• Fri. May 3rd, 2024

PLACE YOUR AD HERE AT LOWEST PRICE

ಬಂಗಾರಪೇಟೆ:ನಾಡಪ್ರಭು ಕೆಂಪೇಗೌಡರವರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜನಾಗಿದ್ದು ದೂರ ದೃಷ್ಟಿಯ ಚಿಂತಕರಾಗಿದ್ದರು. ಬೆಂಗಳೂರನ್ನು ಕಟ್ಟಿ ಬೆಳೆಸಿದ ಅತ್ಯಂತ ಧೈರ್ಯವಂತ ಜೊತೆಗೆ  ನಾಡನ್ನು ಕಟ್ಟಿ ವಿಶ್ವ ಇತಿಹಾಸ ಪುಟದಲ್ಲಿ ಅಜರಾಮರರಾಗಿದ್ದಾರೆ ಎಂದು ಶಾಸಕ ಎಸ್.ಎನ್.ನರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಅವರು ಪಟ್ಟಣದ ಕೋಲಾರ ರಸ್ತೆಯ ಕೆಂಪೇಗೌಡ ವೃತ್ತದಲ್ಲಿ ನಿರ್ಮಿಸಿರುವ ಕೆಂಪೇಗೌಡರ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ತಾಲೂಕು ಆಡಳಿತ ಕಚೇರಿ ಭೀಮಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 514ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇತ್ತೀಚಿಗೆ ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡುತ್ತಿರುವುದು ಸಮಂಜಸವಲ್ಲ. ಕೆಂಪೇಗೌಡರು ಎಲ್ಲಾ ಜಾತಿ, ಧರ್ಮ, ಮತ, ಪಂಥಗಳ ಎಲ್ಲೆಯನ್ನು ಮೀರಿ ನಾಡಿನ ಜನತೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಹರಿಕಾರರು. ಕೆಂಪೇಗೌಡರು ಬೆಂಗಳೂರಿನಲ್ಲಿ ಅನೇಕ ಉದ್ಯಾನವನಗಳನ್ನು, ದೇವಸ್ಥಾನಗಳನ್ನು, ಕೆರೆ ಕಟ್ಟೆಗಳನ್ನು ನಿರ್ಮಿಸಿದ್ದರು.

ಇದರೊಟ್ಟಿಗೆ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಮಾರುಕಟ್ಟೆಗಳನ್ನು ಸೃಷ್ಟಿಸಿದರು. ಇಂದು ಅವರು ನಿರ್ಮಿಸಿದ ಬೆಂಗಳೂರು ವಿಶ್ವದ ಇತಿಹಾಸ ಪುಟಗಳಲ್ಲಿ ಪ್ರಜ್ವಲಿಸುತ್ತಿದೆ. ಕೆಂಪೇಗೌಡರ ಧೈರ್ಯ ಸಾಹಸ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಆ ಮೂಲಕ ನವ ಭಾರತ ನಿರ್ಮಾಣದಲ್ಲಿ ಭಾಗಿಯಾಗಿ ನಿಲ್ಲಬೇಕು ಎಂದರು.

ತಹಸಿಲ್ದಾರ್ ರಶ್ಮಿ ಮಾತನಾಡಿ, ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಮಾಂತರಾಗಿ ಕಲೆ ಸಾಹಿತ್ಯ ಸಂಸ್ಕೃತಿಯ ಬಗ್ಗೆ ಅಪಾರವಾದ ಕಾಳಜಿ ಹೊಂದಿದವರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರನ್ನು ಸಹ ಅಭಿವೃದ್ಧಿಪಡಿಸಿ ಹೊಸ ನಾಡನ್ನು ಕಟ್ಟುವ ಕನಸು ಕಂಡಿದ್ದರು. ಇದಕ್ಕೆ ಪೂರಕ ಎಂಬಂತೆ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ದ್ವಾರಗಳನ್ನು ನಿರ್ಮಿಸಿದರು. ಕೃಷಿ ಹಾಗೂ ನೀರಿನ ಅಗತ್ಯ  ಮನಗಂಡು ಹಲವು ಕೆರೆಗಳನ್ನು ನಿರ್ಮಿಸಿದರು.

150ಕ್ಕೂ ಹೆಚ್ಚು ಕಲ್ಯಾಣಿಗಳನ್ನು ನಿರ್ಮಿಸಿದ್ದರು. ರಸ್ತೆಯ ಎರಡು ಬದಿಗಳಲ್ಲಿ ಹಣ್ಣು ಹಂಪಲುಗಳನ್ನು ಕೊಡುವ ಮರಗಿಡಗಳನ್ನು ಬೆಳೆಸಿದರು. ಇದರಿಂದ ಪ್ರಯಾಣ ಮಾಡುವವರಿಗೆ ಸಹಕಾರಿಯಾಗುತ್ತಿತ್ತು.  ಲಾಲ್ ಬಾಗ್ ಉದ್ಯಾನವನವನ್ನು ಒಳಗೊಂಡಂತೆ ನಾಲ್ಕು ಉದ್ಯಾನವನಗಳನ್ನು ನಿರ್ಮಿಸಿದರು.   ಹಿಂದೂ ಸಂಸ್ಕೃತಿಯ ಉಳಿವಿಗಾಗಿ ಕೆಂಪೇಗೌಡರು  ದೇವಾಲಯಗಳ ನಿರ್ಮಾಣ, ಹಳೆಯ ದೇವಾಲಯಗಳ ಜೀರ್ಣೋದ್ದಾರ ಕಾರ್ಯಗಳನ್ನು ಮಾಡಿದ್ದರು.

ಸ್ವತಃ ಭೈರವೇಶ್ವರನ ಪರಮಭಕ್ತರಾಗಿದ್ದ ಕೆಂಪೇಗೌಡರು ನಿರ್ಮಿಸಿರುವ ಶಿವನ ದೇವಾಲಯಗಳು ಬೆಂಗಳೂರಿನ ಸುತ್ತಮುತ್ತ ಕಾಣಬಹುದಾಗಿದೆ. ಜಾತ್ಯಾತೀತ ರಾಜರಾಗಿದ್ದ ಕೆಂಪೇಗೌಡರು ಮತ್ತು ಅವರ ವಂಶಸ್ಥರು ಜಾತಿಮತ ಭೇದವೆಣಿಸದೆ ಎಲ್ಲ ವರ್ಗದ ಜನರಿಗೂ ತಮಗಿಷ್ಟವಾದ ದೇವಾಲಯಗಳನ್ನು ನಿರ್ಮಿಸಲು ಸಹಾಯ ಮಾಡಿದ್ದರು ಎಂಬುದಕ್ಕೆ ನಿದರ್ಶನಗಳು ಸಾಕಷ್ಟಿವೆ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಜಿ.ಎನ್.ಚಲಪತಿ. ಪೊಲೀಸ್ ನಿರೀಕ್ಷಕ ಟಿ.ಸಂಜೀವರಾಯಪ್ಪ. ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ. ಜಿಲ್ಲಾ ಪಂಚಾಯಿತಿ ಎಇಇ ಶೇಷಾದ್ರಿ. ತಾಪಂ ಮಾಜಿ ಅದ್ಯಕ್ಷ ಮಹದೇವ್. ಸರ್ಕಾರಿ ನೌಕರರ ಸಂಘದ ಅಪ್ಪಯ್ಯಗೌಡ. ಮುಖಂಡರಾದ ಎಚ್.ಕೆ.ನಾರಾಯಣಸ್ವಾಮಿ, ರಾಕೇಶ್ ಗೌಡ, ರಾಮೇಗೌಡ, ವೆಂಕಟಾಚಲಪತಿ, ಸಂದೀಪ್ ಮೊದಲಾದವರಿದ್ದರು.

(ನಮ್ಮಸುದ್ದಿ.ನೆಟ್) nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!