• Tue. May 7th, 2024

PLACE YOUR AD HERE AT LOWEST PRICE

ಮುಳಬಾಗಲು ಬೈರಕೂರು ಹೋಬಳಿ ಹೀರೇಗೌಡನಹಳ್ಳಿಯಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡುತ್ತೇನೆಂದು ಮಾತು ತಪ್ಪಿದ ಸರ್ಕಾರದ ವಿರುದ್ದ ಸಾಲ ಕಟ್ಟಲ್ಲ ಎಂದು ಸಿಡಿದೆದ್ದ ಮಹಿಳೆಯರು

ಸಾಲ ಮನ್ನಾ ಮಾಡುತ್ತೇನೆಂದು ಮಾತಿದ ತಪ್ಪಿದ ಕಾಂಗ್ರೇಸ್ ಸರ್ಕಾರ ಮಹಿಳೆಯರ ಆಕ್ರೋಶಕ್ಕೆ ಗುರಿಯಾದ ಪಲವಾಗಿ ಇಂದು ಸಾಲವಸೂಲಿಗೆ ಹೋದ ಸೋಸೈಟಿ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದು ಆಗಿ ಸಾಲ ವಸೂಲಿ ಮಾಡಲು ಬಂದರೆ ಹುಷಾರ್ ಸಾಲ ಮನ್ನಾ ಮಾಡುತ್ತೇವೆಂದು ನಮಗೆ ಮೋಸ ಮಾಡಿದ ಮುಖ್ಯಮಂತ್ರಿಗಳ ಬಳಿ ಸಾಲ ವಸೂಲಿ ಮಾಡಿಕೊಳ್ಳಿ ಎಂದು ಕಡಕ್ ಎಚ್ಚರಿಕೆ ನೀಡಿದರು.

ಚುನಾವಣೆ ಸಮಯದಲ್ಲಿ ಕಾಂಗ್ರೇಸ್ ಸಮಾವೇಶಗಳಲ್ಲಿ ಸಿದ್ದರಾಮಯ್ಯನವರು ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡೇ ಮಾಡ್ತಿನಿ ಎಂದು ಮಹಿಳೆಯರ ವೋಟ್ ಗಾಗಿ ಹೇಳಿಕೆ ಕೊಟ್ಟರೆ ಸಾಲದು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳಬೇಕಾಗಿದೆ. ಇಲ್ಲವಾದರೆ ಬ್ಯಾಂಕ್ ಸಿಬ್ಬಂದಿ ಮತ್ತು ಸರ್ಕಾರಕ್ಕೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಆಗಿದೆ.

ಕಾಂಗ್ರೇಸ್‌ನ ಪ್ರಜಾಯಾತ್ರೆ ಸಮಾವೇಶಗಳಲ್ಲಿ ಸಾವಿರಾರು ಮಹಿಳೆಯರ ಸಮ್ಮುಖದಲ್ಲಿ ನಮ್ಮ ಪಕ್ಷಕ್ಕೆ ಮಹಿಳೆಯಾದ ನೀವು ಮತ ನೀಡಿದರೆ ಸಹಕಾರ ಬ್ಯಾಂಕ್‌ಗಳಲ್ಲಿ ಪಡೆದಿರುವ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುತ್ತೇವೆಂಧು ಮಾತು ನೀಡಿ ಮತ ಪಡೆದ ಸಿದ್ದರಾಮಯ್ಯನವರ ಸರ್ಕಾರ ಸ್ತ್ರೀಶಕ್ತಿ ಸಾಲ ಮನ್ನಾ ಮಾಡದೆ ಇರುವುದು ಮಹಿಳೆಯರಿಗೆ ಮಾಡಿದ ದ್ರೋಹವಾಗಿದೆ

ನಿಯತ್ತಾಗಿ ಮಾಡಿದ ಸಾಲವನ್ನು ಮರುಪಾವತಿ ಮಾಡುವುದು ನಾವೇ ಆಗಿದ್ದೇವೆ, ಹಾಗೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಕಾಂಗ್ರೇಸ್ ಸರ್ಕಾರವನ್ನು ನಮ್ಮ ಎಲ್ಲಾ ಮಹಿಳೆಯರು ಬೆಂಬಲಿಸಿ ಮತ ನೀಡಿ ನಿಮ್ಮನ್ನು ಮುಖ್ಯಮಂತ್ರಿ ಮಾಡಿದ್ದೇವೆ ಎಂಬುದನ್ನು ಮರೆಯಬೇಡಿ ಸಿದ್ದರಾಮಣ್ಣ, ಸಾಲ ಮನ್ನಾ ಆಗುವವರೆಗೂ ನಾವು ಸಾಲ ಕಟ್ಟುವುದಿಲ್ಲ. ಸಹಕಾರಿ ಬ್ಯಾಂಕ್‌ಗಳ ಸಿಬ್ಬಂದಿ ಏನಾದರೂ ಸಾಲ ವಸೂಲಿ ಹೆಸರಿನಲ್ಲಿ ಬಂದರೆ ಕಟ್ಟಿ ಹಾಕಬೇಕಾಗುತ್ತದೆ ಎಂದು ಬ್ಯಾಂಕ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

ರೈತ ಸಂಘದ ನಾರಾಯಣಗೌಡರು ಘಟನೆ ನಡೆದ ಸ್ಥಳಕ್ಕೆ ದಾವಿಸಿ ಕೂಡಲೇ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡು ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು
ರೈತ ಸಂಘದ ನಾರಾಯಣಗೌಡ, ಮುನಿಲಕ್ಷ್ಮಮ್ಮ, ಗೀತಾ, ಮುನಿಲಕ್ಷ್ಮೀ, ನಾಗರತ್ನ, ನಾರಾಯಣಮ್ಮ, ಹನುಮಕ್ಕ, ಸುನಂದ, ಶಿಲ್ಪ, ಸಾವಿತ್ರಮ್ಮ, ಮಂಜುಳಾ, ಲಕ್ಷ್ಮೀದೇವಮ್ಮ, ಶೋಭಾ, ಶೈಲ, ಉಮಾ, ಈಶ್ವರಮ್ಮ, ಕಾಂತಮ್ಮ ಮುಂತಾದವರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!