• Tue. May 7th, 2024

ಅಗಸ್ತ್ಯ ಫೌಂಡೇಷನ್‌ನಿಂದ ವಿಜ್ಞಾನ ಪ್ರಯೋಗಗಳ ಪ್ರದರ್ಶನ ಪ್ರೌಢಶಾಲಾ ಮಕ್ಕಳ ಚೇತೋಹಾರಿ ಕಲಿಕೆಗೆ ಸಹಕಾರಿ-ಸಿದ್ದೇಶ್ವರಿ

PLACE YOUR AD HERE AT LOWEST PRICE

ಕುಪ್ಪಂನ ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಟಾನದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಯೋಗಗಳ ಮೂಲಕ ವಿಜ್ಞಾನದ ಅರಿವು ಮೂಡಿಸುತ್ತಿದ್ದು, ಇದು ಮಕ್ಕಳ ಮನದಲ್ಲಿನ ಪ್ರಶ್ನೆಗಳಿಗೆ ಪರಿಹಾರವನ್ನು ನೇರ ಕಂಡುಕೊಳ್ಳವ ಮೂಲಕ ಚೇತೋಹಾರಿ ಕಲಿಕೆಗೆ ಸಹಕಾರಿಯಾಗಿದೆ ಎಂದು ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕಿ ಸಿದ್ದೇಶ್ವರಿ ತಿಳಿಸಿದರು.

ಶುಕ್ರವಾರ ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ತಮ್ಮ ಅಗಸ್ತ್ಯ ಫೌಂಡೇಷನ್ ತನ್ನ ಮೊಬೈಲ್ ವಿಜ್ಞಾನ ಪ್ರಯೋಗಾಲಯದ ಮೂಲಕ ಶಾಲೆಗೆ ಆಗಮಿಸಿ ಮಕ್ಕಳ ಚೇತೋಹಾರಿ ಕಲಿಕೆಗೆ ನೆರವಾಗಿದ್ದನ್ನು ಸ್ವಾಗತಿಸಿ ಅವರು ಮಾತನಾಡುತ್ತಿದ್ದರು.

ಈಗಾಗಲೇ ಕೋಲಾರ ತಾಲ್ಲೂಕಿನ ೧೦೦ ಕ್ಕೂ ಹೆಚ್ಚು ಶಾಲೆಗಳಲ್ಲಿ ಉಚಿತವಾಗಿ ವಿಜ್ಞಾನ ಪ್ರಯೋಗಗಳನ್ನು ಪ್ರದರ್ಶಿಸಿರುವ ಅಗಸ್ತ್ಯ ಫೌಂಡೇಷನ್ ಕಾರ್ಯ ಮೆಚ್ಚುವಂತದ್ದು ಎಂದ ಅವರು, ಮಕ್ಕಳಿಗೆ ತಾತ್ವಿಕ ಬೋಧನೆಗಿಂತ ಚಟುವಟಿಕೆಯಾಧಾರಿತ ಪ್ರಯೋಗಗಳ ಮೂಲಕ ಕಲಿಕೆ ಹೆಚ್ಚು ಕಾಲ ಮನದಲ್ಲಿ ಉಳಿಯುವಂತೆ ಮಾಡುತ್ತದೆ ಎಂದರು.

ವಿಜ್ಞಾನ ಕಬ್ಬಿಣದ ಕಡಲೆಯಲ್ಲ, ಅತಿ ಸುಲಭ ಎಂಬುದನ್ನು ಪ್ರಯೋಗಗಳ ಮೂಲಕ ಮನಮುಟ್ಟುವಂತೆ ಕಲಿಸುತ್ತಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಅಗಸ್ತ್ಯ ಫೌಂಡೇಷನ್‌ನ ವ್ಯವಸ್ಥಾಪಕ ಹರೀಶ್‌ಕುಮಾರ್ ಮಾತನಾಡಿ, ಕಳೆದ ೯ ವರ್ಷಗಳಿಂದ ನಾವು ಜಿಲ್ಲೆಯ ಪ್ರತಿ ಶಾಲೆಗೂ ಹೋಗಿ ವಿಜ್ಞಾನ ಪ್ರಯೋಗಗಳನ್ನು ಮಾಡಿ ಮಕ್ಕಳ ಜ್ಞಾನಾಭಿವೃದ್ದಿಗೆನೆರವಾಗುತ್ತಿರುವುದಾಗಿ ತಿಳಿಸಿದರು.

ಈ ಭಾಗದ ವ್ಯವಸ್ಥಾಪಕರಾದ ಅನಂತಪ್ಪ, ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಟಾನವು ಆಂಧ್ರಪ್ರದೇಶದ ಕುಪ್ಪಂನಲ್ಲಿ ೧೭೮ ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗಿದ್ದು, ದೇಶದ ೨೨ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದೆ, ತಿಂಗಳಿಗೆ ೩೦ ಶಾಲೆಗಳಿಗೆ ಭೇಟಿ ನೀಡಿ ವಾರ್ಷಿಕ ಕನಿಷ್ಟ ೭ ರಿಂದ ೮ ಬಾರಿ ವಿಜ್ಞಾನ ಪ್ರಯೋಗಗಳ ಮೂಲಕ ಶಾಲೆಗಳಲ್ಲಿ ಜ್ಞಾನ ತುಂಬಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಅಗಸ್ತ್ಯ ಫೌಂಡೇಷನ್‌ನ ಸಂಪನ್ಮೂಲ ಶಿಕ್ಷಕರಾದ ರಜನಿ ಶಾಲೆಯ ಶಿಕ್ಷಕರಾದ ಎಂ.ಆರ್.ಗೋಪಾಲಕೃಷ್ಣ, ಭವಾನಿ, ಶ್ವೇತಾ,ಸುಗುಣಾ, ಫರೀದಾ, ಶ್ರೀನಿವಾಸಲು,ರಮಾದೇವಿ,ಡಿ.ಚಂದ್ರಶೇಕರ್ ಮತ್ತಿತರರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!