• Sun. Apr 28th, 2024

ಜಿಲ್ಲೆಯ ಕೀರ್ತಿ ಉಳಿಸುವ ಕೆಲಸವನ್ನು ನೀವು ಮಾಡಿ, ನಿಮಗೆ ಸಹಕಾರವನ್ನು, ಅಭಿವೃದ್ಧಿಯನ್ನು ನಾವು ಮಾಡುತ್ತೇವೆ : ಶಾಸಕ ಕೊತ್ತೂರು ಜಿ.ಮಂಜುನಾಥ್

PLACE YOUR AD HERE AT LOWEST PRICE

ಕೋಲಾರ: ನಮ್ಮಲ್ಲಿ ಕ್ರೀಡಾಪಟುಗಳಿಗೆ ಕೊರತೆಯಿಲ್ಲ ಅಭಿವೃದ್ಧಿಯಲ್ಲಿ ಮಾತ್ರ ಕೊರತೆ ಇದ್ದು ಅಭಿವೃದ್ಧಿಯನ್ನು ನಾವು ನೋಡಿಕೊಳ್ಳುತ್ತೇವೆ ಜಿಲ್ಲೆಯ ಕೀರ್ತಿ ಉಳಿಸುವ ಕೆಲಸವನ್ನು ನೀವು ಮಾಡಿ, ನಿಮಗೆ ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ನಾವು ಮಾಡುತ್ತೇವೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ 2022-23 ನೇ ಸಾಲಿನ ಮೈಸೂರಿನಲ್ಲಿ ನಡೆದ 41 ನೇ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂತಹ ಹಿರಿಯ ವಯಸ್ಸಿನಲ್ಲಿ ಕೂಡ ಅತ್ಯುತ್ತಮ ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಉಳಿಸಿದ್ದಾರೆ ಯಾರೇ ಆಗಲಿ ಯಾವುದೇ ಕ್ರೀಡೆಗಳಲ್ಲಿ ಭಾಗವಹಿಸುವವರಿಗೆ ಅನುಕೂಲವಾಗುವಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದರೆ ಅವರು ಮತ್ತಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ನಾನು ಕೂಡ ಒಬ್ಬ ಕ್ರೀಡಾಪಟುವಾಗಿದ್ದೆ ಇವತ್ತು ರಾಜಕಾರಣ ವ್ಯವಹಾರದಿಂದ ಕ್ರೀಡೆಯಿಂದ ದೂರ ಉಳಿಯಬೇಕಾಯಿತು ಜಿಲ್ಲೆಯಲ್ಲಿ ಯಾರೇ ಕ್ರೀಡಾಪಟುಗಳು ಕ್ರೀಡೆಗಳಲ್ಲಿ ಭಾಗವಹಿಸಲು ವಿದೇಶಕ್ಕೆ ಹೋಗುವರಿಗೆ ನನ್ನಿಂದ ಸಹಾಯ ಇದ್ದೇ ಇರುತ್ತದೆ ನಿಮ್ಮ ಜಿಲ್ಲಾ ಸಂಘದ ಕ್ರೀಡಾ ಚಟುವಟಿಕೆಗಳಿಗೆ ಜಾಗ ಬೇಕು ಎಂದು ಬೇಡಿಕೆ ಇಟ್ಟಿದ್ದೀರಾ ಜಾಗವನ್ನು ಆದಷ್ಟು ಬೇಗ ಕೊಡಿಸುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ ನೀವು ಯಾವುದಾದರೂ ಸರಕಾರಿ ಜಾಗ ಇದ್ದರೆ ಕೂಡಲೇ ತಹಶಿಲ್ದಾರ್ ಗಮನಕ್ಕೆ ತನ್ನಿ ಜೊತೆಗೆ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಸಂಪೂರ್ಣವಾಗಿವಾಗಿ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್ ಮಾತನಾಡಿ ಕ್ರೀಡೆ ಮನುಷ್ಯನ ಆರೋಗ್ಯವಾಗಿ ದೈಹಿಕವಾಗಿ ಮಾನಸಿಕವಾಗಿ ಬಲಾಢ್ಯ ಮಾಡುತ್ತದೆ ಯಾವುದೇ ಮನುಷ್ಯ ಹೆಚ್ಚು ಸಕ್ರಿಯವಾಗಿರಲೂ ಒಂದಲ್ಲ ಒಂದು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಜಿಲ್ಲೆಯಲ್ಲಿ ನಡೆಯಲಿರುವ ಯಾವುದೇ ಕ್ರೀಡಾ ಚಟುವಟಿಕೆಗಳಿಗೆ ಪಕ್ಷತೀತವಾಗಿ ಬೆಂಬಲಿಸುವ ಮೂಲಕ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಯಾವುದೇ ಕ್ರೀಡೆಯಲ್ಲಿ ಭಾಗವಹಿಸಿದರು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಅವಾಗ ಮಾತ್ರವೇ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ವಿ.ಕೃಷ್ಣಾರೆಡ್ಡಿ ಮಾತನಾಡಿ ಕ್ರೀಡೆಗಳಲ್ಲಿ ಭಾಗವಹಿಸಲು ಮಕ್ಕಳನ್ನು ಮತ್ತು ಸಾರ್ವಜನಿಕರನ್ನು ಕ್ರೀಡಾಪಟುಗಳು ಪ್ರೇರೇಪಿಸಬೇಕು. ಅದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕಾರಣವಾಗುತ್ತದೆ ಅವರು ಎಲ್ಲರೂ ರಾಷ್ಟ್ರ ನಿರ್ಮಾಣದಲ್ಲಿ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಡಿಸೆಂಬರ್ ನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಯಾವುದೇ ಸಮಸ್ಯೆಗಳು ಇಲ್ಲದ ರೀತಿಯಲ್ಲಿ ಹಿಂದೆ ಯಾವ ಜಿಲ್ಲೆಯಲ್ಲಿ ಮಾಡಿರದ ರೀತಿಯಲ್ಲಿ ಮಾದರಿ ಕ್ರೀಡಾಕೂಟವನ್ನು ನಡೆಸಲಾಗುತ್ತದೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಮಾರಪ್ಪ ಮಾತನಾಡಿ ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಕೊರತೆ ಇಲ್ಲ ಅವರಿಗೆ ಮಾರ್ಗದರ್ಶನ ಕೊರತೆ ಇದೆ ಅದನ್ನು ಸರಕಾರ ಜಿಲ್ಲಾಡಳಿತ ಗಮನಹರಿಸಬೇಕಾಗಿದೆ ಎಂದು ಕ್ರೀಡಾಪಟುಗಳ ಪರವಾಗಿ ಸಂಬಂಧಪಟ್ಟವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೋಮುಲ್ ಮಾಜಿ ನಿರ್ದೇಶಕ ರಾಮಕೃಷ್ಣೇಗೌಡ, ಸಹಕಾರಿ ಯೂನಿಯನ್ ನಿರ್ದೇಶಕ ಚಂಜಿಮಲೆ ರಮೇಶ್, ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ ಉಪಾಧ್ಯಕ್ಷರಾದ ಮುನಿಕೃಷ್ಣ, ಲೋಕೇಶ್, ಖಜಾಂಜಿ ಸುರೇಶ ಬಾಬು, ಜಂಟಿ ಕಾರ್ಯದರ್ಶಿ ಆಂಜನೇಯರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಅಸೋಸಿಯೇಷನ ಇತರೆ ಸದಸ್ಯರು ಮತ್ತು ಕ್ರೀಡಾಪಟುಗಳ ಕುಟುಂಬಸ್ಥರು ಇತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!