• Fri. May 3rd, 2024

PLACE YOUR AD HERE AT LOWEST PRICE

ಬೆಂಗಳೂರು:ಹಿಂದಿನ ಸರ್ಕಾರಗಳ ಪ್ರಮುಖ 4 ಹಗರಣಗಳಾದ ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿನ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಕುರಿತು ಮಾಧ್ಯಮ ಹೇಳಿಕೆ ನೀಡಿ, ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ|| ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ.

ಕೊಟ್ಟ ಮಾತಿನಂತೆ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ಕೊಡಲಾಗುವುದು.

ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ.ಐ ಮೊದಲಿಗೆ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಪತ್ರ ಬರೆಸಿದ್ದಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರವಲ್ಲದೆ ಇನ್ನೇನು?

ನವದೆಹಲಿಗೆ ಭೇಟಿ ನೀಡಿದಾಗ ಎಫ್.ಸಿ.ಐ ನವರು ಅಕ್ಕಿ ನೀಡಲು ನಿರಾಕರಿಸಿರುವ ವಿಚಾರವನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಕೇಂದ್ರದಿಂದ ಬಡವರ ಮೇಲೆ ಗದಾ ಪ್ರಹಾರ ಮಾಡಲಾಗಿದೆ. ಅನ್ನಭಾಗ್ಯವನ್ನು ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ?

ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ, ಎನ್.ಸಿ.ಸಿ.ಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು.

ನಮ್ಮ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ? ಬಡವರು ತಿನ್ನುವ ಅನ್ನದ ವಿಷಯದಲ್ಲಿ ರಾಜಕೀಯ ಗಿಮಿಕ್ ಮಾಡಲು ಹೋಗಬಾರದು. ಬಿಜೆಪಿಯವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ.

2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು.

2.50 ಲಕ್ಷ ಖಾಲಿ ಹುದ್ದೆಗಳನ್ನು ಒಂದೇ ಸಲಕ್ಕೆ ಭರ್ತಿ ಮಾಡಲಾಗಲ್ಲ. ಹಂತ ಹಂತವಾಗಿ ಭರ್ತಿ ಮಾಡುತ್ತೇವೆ. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ.  ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

(ನಮ್ಮಸುದ್ದಿ.ನೆಟ್) nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!