• Fri. May 3rd, 2024

ಕೋಲಾರ ಜಿಲ್ಲೆಗೆ ವಿದರ್ಭ ಪ್ಯಾಕೇಜ್ ಘೋಷಣೆಗೆ ರೈತಸಂಘ ಆಗ್ರಹ ಪ್ರತಿಭಟನೆ-ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

PLACE YOUR AD HERE AT LOWEST PRICE

ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ ವಿದರ್ಭ ಪ್ಯಾಕೇಜ್ ಘೊಷಣೆ ಮಾಡಬೇಕೆಂದು ಆಗ್ರಹಿಸಿ ಸೋಮವಾರ ರೈತ ಸಂಘದಿಂದ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ,ನಾರಾಯಣಗೌಡ ಮನವಿ ಸಲ್ಲಿಸಿ ಮಾತನಾಡಿ, ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಜಿಲ್ಲೆಯನ್ನು ಪ್ರತಿ ಸರ್ಕಾರಗಳು ಉಸ್ತುವಾರಿ ನೇಮಕಾತಿಯಿಂದ ಹಿಡಿದು ಬಜೆಟ್‌ನಲ್ಲಿ ವಿಶೇಷ  ಅನುಧಾನ ನೀಡುವವರೆಗೂ ವಂಚಿಸುತ್ತಲೇ ಇವೆ, ಸರ್ಕಾರದ ಮೇಲೆ ಒತ್ತಡ ಹಾಕಿ ಅನುದಾನ ತರುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ನಕಲಿ ಬಿತ್ತನೆ ಬೀಜ,ರಸಗೊಬ್ಬರ ,ಔಷಧಿಗಳ ಮಾರಾಟ ದಂದೆಯಿಂದ ರೈತರು ಲಕ್ಷ ಲಕ್ಷ ಬಂಡವಾಳ ಕೃಷಿಯಲ್ಲಿ ನಷ್ಟ ಹೊಂದುತ್ತಿದ್ದರೆ ಮಾರುಕಟ್ಟೆಯ ಜಾಗದ ಸಮಸ್ಯೆ ಮಾವು, ಟೊಮೋಟೋ, ರೇಷ್ಮೆ, ಬೆಲೆ ಕುಸಿತದಿಂದ ಕಂಗಲಾಗಿರುವ ರೈತರ ನೆರವಿಗೆ ಬಜೆಟ್‌ನಲ್ಲಿ ಸರ್ಕಾರ ನಿಲ್ಲಬೇಕಾಗಿದೆ ಎಂದು ಒತ್ತಾಯಿಸಿದರು.

ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣ, ಯರಗೋಳ್ ಉದ್ಘಾಟನೆ, ಗಡಿಭಾಗದ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಮತ್ತು ಕೃಷಿ ಆಧಾರಿತ ಮಾವು ಸಂಸ್ಕರಣ ಘಟಕಗಳ ಸ್ಥಾಪನೆಗೆ ಬಜೆಟ್‌ನಲ್ಲಿ ಅನುದಾನ ಬಿಡುಗಡೆಗೆ ಒತ್ತಾಯಿಸಿದರು.

ರೈತಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಮಹಿಳಾ ಸಮಾವೇಶದಲ್ಲಿ ನೀಡಿರುವ ಮಾತಿನಂತೆ ಸಹಕಾರ ಸಂಘಗಳ ಮಹಿಳೆಯರ  ಸಾಲ ಮನ್ನಾ ಮಾಡಬೇಕು. ರಸ್ತೆ, ಕೆರೆ , ರಾಜಕಾಲುವೆ ಅಭಿವೃದ್ದಿಗೆ ಆದ್ಯತೆ ನೀಡುವ ಜೊತೆಗೆ ಒತ್ತುವರಿ ತೆರೆವುಗೊಳಿಸಲು ವಿಶೇಷ ಕಾನೂನು ಜಾರಿ ಮಾಡಬೇಕೆಂದರು.

ಕೃಷಿ ಭಾಗ್ಯ, ಪಶುಭಾಗ್ಯ ಯೋಜನೆಗಳನ್ನು ಮುಂದುವರೆಸಿ ಆಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವ ಜೊತೆಗೆ  ಜಿಲ್ಲೆಗೆ ಸರ್ಕಾರಿ ಮೆಡಿಕಲ್  ಕಾಲೇಜು ಮಂಜೂರು ಮಾಡುವಂತೆ ಮತ್ತು ಚೆನ್ನೈ ಕಾರಿಡಾರ್ ಅಭಿವೃದ್ದಿಗೆ ಭೂಮಿ ಕಳೆದುಕೊಂಡಿರುವ ರೈತರ ಮರಗಿಡಗಳ ಪರಿಹಾರ ವಿತರಣೆ ಮಾಡಲು ಸೂಚನೆ ಮಾಡಬೇಕೆಂದು ಆಗ್ರಹಿದರು.

ಒತ್ತುವರಿದಾರರಿಂದ ಸರ್ಕಾರಿ ಆಸ್ತಿಗಳನ್ನು ಉಳಿಸಲು ಇರುವ ಭೂಕಬಳಿಕೆ ನ್ಯಾಯಾಲಯದ ವ್ಯಾಪ್ತಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕು,  ಕೈಗಾರಿಕೆಗಳಲ್ಲಿ ಸ್ಥಳಿಯರಿಗೆ ಉದ್ಯೋಗ ನೀಡಲು ಕಾನೂನು ಜಾರಿ ಮಾಡುವ ಜೊತೆಗೆ ಎ.ಪಿ.ಎಂ.ಸಿ, ಭೂ ಸುದಾರಣೆ ಕಾಯ್ದೆ, ವಿದ್ಯುತ್ ಕಾಯ್ದೆಯನ್ನು ವಾಪಸ್ ಪಡೆದು ಎ,ಪಿ,ಎಂ,ಸಿ ಅಭಿವೃದ್ದಿಗೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ರಾ.ಪ್ರ.ಕಾ ಪಾರುಕ್‌ಪಾಷ, ವಕ್ಕಲೇರಿ ಹನುಮಯ್ಯ, ಕೆ.ಇ.ಬಿ ಚಂದ್ರು, ಕಿರಣ್, ಮಂಜುಳಾ, ಕಾವ್ಯ, ಮಾ.ತಾ.ಅ ಯಲ್ಲಪ್ಪ, ನಟರಾಜ್, ಗೋವಿಂದಪ್ಪ, ರಾಮಸಾಗರ ವೇಣು, ಸುರೇಶ್‌ಬಾಬು , ಮಂಗಸಂದ್ರ ತಿಮ್ಮಣ್ಣ, ಬಂಗಾರಿ ಮಂಜು, ಸುನಿಲ್‌ಕುಮಾರ್, ಭಾಸ್ಕರ್, ರಾಜೇಶ್, ವಿಜಯ್‌ಪಾಲ್, ಹೆಬ್ಬಣಿ ಆನಂದರೆಡ್ಡಿ, ವಿಶ್ವನಾಥ್, ಯಾರಂಘಟ್ಟ ಗೀರೀಶ್, ಚಾಂದ್‌ಪಾಷ, ಜಾವೇದ್  ಹರೀಶ್, ಅಪ್ಪೋಜಿರಾವ್ ಮುಂತಾದವರಿದ್ದರು.

 

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!