು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು. ಇದೇ ವೇಳೆ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಅಯ್ಕೆಯಾಗಿರುವುದಾಗಿ ಘೋಷಣೆ ಮಾಡಿದರು.

ನೂತನ ಪದಾಧಿಕಾರಿಗಳ ಘೋಷಣೆ ಮಾಡಿದ ನಂತರ ಚುನಾವಣಾಧಿಕಾರಿಗಳು ಹಾಗೂ ಬ್ಯಾಂಕಿನ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ಹೂಮಾಲೆ ಹಾಕಿ ಎಲ್ಲರಿಗೂ ಸಿಹಿ ಹಂಚುವ ಮೂಲಕ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಡಿಪಿಎಸ್ ಮುನಿರಾಜು, ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕ್‌ಗಳಿಗೆ ಉತ್ತಮ ಭವಿಷ್ಯವಿದ್ದು, ನಗರದಲ್ಲಿರುವ ಅರ್ಬನ್ ಬ್ಯಾಂಕ್‌ನ್ನು ಉತ್ತಮ ಆಡಳಿತ ನೀಡುವ ಮೂಲಕ, ಬ್ಯಾಂಕನ್ನು ಗ್ರಾಹಕರ ಸ್ನೇಹಿ ಬ್ಯಾಂಕ್ ಆಗಿ ಪರಿವರ್ತಿಸಲಾಗುವುದು. ಬ್ಯಾಂಕ್ ಅಭಿವೃದ್ದಿಗೆ ಹೆಚ್ಚು ಹೆಚ್ಚು ಸದಸ್ಯರ ಖಾತೆ ತೆರೆಸುವ ಮೂಲಕ ಬ್ಯಾಂಕಿಗೆ ಠೇವಣಿ ಶೇಖರಣೆ ಹಾಗೂ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದರು ತಿಳಿಸಿದರು.

ನೂತನ ಅಧ್ಯಕ್ಷರಿಗೆ ಅಭಿನಿಂದನೆ ಸಲ್ಲಿಸಲು ಅಪಾರ ಸಂಖ್ಯೆಯ ಅಭಿಮಾನಿಗಳು ಬ್ಯಾಂಕಿಗೆ ಆಗಮಿಸಿ ಹೂವಿನ ಹಾರಗಳನ್ನು ಹಾಕಿ, ಪುಷ್ಪಾರ್ಚನೆ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ತದನಂತರ ಬಂಗಾರಪೇಟೆ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅರ್ಬನ್ ಬ್ಯಾಂಕ್ ಮಾಜಿ ಅಧ್ಯಕ್ಷ ರಾಜಣ್ಣ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಬೆಳಮಾರನಹಳ್ಳಿ ಆನಂದ್, ಡಿಪಿಎಸ್ ರಾಜ್ಯಾಧ್ಯಕ್ಷ ರಾಜಕುಮಾರ್, ಭಾರತೀ ದಲಿತ ಸೇನೆ ಅಧ್ಯಕ್ಷ ದಲಿತ್ ನಾರಾಯಣಸ್ವಾಮಿ, ನರಸಾಪುರ ನಾರಾಯಣಸ್ವಾಮಿ, ಕುಡಾ ಮಾಜಿ ಸದಸ್ಯ ಅಪ್ಪಿ ನಾರಾಯಣಸ್ವಾಮಿ, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಬಿ.ಶ್ರೀರಂಗ, ಜನಾಧಿಕಾರ ಸಂಘಟನೆ ಅಧ್ಯಕ್ಷ ಸಿ.ವಿ.ನಾಗರಾಜ್, ಕಲಾವಿದ ಮತ್ತಿಕುಂಟೆ ಕೃಷ್ಣಪ್ಪ, ಗಂಗಮ್ಮನಪಾಳ್ಯ ರಾಮಯ್ಯ, ಹೂಹಳ್ಳಿ ಪ್ರಕಾಶ್, ಎಂ.ಆರ್. ಚೇತನ್ ಬಾಬು, ಮೇಡಿಹಾಳ ಮುನಿಆಂಜಿನಪ್ಪ, ಹೆಚ್.ಎನ್.ಮೂರ್ತಿ, ಖಾದ್ರಿಪುರ ರಾಜೇಶ್, ಕೋಡಿರಾಮಸಂದ್ರ ನಾರಾಯಣಪ್ಪ, ಮಿಲ್ಟಿç ರಾಮಯ್ಯ, ಕೆಇಬಿ ಚಂದ್ರಪ್ಪ, ಅಂಬೇಡ್ಕರ್ ನಗರ ಸೋಮಣ್ಣ ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!