• Sun. May 19th, 2024

ಮಾರ್ವಾಡಿ ಯುವಮಂಚ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ನೆರವಿನ ಮಹಾಪೂರ ಪ್ರೋತ್ಸಾಹ ಸಿಕ್ಕಲ್ಲಿ ಸರ್ಕಾರಿ ಶಾಲಾ ಮಕ್ಕಳೇ ಮಹಾನ್ ಸಾಧಕರು-ಅಂಕಿತ್ ಮೋದಿ

PLACE YOUR AD HERE AT LOWEST PRICE

ಸರ್ಕಾರಿ ಶಾಲೆಗಳಲ್ಲಿನ ಪ್ರತಿಭೆಗಳಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವ ಮೂಲಕ ಪ್ರೋತ್ಸಾಹ ನೀಡಿದಲ್ಲಿ ದೇಶದ ಅನೇಕ ಸಾಧಕರು ಇಲ್ಲಿಂದಲೇ ಸಮಾಜಕ್ಕೆ ಆಸ್ತಿಯಾಗಿ ಹೊರಬರುತ್ತಾರೆ ಎಂದು ಬೆಂಗಳೂರಿನ ಮಾರ್ವಾಡಿ ಯುವಮಂಚ್ ಅಧ್ಯಕ್ಷ ಅಂಕಿತ್ ಮೋದಿ ಅಭಿಪ್ರಾಯಪಟ್ಟರು.

ಕೋಲಾರ ತಾಲ್ಲೂಕಿನ ಕೆಂಬೋಡಿ ಸರ್ಕಾರಿ ಶಾಲೆ ಆವರಣದಲ್ಲಿ ವಡಗೂರು ಹಾಗೂ ಅಣ್ಣಿಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ ಏಳುನೂರು ಮಕ್ಕಳಿಗೆ ಬೆಂಗಳೂರಿನ ಮಾರ್ವಾಡಿಯುವ ಮಂಚ್ ವತಿಯಿಂದ ಶಾಲಾ ಬ್ಯಾಗ್ ಹಾಗೂ ಲೇಖನ ಸಾಮಗ್ರಿ, ಶಾಲೆಗಳಿಗೆ ಸೀಲಿಂಗ್ ಫ್ಯಾನ್‌ಗಳನ್ನು ಕೊಡುಗೆಯಾಗಿ ವಿತರಿಸಿ ಅವರು ಮಾತನಾಡುತ್ತಿದ್ದರು.

ಸರ್ಕಾರಿ ಶಾಲೆಗಳಲ್ಲೂ ಅನೇಕ ಸಾಧಕರಿದ್ದಾರೆ, ಈ ದೇಶ ಮಹಾನ್ ವ್ಯಕ್ತಿಗಳೆಲ್ಲಾ ಸರ್ಕಾರಿ ಶಾಲೆಗಳಲ್ಲೇ ಓದಿದವರು ಎಂಬ ಸತ್ಯ ಅರಿಯಬೇಕಿದೆ, ಈ ಮಕ್ಕಳಿಳಿಗೆ ಗುಣಮಟ್ಟದ ಕಲಿಕೆ ಜತೆಗೆ ಅಗತ್ಯ ಸೌಲಭ್ಯ ಒದಗಿಸಿದ್ದೇ ಆದಲ್ಲಿ ನಮ್ಮ ದೇಶದ ಶೈಕ್ಷಣಿಕ ಪ್ರಗತಿ ವಿಶ್ವಕ್ಕೆ ಮಾದರಿಯಾಗುತ್ತದೆ ಎಂದರು.

ನಮ್ಮ ಸಂಸ್ಥೆ ಸರ್ಕಾರಿ ಶಾಲೆಗಳ ಬಡ ಮಕ್ಕಳಿಗೆ ನೆರವಾಗುವ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದೆ, ಇಂತಹ ಕಾರ್ಯಕ್ಕೆ ಕೋಲಾರದ ಶಿಕ್ಷಕ ಗೆಳೆಯರ ಬಳಗ ಸಾಥ್ ನೀಡಿದ್ದು, ನಾವು ನೀಡಿದ್ದನ್ನು ಅತ್ಯಂತ ಪ್ರಾಮಾಣಿಕವಾಗಿ ಮಕ್ಕಳಿಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಖಾಸಗಿ ಸಂಸ್ಥೆಗಳಿಗಿಂತಲೂ ಸರ್ಕಾರಿ ಶಾಲೆಗಳಲ್ಲೇ ನುರಿತ ಶಿಕ್ಷಕರಿದ್ದಾರೆ, ಇಲ್ಲಿ ಬರುವ ಮಕ್ಕಳ ಕಲಿಕೆಗೆ ಬಡತನ ಅಡ್ಡಿಯಾಗಬಾರದು, ಈ ಮಕ್ಕಳು ದೇವರ ಸ್ವರೂಪವಾಗಿದ್ದು, ಇವರಿಗೆ ನೆರವಾದರೆ ಸಿಗುವ ಆತ್ಮತೃಪ್ತಿಗೆ ಬೇರಾವ ಸಂತೋಷವೂ ಸಮನಲ್ಲ ಎಂದರು.

ಯುವ ಮಂಚ್ ಕಾರ್ಯದರ್ಶಿ ಗೌರವ್‌ಶರ್ಮ ಮಾತನಾಡಿ, ಬಡತನದ ನಡುವೆಯೂ ಉತ್ತಮ ಸಾಧನೆ ಮಾಡುವ ಆತ್ಮಸ್ಥೈರ್ಯ ಈ ಮಕ್ಕಳಲ್ಲಿ ಕಂಡು ಬರುತ್ತಿದೆ, ಈ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಉಳ್ಳವರಲ್ಲಿ ಹೃದಯವಂತಿಕೆ ಇದ್ದರೆ ಸಾಕು, ಹಂಚಿ ತಿನ್ನುವ ಮನೋಭಾವ ಬಲಗೊಂಡರೆ ಖಂಡಿತಾ ಶೈಕ್ಷಣಿಕ ಪ್ರಗತಿಯ ಭವ್ಯ ಭಾರತ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ಎಸ್.ನಾರಾಯಣಸ್ವಾಮಿ ಮಾತನಾಡಿ, ಮಾರ್ವಾಡಿ ಯುವ ಮಂಚ್ ಈ ಹಿಂದೆಯೂ ಸಹ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಿದ್ದರು. ಮುಂದೆಯೂ ಸಹ ಇನ್ನು ಹೆಚ್ಚು ಮಕ್ಕಳಿಗೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಮನವಿ ಮಾಡಿಕೊಂಡರಲ್ಲದೆ ಮುಂದಿನ ಮಂಗಳವಾರ ಮತ್ತು ಬುಧವಾರ ಶಿಕ್ಷಕ ಗೆಳೆಯರ ಬಳಗದ ಸಹಯೋಗದಲ್ಲಿ ಎಪ್ಸನ್ ಪ್ರವೇಟ್ ಕಂಪನಿ, ಬೆಂಗಳೂರು ಅವರಿಂದ ತಾಲೂಕಿನ ಒಂದರಿಂದ ೧೦ನೇ ತರಗತಿಯ ಎಲ್ಲಾ ಮಕ್ಕಳಿಗೂ ನೋಟ್ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ವಿವಿಧ ದಾನಿಗಳು, ಸಂಸ್ಥೆಗಳ ಸಹಕಾರದಿಂದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರ ಬಳಗ ಬದ್ದತೆಯಿಂದ ಕೆಲಸ ಮಾಡುತ್ತಿದೆ, ನೀಡಿದ ವಸ್ತುಗಳು ಮುಖ್ಯ ಫಲಾನುಭವಿಗಳಾದ ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಮುಖ್ಯ ಶಿಕ್ಷಕರುಗಳು ಯಾವುದೇ ಲೋಪವಾಗದಂತೆ ಎಚ್ಚರವಹಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮಾರ್ವಾಡಿ ಯುವಮಂಚ್ ಖಜಾಂಚಿ ಪ್ರದೀಪ್ ಅಗರ್ವಾಲ್, ಜಯಪ್ರಕಾಶ್ ಅಗರ್ವಾಲ್ ಸುಶೀಲ್ ಶೈನಿ, ಶಿಕ್ಷಕ ಗೆಳೆಯರ ಬಳಗದ ಗೌರವಾಧ್ಯಕ್ಷ ಆರ್.ಶ್ರೀನಿವಾಸನ್, ಉಪಾಧ್ಯಕ್ಷ ವೀರಣ್ಣಗೌಡ, ಶಿಕ್ಷಣ ಸಂಯೋಜಕ ನಂಜುಂಡ ಗೌಡ , ಮುಖ್ಯ ಶಿಕ್ಷಕ ಬಿ.ಎಂ.ನಾರಾಯಣಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷರು,ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.

 

 

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!